ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಜರಾಯಿ ಇಲಾಖೆಯ ಅರ್ಚಕರಿಗೆ ಸರ್ಕಾರದಿಂದ ದಸರಾ ಬಂಪರ್ ಕೊಡುಗೆ!

|
Google Oneindia Kannada News

ಬೆಂಗಳೂರು, ಅ. 12: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ""ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿಮಾ ಯೋಜನೆ ಜಾರಿಗೆ ತರಲಾಗಿದೆ. ಅರ್ಚಕರ ಆರೋಗ್ಯ ರಕ್ಷಣೆಗೆ ವಿನೂತನ ವಿಮಾ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇವೆ. ಅದರಿಂದ ಮುಜರಾಯಿ ಇಲಾಖೆಯ ಸುಮಾರು 37 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಲಿದೆ,'' ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಅರ್ಚರಿಕೆ ಅನ್ವಯವಾಗಲಿದೆ ವೇತನ ಆಯೋಗ!

ಅರ್ಚರಿಕೆ ಅನ್ವಯವಾಗಲಿದೆ ವೇತನ ಆಯೋಗ!

"ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ಒದಗಿಸುವ ಬೇಡಿಕೆ ಇತ್ತು. ಅದರಂತೆ ಅರ್ಚಕರ ಬಹಳ ದಿನಗಳ ಬೇಡಿಕೆಯನ್ನು ಒದಗಿಸಲಾಗಿದೆ. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದಂತೆ ವೇತನ ದೊರೆಯುವಂತೆ ಮಾಡಿದ್ದೇವೆ." ಎಂದು ಇದೇ ವೇಳೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜಿಲ್ಲೆ ತಿಳಿಸಿದ್ದಾರೆ.

ದೇವಾಲಯದ ಆದಾಯ ಬಳಸಿಕೊಳ್ಳಲು ತೀರ್ಮಾನ!

ದೇವಾಲಯದ ಆದಾಯ ಬಳಸಿಕೊಳ್ಳಲು ತೀರ್ಮಾನ!

"ಅದಕ್ಕಾಗಿ ಕೆಲವು ಷರತ್ತುಗಳನ್ನು ಹಾಕಲಾಗಿದ್ದು, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನಕ್ಕೆ ಶೇ35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1,034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಅದಕ್ಕಾಗಿ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಅದನ್ನು ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ' ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

"ಅದರೊಂದಿಗೆ 'ಸಿ' ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ಕೊಡಲಾಗುತ್ತಿಲ್ಲ. 'ಸಿ' ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಕಾಯಂ ಅರ್ಚಕರು ಇಲ್ಲ. ಆದರೆ ಈ ಬಗ್ಗೆ ಎಲ್ಲ ದೇವಸ್ಥಾನಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಐಟಿಎಂಎಸ್!

ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಐಟಿಎಂಎಸ್!

ಇನ್ನು ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಅವರು ಮಾಹಿತಿ ನೀಡಿದ್ದು, "ದೇವಸ್ಥಾನಗಳಿಗೆ ಒದಗಿಸಬೇಕಾದ ತಸ್ತಿಕ್ ಹಣ 19 ಕೋಟಿ ರೂ. ಬಾಕಿ ಇದೆ. ಶೀಘ್ರವೇ ಆ ಹಣವನ್ನು ಬಿಡುಗಡೆ ಮಾಡಲಾಗುವುದು. ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ, ಮಾರ್ಗ ನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್‌ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ. ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಅದು ಪೂರಕವಾಗಲಿದೆ" ಎಂದು ವಿವರಿಸಿದ್ದಾರೆ.

Recommended Video

2-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ:ಇದು ಎಷ್ಟು ಸೇಫ್ | Oneindia Kannada
ಮಕ್ಕಳ ಅಭಿವೃದ್ಧಿಗಾಗಿ ವಿಶೇಷ ಪೂಜೆ!

ಮಕ್ಕಳ ಅಭಿವೃದ್ಧಿಗಾಗಿ ವಿಶೇಷ ಪೂಜೆ!

ವಿಜಯದಶಮಿ ದಿನ ರಾಜ್ಯದ ಎಲ್ಲ ಜನತೆಯ ಆರೋಗ್ಯಕ್ಕಾಗಿ ವಿಶೇಷ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಸದ್ಯ ಕೊರೊನಾ ಮೂರನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ನಾಡಿನ ಜನರ ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

English summary
The salary will be given as per the recommendation of the 6th Pay Commission to the priests and employees of the Muzarai Department. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X