Breaking; ಸರ್ಕಾರಿ ಶಾಲೆ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ

ಬೆಂಗಳೂರು, ಜೂನ್ 18; ಕರ್ನಾಟಕ ಸರ್ಕಾರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ಶನಿವಾರ ಶಿಕ್ಷಣ ಇಲಾಖೆ (ಪ್ರೌಢ) ಸರ್ಕಾರದ ಅಧೀನ ಕಾರ್ಯದರ್ಶಿ ವಿ. ಶ್ರೀನಿವಾಸಮೂರ್ತಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ತನಕ ಪರಿಷ್ಕರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

vidanasoudha

ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಹಾಲಿ 7500 ರೂ. ಗೌರವ ಸಂಭಾವನೆ ಇತ್ತು. ಈಗ 2500 ರೂ.ಗಳನ್ನು ಏರಿಕೆ ಮಾಡಲಾಗಿದೆ. ಪರಿಷ್ಕೃತ ಆದೇಶದಂತೆ ಗೌರವ ಸಂಭಾವನೆ 10,000 ರೂ. ಆಗಲಿದೆ.

ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 8000 ರೂ. ಹಾಲಿ ಗೌರವ ಸಂಭಾವನೆ ಇತ್ತು. 2500 ರೂ. ಏರಿಕೆ ಮಾಡಲಾಗಿದೆ. ಪರಿಷ್ಕೃತ ಆದೇಶದ ಪ್ರಕಾರ 10,500 ರೂ. ಗೌರವ ಸಂಭಾವನೆ ದೊರೆಯಲಿದೆ.

teachers

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಗೌರವ ಸಂಭಾವನೆಯನ್ನು 7500 ರೂ. ನಿಗದಿ ಮಾಡಲಾಗಿತ್ತು. ಪ್ರೌಢಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳುವಾಗ 8 ಸಾವಿರ ರೂ. ನಿಗದಿ ಮಾಡಲಾಗಿತ್ತು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವಧನವನ್ನು ಕಳೆದ 6 ವರ್ಷಗಳಿಂದ ಪರಿಷ್ಕರಣೆ ಮಾಡಿರಲಿಲ್ಲ. ಅತಿಥಿ ಶಿಕ್ಷಕರಿಗೆ ನೀಡಲಾಗುವ ಗೌರವ ಸಂಭಾವನೆಯನ್ನು ಪರಿಷ್ಕರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.

ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು 12,000 ರೂ.ಗೆ, ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರ ಸಂಭಾವನೆಯನ್ನು 15,000 ರೂ.ಗಳಿಗೆ ಏರಿಕೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+