ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್‌ ಸೇವೆಗಳ ಶುಲ್ಕ ನಿಗದಿ

ಬೆಂಗಳೂರು, ಫೆಬ್ರವರಿ 05: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್‌ ಸೇವೆಗಳ ಶುಲ್ಕ ನಿಗದಿ ಕುರಿತು ಆದೇಶವನ್ನು ಹೊರಡಿಸಿದೆ. ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್‌ ಸೇವಗಳಿಗೆ ಶುಲ್ಕ ನಿಗದಿಪಡಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಟುಂಬ ಕಲ್ಯಾಣ) ಆದೇಶವನ್ನು ಹೊರಡಿಸಿದ್ದಾರೆ. ವಿವಿಧ ಸರ್ಕಾರಿ ಆದೇಶಗಳನ್ನು ಉಲ್ಲೇಖಿಸಲಾಗಿದೆ.

Price Fix For City And MRI Scan In District Hospitals

2016-17ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ-125ರಲ್ಲಿ ಘೋಷಿಸಿರುವಂತ ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್‌ ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಪಡೆಯಲು ಅನುಮೋದನೆ ನೀಡಲಾಗಿದೆ.

14 ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ ಅನ್ನು ಪಿಪಿಪಿ ಮಾದರಿಯಲ್ಲಿ ಪ್ರತಿ ಸಿಟಿ ಸ್ಕ್ಯಾನ್‌ಗೆ ರೂ. 1,550 ದರದಲ್ಲಿ ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್ ಅನ್ನು ಪ್ರತಿ ಸ್ಕ್ಯಾನ್‌ಗೆ ರೂ. 3,000 ದರದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ಆದೇಶಗಳಲ್ಲಿ ಹೊಸದಾಗಿ ರಾಜ್ಯದ 15 ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್ ಸೇವೆಗಳನ್ನು ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ ಸೇವೆಗಳನ್ನು ಸರ್ಕಾರದ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ರೂ. 4741 ಕೋಟಿ ವೆಚ್ಚದಲ್ಲಿ 7 ವರ್ಷದ ಅವಧಿಗೆ ಟೆಂಡರ್ ಆಹ್ವಾನಿಸಿ ಕ್ರಮ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ದಿನಾಂಕ 23.022024ರ ತಿದ್ದುಪಡಿ ಆದೇಶದಲ್ಲಿ 7 ವರ್ಷದ ಅವಧಿಗೆ ರೂ. 222.28 ಕೋಟಿಗಳ ವೆಚ್ಚದಲ್ಲಿ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಎಂಆರ್‌ಐ ಸ್ಕ್ಯಾನ್‌ ಸೇವೆಗಳಗೆ ದರ ನಿಗದಿಪಡಿಸುವ ಸಂಬಂಧವಾಗಿ ನಿರ್ದೇಶಕರು, ಆಕುಕ ಸೇವೆಗಳು ಇವರ ಅಧ್ಯಕ್ಷತೆಯಲ್ಲಿ ದಿನಾಂಕ 8.07.2024ರಂದು ನಡೆದ ಸಮಿತಿಯು NFDC ಮಾರ್ಗಸೂಚಿಗಳನ್ವಯ ಪರಿಶೀಲಿಸಿ 7 ಮತ್ತು ಎಂಆರ್‌ಐ ಸ್ಕ್ಯಾನ್‌ ಸೇವೆಗಳನ್ನು ಒದಗಿಸುವ ಸಂಬಂಧವಾಗಿ ಕೆಲವೊಂದು ಶಿಫಾರಸ್ಸುಗಳನ್ನು ನೀಡಿದ್ದು, ಇದರನ್ವಯ ಆರುಕ ಇಲಾಖೆಯು ಪಿಪಿಪಿ ಮಾದರಿಯಲ್ಲಿ ಒದಗಿಸುತ್ತಿರುವ ಸಿಟಿ/ ಎಂಆರ್‌ಐ ಸ್ಕ್ಯಾನ್‌ ಸೇವೆಗಳಿಗೆ BPL ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ನೀಡಲು ಹಾಗೂ APL ಕಾರ್ಡ್ ಹೊಂದಿರುವ ರೋಗಿಗಳಿಗೆ ಶೇಕಡ 70ರಷ್ಟು ಶುಲ್ಕ, ವಿಧಿಸುವ ಕುರಿತಂತೆ ಆದೇಶ ಹೊರಡಿಸುವಂತೆ ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರು ಕೋರಿರುತ್ತಾರೆ.

ಸರ್ಕಾರದ ಆದೇಶ: ಪ್ರಸ್ತಾವನೆಯನ್ನು ಪರಿಶೀಲಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್‌ ಸೇವೆಗಳಿಗೆ PHH ಕಾರ್ಡ್‌ ಹೊಂದಿರುವ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಹಾಗೂ ಇತರರಿಗೆ ಶೇಕಡ 70ರಷ್ಟು ಶುಲ್ಕ ವಿಧಿಸಲು ಆದೇಶಿಸಲಾಗಿದೆ.

ಈ ಆದೇಶವನ್ನು, ಆರ್ಥಿಕ ಇಲಾಖೆಯ ಟಿಪ್ಪಣಿ ದಿನಾಂಕ 03.09.24ರಲ್ಲಿ ನೀಡಿರುವ ಸಹಮತಿಯ ಅನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+