ಕೆಎಂಎಫ್ನಿಂದ ಜನರಿಗೆ ಗುಡ್ ನ್ಯೂಸ್: ನಂದಿನಿ ಉತ್ಪನ್ನಗಳ ದರ ಇಳಿಕೆ
ಬೆಂಗಳೂರು, ಸೆಪ್ಟೆಂಬರ್ 20: ಕರ್ನಾಟಕದ ಜನತೆಗೆ ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕೆಎಂಎಫ್ ಗ್ರಾಹಕರಿಗೆ GST ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ (ಸೆಪ್ಟೆಂಬರ್ 22) ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೇಂದ್ರ ಸರ್ಕಾರ GST ತೆರಿಗೆಯಲ್ಲಿ ಶೇ. 5 ರಷ್ಟು ಇಳಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

ಕೇಂದ್ರದಿಂದ ಶೇ.12ರಿಂದ 5ಕ್ಕೆ ಜಿಎಸ್ಟಿ ಕಡಿತ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಕೆಎಂಎಫ್ ತನ್ನ ನಂದಿನಿ ಹಾಲಿನ ಕೆಲ ಉತ್ಪನ್ನಗಳ ದರ ಇಳಿಕೆ ಮಾಡಿದೆ. ಸೋಮವಾರದಿಂದ ಹೊಸ ದರ ಜಾರಿಗೆ ಕೆಎಂಎಫ್ ಪ್ಲ್ಯಾನ್ ಮಾಡಿದೆ. ಯಾವುದರ ದರ ಎಷ್ಟು ಇಳಿಕೆ ಅನ್ನೋದು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ತುಪ್ಪ, ಬೆಣ್ಣೆ, ಮೊಸರು ಸೇರಿ ನಂದಿನಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರದಲ್ಲಿ ಗಣನೀಯ ಇಳಿಕೆ ಮಾಡಿರುವುದರಿಂದ ಸೋಮವಾರದಿಂದ ಮಾರಾಟ ಬೆಲೆಯೂ ಇಳಿಕೆ ಆಗಲಿದೆ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್ ಈ ಬಗ್ಗೆ ಶುಕ್ರವಾರ ಕೆಎಂಎಫ್ ಅಧಿಕಾರಿಗಳ ಜೊತೆಗೆ ಸುದೀರ್ಘ ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ ಎಂದು ಹೇಳಲಾಗಿದೆ.
ಜಿಎಸ್ ಟಿ ಇಳಿಕೆಯಿಂದ ಮೊಸರಿನ ದರ ಲೀ.4 ರೂ ಇಳಿಕೆಯಾಗಲಿದೆ. ಆದರೆ, ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಎಂಎಫ್ ತಿಳಿಸಿದೆ. ಜಿಎಸ್‌ಟಿ ತೆರಿಗೆ ತಗ್ಗಿರುವುದರಿಂದ ಉತ್ಪಾದನಾ ವೆಚ್ಚದ ಜತೆ ಮತ್ತೊಮ್ಮೆ ಪರಾಮರ್ಶಿಸಿ ಹೊಸ ದರ ಪ್ರಕಟಿಸಲು ಕೆಎಂಎಫ್ ಭರ್ಜರಿ ಸಿದ್ಧತೆ ನಡೆಸಿದೆ. ನಂದಿನಿ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್ಟಿಯನ್ನ ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ದೀಪಾವಳಿ ಹಬ್ಬಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆಪ್ಟೆಂವರ್ 22ರಿಂದ ಜಾರಿಗೆ ಬರಲಿದೆ. ಆ ಮೂಲಕ ಗ್ರಾಹಕರು ಭರ್ಜರಿ ಸಿಹಿ ಸುದ್ದಿ ಸಿಕ್ಕಂತಾಗಿದೆ.












Click it and Unblock the Notifications