ಫೆಬ್ರವರಿ 19 ರಿಂದ ಅಮಿತ್ ಶಾ ರಾಜ್ಯ ಕರಾವಳಿ ಪ್ರವಾಸ?

ಮಂಗಳೂರು, ಫೆಬ್ರವರಿ 6: ವಿಧಾನಸಭಾ ಚುನಾವಣೆಯ ಕಾವು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರತೊಡಗಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದು ಜಿದ್ದಾಜಿದ್ದಿಯ ಚುನಾವಣೆಯ ಪ್ರಚಾರಕ್ಕೆ ಅಬ್ಬರದ ಮುನ್ನುಡಿ ಬರೆದು ತೆರಳಿದ್ದಾರೆ. ಬಿಜೆಪಿಯ ಚಾಣಾಕ್ಯ ಎಂದೇ ಗುರುತಿಸಲಾಗುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈಗಾಗಲೇ ರಾಜ್ಯದಲ್ಲಿ ತಮ್ಮ ಚುನಾವಣಾ ತಂತ್ರಗಾರಿಕೆ ಆರಂಭಿಸಿದ್ದಾರೆ.

'ಕಾಂಗ್ರೆಸ್ ಮುಕ್ತ ಕರ್ನಾಟಕ' ನಿರ್ಮಾಣ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಣತೊಟ್ಟಿದ್ದಾರೆ. ರಾಜ್ಯ ಬಿಜೆಪಿ ನಾಯಕರನ್ನು ಬಡಿದೆಬ್ಬಿಸಿ ಚುನಾವಣಾ ಚಟುವಟಿಕೆ ಚುರುಕುಗೊಳಿಸಲು ಸ್ವತಃ ಅಮಿತ್ ಶಾ ಅವರೇ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಅವರೀಗ ಬಿಜೆಪಿಯ ಭದ್ರಕೋಟೆಯಾಗಿದ್ದ ಕರಾವಳಿ ಜಿಲ್ಲೆಗಳನ್ನು ಮತ್ತೆ ವಶ ಪಡಿಸಿಕೊಳ್ಳಲು ತಂತ್ರ ರೂಪಿಸಿದ್ದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

President of the BJP Amit Shah to visit Mangaluru on Feb 19 ?

ಫೆ. 19 ರಿಂದ ಮೂರು ದಿನಗಳ ಕಾಲ ರಾಜ್ಯ ಕರಾವಳಿ ಜಿಲ್ಲೆಗಳಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಫೆ. 19ರಂದು ಮಂಗಳೂರು, ಫೆ. 20ರಂದು ಉಡುಪಿ ಮತ್ತು ಫೆ. 21ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲು ಅಮಿತ್ ಶಾ ಚಿಂತನೆ ನಡೆಸಿದ್ದಾರಂತೆ. ಆದರೆ ಅಮಿತ್ ಶಾ ಅವರ ಕರಾವಳಿ ಭೇಟಿ ಇನ್ನೂ ಖಚಿತಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+