ಹಾಲು, ಡಿಸೇಲ್‌ ಬಳಿಕ ನೀರಿನ ದರ ಏರಿಕೆ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್‌ 02: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ದರ ಏರಿಕೆ ಖಂಡಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದ ಮಾಡುತ್ತಿದ್ದಾರೆ. ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ. ಅವರಿಗೆ ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆ ಕಡಿಮೆ ಇದೆ ಎಂದು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಪ್ರತಿ ಲೀಟರ್ ಗೆ ಕನಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ. ಇದಕ್ಕೂ ಮುನ್ನ ಜನರಿಗೂ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕು ಎಂದು ತಿಳಿಸಿದರು.

Price Of Water Needs To Be Increased By At Least 1 Paise Per Liter Says DK Shivakumar

ಇನ್ನು ಕಸದ ವಿಚಾರವಾಗಿ ಹೇಳುವುದಾದರೆ, ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಮಾಡಿದ್ದು, ಬಿಜೆಪಿ ಸರ್ಕಾರ 2022ರಲ್ಲೇ ದುಬಾರಿ ಸೆಸ್ ವಿಧಿಸಿದ್ದರು. ನಾವು ಅದನ್ನು ಕಡಿಮೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜಾಹೀರಾತು ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ನೋವು ನಮಗೂ ಅರಿವಾಗುತ್ತದೆ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Take a Poll

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಟೀಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್‌, ಅವರು ದಿನ ನಿತ್ಯ ಟೀಕೆ ಮಾಡಲಿ. ನಾವು ಜನರಿಗೆ ಉತ್ತಮ ಆಡಳಿತ ನೀಡಬೇಕು. ಕುಮಾರಸ್ವಾಮಿ ಅವರ ಸಹೋದರ ಹಾಲು ಒಕ್ಕೂಟಗಳ ಅಧ್ಯಕ್ಷರು. ಅವರಿಗೂ ಬೆಲೆ ಕಡಿಮೆ ಮಾಡುವ ಅವಕಾಶವಿದೆ. ಅವರು ಹಾಸನದಲ್ಲಿ ರೂ.4 ಕಡಿಮೆ ಮಾಡಿ ಹಾಲು ನೀಡಲಿ ನೋಡೋಣ. ರೈತರು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ನೀಡಲು ಈ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ಕುಡಿಯುವ ನೀರಿಗೆ ಮೊದಲ ಆದ್ಯತೆ

ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದರು. ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೃಷ್ಣಾ ನೀರಿನ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಪತ್ರ ಬರೆದಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಹೌದು, ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ. ಸಚಿವರು, ಶಾಸಕರು, ರೈತಸಂಘದ ಪ್ರತಿನಿಧಿಗಳು ಬಂದು ಬೆಳೆಗೆ ನೀರು ಹರಿಸುವಂತೆ ಮನವಿ ಮಾಡಿದ್ದಾರೆ. ಎರಡನೇ ಬೆಳೆ ಹಾಕಬೇಡಿ ಎಂದರೂ ಈ ಭಾಗದ ರೈತರು ಬೆಳೆ ಹಾಕಿಕೊಂಡಿದ್ದಾರೆ. ಈಗ ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಯ ಜನ ಕಾಲುವೆಗೆ ನೀರು ಹರಿಸುವಂತೆ ಗಲಾಟೆ ಮಾಡುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದವರಿಗೆ ಪತ್ರ ಬರೆಯಲಾಗಿದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುತ್ತೇವೆ. ಈ ವಿಚಾರದಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಕ್ಕಿಂತ ಅಕ್ಕಪಕ್ಕದ ರಾಜ್ಯಗಳು ಪರಸ್ಪರ ಅನುಸರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆ ವ್ಯಾಪ್ತಿಯ 89 ಸಾವಿರ ಎಕ್ಟೇರ್ ಪ್ರದೇಶಕ್ಕೆ ಏ.15ರವರೆಗೆ ನೀರು ಹರಿಸಬೇಕು. ಜಲಾಶಯದಲ್ಲಿ ಕೃಷಿಗಾಗಿ 6.60 ಟಿಎಂಸಿ ನೀರನ್ನು ಕಾಯ್ದಿರಿಸಲಾಗಿದ್ದು ಅದನ್ನು ಹರಿಸಿದರೆ ಮಾತ್ರ ರೈತರಿಗೆ ಅವರು ಬೆಳೆದಿರುವ ಬೆಳೆ ಕೈ ಸೇರುತ್ತದೆ ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಹಣಕಾಸಿನ ವಿಚಾರದಲ್ಲಿ ಎಡವಿದ ಅನುಭವಿ ಸಿಎಂ: ವಿಜಯೇಂದ್ರ

ಬೆಲೆ ಏರಿಕೆ ವಿಚಾರದಲ್ಲಿ ಇವರು ತೆಗೆದುಕೊಳ್ಳುವ ಕೆಟ್ಟ ನಿರ್ಧಾರಗಳಿಗೆ ಕೇಂದ್ರ ಸರಕಾರ ಹೊಣೆ ಎಂದು ದೂರು ಹಾಕುತ್ತಾರೆ. ವಾಸ್ತವಿಕವಾಗಿ ರಾಜ್ಯ ಸರಕಾರ, ಮಾನ್ಯ ಮುಖ್ಯಮಂತ್ರಿಗಳು ತಮ್ಮ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೆ, ವಿಲಿವಿಲಿ ಒದ್ದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಪಕ್ಕದ ತೆಲಂಗಾಣದ ಪರಿಸ್ಥಿತಿ ಏನಾಗಿದೆ? ಎಂದು ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ತೆಲಂಗಾಣದಲ್ಲಿ ಸಂಬಳ ಕೊಡಲೂ ಆಗುತ್ತಿಲ್ಲ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಗ್ಯಾರಂಟಿ ದೇಶಕ್ಕೇ ಮಾದರಿ ಎನ್ನುತ್ತ ಹಿಮಾಚಲ ಪ್ರದೇಶವನ್ನೂ ಮುಳುಗಿಸುವ ಕೆಲಸ ಇವರು ಮಾಡಿದ್ದಾರೆ. ಇವರ ಗ್ಯಾರಂಟಿಗಳು ದೇಶಕ್ಕೇ ಮಾದರಿ ಎಂದು ಹೇಳುತ್ತ, ಮಿಗತೆ ಬಜೆಟ್ ಮಂಡಿಸುವ ಹಾಗೂ ಹಣಕಾಸಿನ ಕೊರತೆ ಇರದ ತೆಲಂಗಾಣದಲ್ಲಿ ಈಗ ಗ್ಯಾರಂಟಿ ಪರಿಣಾಮವಾಗಿ ನೌಕರರು, ಅಧಿಕಾರಿಗಳಿಗೆ ಸಂಬಳ ಕೊಡಲಾಗದ ದುಸ್ಥಿತಿ ಬಂದಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ಇದೆ. ಇದೇ ಗ್ಯಾರಂಟಿಗಳನ್ನು ಅಲ್ಲೂ ಅನುಷ್ಠಾನಕ್ಕೆ ತಂದು ಸರಕಾರಿ ನೌಕರರಿಗೆ ಸಂಬಳ ಕೊಡಲು ದೇವಸ್ಥಾನಗಳಿಂದ ದುಡ್ಡು ವಸೂಲಿ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಏನಾಗಿದೆ? ದೆಹಲಿಯ ಜನತೆ ಅಲ್ಲಿನ ಆಮ್ ಆದ್ಮಿ ಪಕ್ಷ ಕೊಟ್ಟ ಗ್ಯಾರಂಟಿಗಳಿಂದ ಬೇಸತ್ತು ಆ ಸರಕಾರವನ್ನು ಕಿತ್ತೊಗೆದು ಬಿಜೆಪಿಯನ್ನು 27 ವರ್ಷಗಳ ನಂತರ ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+