ಮುಜರಾಯಿ ಇಲಾಖೆಯ ಅರ್ಚಕರಿಗೆ ಸರ್ಕಾರದಿಂದ ದಸರಾ ಬಂಪರ್ ಕೊಡುಗೆ!
ಬೆಂಗಳೂರು, ಅ. 12: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ""ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿಮಾ ಯೋಜನೆ ಜಾರಿಗೆ ತರಲಾಗಿದೆ. ಅರ್ಚಕರ ಆರೋಗ್ಯ ರಕ್ಷಣೆಗೆ ವಿನೂತನ ವಿಮಾ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇವೆ. ಅದರಿಂದ ಮುಜರಾಯಿ ಇಲಾಖೆಯ ಸುಮಾರು 37 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಲಿದೆ,'' ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಅರ್ಚರಿಕೆ ಅನ್ವಯವಾಗಲಿದೆ ವೇತನ ಆಯೋಗ!
"ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ಒದಗಿಸುವ ಬೇಡಿಕೆ ಇತ್ತು. ಅದರಂತೆ ಅರ್ಚಕರ ಬಹಳ ದಿನಗಳ ಬೇಡಿಕೆಯನ್ನು ಒದಗಿಸಲಾಗಿದೆ. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದಂತೆ ವೇತನ ದೊರೆಯುವಂತೆ ಮಾಡಿದ್ದೇವೆ." ಎಂದು ಇದೇ ವೇಳೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜಿಲ್ಲೆ ತಿಳಿಸಿದ್ದಾರೆ.

ದೇವಾಲಯದ ಆದಾಯ ಬಳಸಿಕೊಳ್ಳಲು ತೀರ್ಮಾನ!
"ಅದಕ್ಕಾಗಿ ಕೆಲವು ಷರತ್ತುಗಳನ್ನು ಹಾಕಲಾಗಿದ್ದು, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನಕ್ಕೆ ಶೇ35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1,034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಅದಕ್ಕಾಗಿ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಅದನ್ನು ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ' ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
"ಅದರೊಂದಿಗೆ 'ಸಿ' ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ಕೊಡಲಾಗುತ್ತಿಲ್ಲ. 'ಸಿ' ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಕಾಯಂ ಅರ್ಚಕರು ಇಲ್ಲ. ಆದರೆ ಈ ಬಗ್ಗೆ ಎಲ್ಲ ದೇವಸ್ಥಾನಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಐಟಿಎಂಎಸ್!
ಇನ್ನು ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಅವರು ಮಾಹಿತಿ ನೀಡಿದ್ದು, "ದೇವಸ್ಥಾನಗಳಿಗೆ ಒದಗಿಸಬೇಕಾದ ತಸ್ತಿಕ್ ಹಣ 19 ಕೋಟಿ ರೂ. ಬಾಕಿ ಇದೆ. ಶೀಘ್ರವೇ ಆ ಹಣವನ್ನು ಬಿಡುಗಡೆ ಮಾಡಲಾಗುವುದು. ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ, ಮಾರ್ಗ ನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ. ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಅದು ಪೂರಕವಾಗಲಿದೆ" ಎಂದು ವಿವರಿಸಿದ್ದಾರೆ.
Recommended Video

ಮಕ್ಕಳ ಅಭಿವೃದ್ಧಿಗಾಗಿ ವಿಶೇಷ ಪೂಜೆ!
ವಿಜಯದಶಮಿ ದಿನ ರಾಜ್ಯದ ಎಲ್ಲ ಜನತೆಯ ಆರೋಗ್ಯಕ್ಕಾಗಿ ವಿಶೇಷ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಸದ್ಯ ಕೊರೊನಾ ಮೂರನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ನಾಡಿನ ಜನರ ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications