ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಅರ್ಚಕ
ಬೆಂಗಳೂರು, ಜೂ. 26 : ಅರ್ಚಕರೊಬ್ಬರು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತ ಅರ್ಚಕರು ಉಡುಪಿ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು.
ಆತ್ಮಹತ್ಯೆಗೆ ಶರಣಾದ ಅರ್ಚಕರನ್ನು ಶಿವಶಂಕರ್ ಹೆಬ್ಬಾರ್ (45) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಬಳಿಯ ವಿಶ್ವೇಶ್ವರಯ್ಯ ಬಡಾವಣೆಯ ನೈಸ್ ರಸ್ತೆಗೆ ಸೇರಿದ ಜಮೀನಿನಲ್ಲಿ ತಮ್ಮ ಮಾರುತಿ 800 ಕಾರಿನಲ್ಲಿ ಕುಳಿತು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಹೆಬ್ಬಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ಮಾಗಡಿ ರಂಗನಾಥಸ್ವಾಮಿ ಮುಂದೆ ಅರ್ಚಕರ ಕಿತ್ತಾಟ]

ಮೈಸೂರು-ಮಾಗಡಿ ರಿಂಗ್ ರಸ್ತೆಯಲ್ಲಿರುವ ಮರಿಯಪ್ಪನ ಪಾಳ್ಯದ ಅಮ್ಮ ಆಶ್ರಮದ ರಸ್ತೆಯಲ್ಲಿರುವ ಶನೇಶ್ವರ ದೇವಾಲಯದಲ್ಲಿ ಶಿವಶಂಕರ್ ಹೆಬ್ಬಾರ್ ಅರ್ಚಕರಾಗಿದ್ದರು. ಉಡುಪಿ ಮೂಲದವರಾದ ಹೆಬ್ಬಾರ್ ಪತ್ನಿ ಅನುಪಮಾ, ಪುತ್ರ ದ್ರುವ ಜೊತೆ ಕೆಂಗೇರಿ ಉಪನಗರದಲ್ಲಿ ನೆಲೆಸಿದ್ದರು. [ಮುಜರಾಯಿ ದೇವಾಲಯಕ್ಕೆ ವಾರ್ಷಿಕ 36 ಸಾವಿರ ಅನುದಾನ]
ಘಟನೆ ವಿವರ : ಗುರುವಾರ ಬೆಳಗ್ಗೆ 10.45ರ ಸುಮಾರಿಗೆ ಶಿವಶಂಕರ್ ಹೆಬ್ಬಾರ್ ಮನೆಯಿಂದ ಹೊರಟಿದ್ದರು. ಸ್ನೇಹಿತನನ್ನು ನೋಡಿಕೊಂಡು ಬರುತ್ತೇನೆ ಎಂದು ಹೇಳಿ ಹೊರಟಿದ್ದ ಅವರು 11.30ರ ಸುಮಾರಿಗೆ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ದೇವಾಲಯಗಳ ಆನ್ ಲೈನ್ ಸೇವೆ ಬುಕ್ ಮಾಡುವುದು ಹೇಗೆ?]
ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಸ್ಥಳೀಯರು ಕುಂಬಳಗೋಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ನೋಡುವಾಗ ಶಿವಶಂಕರ್ ಹೆಬ್ಬಾರ್ ಮೃತಪಟ್ಟಿದ್ದರು. ನಂತರ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಯಿತು.
ಶಿವಶಂಕರ್ ಹೆಬ್ಬಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿದ್ದ ಮರದಡಿ ಕಾರಿನ ದಾಖಲೆಗಳನ್ನು ಇಟ್ಟಿದ್ದರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ. [ಚಿತ್ರ : ಐಸಾಕ್ ರಿಚರ್ಡ್, ಮಂಗಳೂರು]
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications