ಕನ್ನಡ ಬರುತ್ತಾ? ಎಂದು ರಾಷ್ಟ್ರಪತಿಗೆ ಕೇಳಿದ ಸಿಎಂ; ಅಚ್ಚರಿ ಉತ್ತರ ಕೊಟ್ಟ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲಿ ನಡೆದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಅವರನ್ನು ಸ್ವಾಗತಿಸಿ, ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾಷಣದ ವೇಳೆ ಸಿದ್ದರಾಮಯ್ಯ ಅವರು ದ್ರೌಪದಿ ಮುರ್ಮು ಅವರಿಗೆ "ನಿಮಗೆ ಕನ್ನಡ ಬರುತ್ತಾ?" ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಾಷ್ಟ್ರಪತಿಗಳು ಉತ್ತರಿಸಿದ್ದು, ವಿಡಿಯೋ ವೈರಲ್ ಆಗಿದೆ.
ಮೊದಲು ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ ಅವರು ನಿಮಗೆ ಕನ್ನಡ ಬರುತ್ತಾ ಎಂದು ಮುರ್ಮು ಅವರಿಗೆ ಕೇಳಿದರು. ನಂತರ ನಾನು ಕನ್ನಡದಲ್ಲೇ ಮಾತನಾಡುತ್ತೇನೆ ಎಂದು ಹೇಳಿದರು. ಸಿಎಂ ಭಾಷಣದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆ ಪ್ರಶ್ನೆಗೆ ಅಚ್ಚರಿ ಉತ್ತರ ನೀಡಿದ್ದಾರೆ. ಕನ್ನಡ ನನ್ನ ಮಾತೃಭಾಷೆ ಅಲ್ಲದಿದ್ದರೂ, ನನ್ನ ದೇಶದ ಎಲ್ಲ ಭಾಷೆಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ ಎಂದು ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ನಾನು ಹೇಳಲು ಬಯಸುತ್ತೇನೆ ಎಂದಿದ್ದಾರೆ.

ಪ್ರತಿ ಭಾಷೆಯ ಬಗ್ಗೆಯೂ ನನಗೆ ಅಪಾರ ಗೌರವವಿದೆ. ಭಾರತದಲ್ಲಿ ಎಷ್ಟು ಭಾಷೆಗಳಿವೆ? ಎಷ್ಟು ಸಂಸ್ಕೃತಿಗಳಿವೆ? ಎಷ್ಟು ಪರಂಪರೆಗಳಿವೆ? ಅವೆಲ್ಲವೂ ನನಗಿಷ್ಟ. ಕನ್ನಡ ನನಗೆ ಸ್ವಲ್ಪ ಸ್ವಲ್ಪ ಅರ್ಥವಾಗುತ್ತೆ. ಪ್ರತಿಯೊಬ್ಬರೂ ತಮ್ಮ ಭಾಷೆಯನ್ನ ಜೀವಂತವಾಗಿಡಲು, ಅವರ ಸಂಪ್ರದಾಯಗಳು, ಸಂಸ್ಕೃತಿಯನ್ನ ಸಂರಕ್ಷಿಸಲು ಶ್ರಮಿಸಬೇಕು ಎಂದು ಹೇಳಿದ್ದಾರೆ. ಆ ದಿಕ್ಕಿನಲ್ಲಿ ಎಲ್ಲರೂ ಮುಂದುವರಿಯಬೇಕು. ನಾನು ಖಂಡಿತವಾಗಿಯೂ ಕನ್ನಡವನ್ನು ನಿಧಾನವಾಗಿ ಕಲಿಯಲು ಪ್ರಯತ್ನಿಸುತ್ತೇನೆ ಎಂದು ರಾಷ್ಟ್ರಪತಿ ಮುರ್ಮು ನಗುತ್ತಲೇ ಉತ್ತರಿಸಿದ್ದಾರೆ.
ಮಾತು ಬಾರದ, ಕಿವಿ ಕೇಳಿಸದ 3.3 ಲಕ್ಷ ಮಂದಿ ಇದ್ದಾರೆ
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ. ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂತಹ ಸಂಸ್ಥೆ ನಮ್ಮ ಮೈಸೂರಿನಲ್ಲಿರುವುದು, ವಜ್ರ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ.
ಮನುಷ್ಯರಿಗೆ ದೇಹದ ಎಲ್ಲಾ ಅಂಗಗಳು ಮುಖ್ಯ. ಕಣ್ಣು, ಕಿವಿಗಳು ಅತಿ ಮುಖ್ಯವಾದ ಅಂಗಗಳು. ದೃಷ್ಟಿ ಮತ್ತು ಶಬ್ಧಗಳ ಗ್ರಹಿಕೆಯು ಮನುಷ್ಯರ ಮಾತುಗಳನ್ನು ರೂಪಿಸುತ್ತವೆ ಹಾಗೂ ನಿಯಂತ್ರಿಸುತ್ತವೆ. 2011ರ ರಾಷ್ಟ್ರೀಯ ಜನಗಣತಿಯ ಪ್ರಕಾರ ರಾಜ್ಯದಲ್ಲಿ 3.3 ಲಕ್ಷ ಜನರು ಮಾತು ಬಾರದವರು ಹಾಗೂ ಕಿವಿ ಕೇಳಿಸದವರಿದ್ದಾರೆ. ಅಸಹಾಯಕರು ನಮಗೆ ಅಂಕಿ ಸಂಖ್ಯೆಗಳಲ್ಲ, ಜೀವಂತ ಮನುಷ್ಯರ ನಿರಂತರ ಕಷ್ಟದ ಉದಾಹರಣೆಗಳು. ಹಾಗಾಗಿ ಈ ಸಮಸ್ಯೆಯಿರುವವರನ್ನು ಅತ್ಯಂತ ಎಚ್ಚರಿಕೆಯಿಂದ ಕಾಪಾಡಿಕೊಳ್ಳುವುದು ನಾಗರಿಕ ಸಮಾಜದ ಹಾಗೂ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ ಸಂಸ್ಥೆಗೆ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದ್ದಾರೆ.
-
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Toxic: ಟಾಕ್ಸಿಕ್ ನೀವೆಲ್ಲ ಅಂದುಕೊಂಡಂತೆ ಗ್ಯಾಂಗ್ಸ್ಟರ್ ಸಿನಿಮಾ ಅಲ್ಲ: ಕೊನೆಗೂ ಸೀಕ್ರೇಟ್ ರಿವೀಲ್ ಮಾಡಿದ ನಟ ಯಶ್ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್












Click it and Unblock the Notifications