• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಹಿ ಸುದ್ದಿ: 6-8ನೇ ತರಗತಿ ಮಕ್ಕಳಿಗೆ ಇನ್ಮುಂದೆ ಪ್ರಾಥಮಿಕ ಶಿಕ್ಷಕರಿಂದ ಪಾಠ

|
Google Oneindia Kannada News

ಬೆಂಗಳೂರು, ನವೆಂಬರ್ 15: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನೇ 6 ರಿಂದ 8 ನೇ ತರಗತಿಯ ಪದವೀಧರ ಶಿಕ್ಷಕರ ನೇಮಕಾತಿಗೆ ಮುಂಬಡ್ತಿ ನೀಡಲು ರಾಜ್ಯ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

ಕರ್ನಾಟದಲ್ಲಿ ಹಾಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಪೈಕಿ ಶೇ.40ರಷ್ಟು ಶಿಕ್ಷಕರಿಗೆ ಮುಂಬಡ್ತಿ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ಆ ಶೇ. 40ರಷ್ಟು ಮಂದಿ 6 ರಿಂದ 8ನೇ ತರಗತಿ ಮಕ್ಕಳಿಗೆ ಪಾಠ ಮಾಡಲಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿ ಆದೇಶಿಸಿದೆ. ಇದರಿಂದಾಗಿ ವರ್ಷಾಂತ್ಯದ ಹೊತ್ತಿಗೆ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿಯೊಂದು ಲಭಿಸಿದಂತಾಗಿದೆ.

6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿಯ ನಿಯಮವನ್ನು ಮಾರ್ಪಡಿಸಲು ಸಹ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಅದರಂತೆ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿ ಶೇ. 60 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಇದು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ/ನೇಮಕಾತಿ) ನಿಯಮಗಳಡಿ ನಡೆಯಲಿದೆ.

Primary School teachers will now teach 6th-8th class children after Promotion

ಉಳಿದ ಶೇ. 40ರಷ್ಟು ಹುದ್ದೆಗಳು ಸೇವಾನಿರತ ಪ್ರಾಥಮಿಕ ಶಿಕ್ಷಕರ ಮುಂಬಡ್ತಿಯಿಂದ ಭರ್ತಿಯಾಗಲಿವೆ. 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ವೃಂದದ ನೇಮಕಾತಿ ನಿಯಮಗಳನ್ನು ಮಾರ್ಪಡಿಸಲು ಆರ್ಥಿಕ ಇಲಾಖೆ ಸಹಮತ ವ್ಯಕ್ತಪಡಿಸಿದೆ. ಅದರಂತೆ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ವೃಂದದ ನೇಮಕಾತಿ ಶೇ.60ರಷ್ಟು ನೇರ ನೇಮಕಾತಿಯಾದರೆ, ಶೇ. 40ರಷ್ಟು ಸೇವಾನಿರತ ಶಿಕ್ಷಕರಿಗೆ ಮುಂಬಡ್ತಿ ದೊರೆಯಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Primary School teachers will now teach 6th-8th class children after Promotion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X