11 ಸಾವಿರ ಪ್ರಾಥಮಿಕ ಶಾಲಾಶಿಕ್ಷರಿಗೆ ಉದ್ಯೋಗಭಾಗ್ಯ

ಬೆಂಗಳೂರು, ಫೆ.21 : ಜೂನ್ ವೇಳೆಗೆ ಹನ್ನೊಂದು ಸಾವಿರ ಪ್ರಾಥಮಿಕ ಶಾಲಾ ಶಿಕ್ಷರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಸರ್ಕಾರ ನೇಮಕಾತಿಗೆ ಒಪ್ಪಿಗೆ ನೀಡಿದ್ದು, ಲೋಕಸಭೆ ಚುನಾವಣೆ ಮುಗಿದ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಶುಕ್ರವಾರ ವಿಧಾನಪರಿಷತ್ತಿನಲ್ಲಿ ವೈ.ನಾರಾಯಣ ಸ್ವಾಮಿ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕಿಮ್ಮನೆ ರತ್ನಾಕರ್, ಜೂನ್ ವೇಳೆಗೆ 11 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದಕ್ಕೆ ಸರ್ಕಾರ ಸಹ ಅನುಮತಿ ನೀಡಿದೆ. ಇನ್ನೂ 400 ಶಿಕ್ಷಕರ ಅಗತ್ಯವಿದ್ದು, ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

vidanasouda

11 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರದ ಒಪ್ಪಿಗೆ ಸಿಕ್ಕಿದೆ. ಆದರೆ, ಕೆಲವು ದಿನಗಳಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಲಿದೆ. ಆದ್ದರಿಂದ ನೇಮಕಾತಿಯನ್ನು ತಡೆಹಿಡಿಯಲಾಗಿದ್ದು, ಚುನಾವಣೆ ಮುಗಿದ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕಿಮ್ಮನೆ ರತ್ನಾಕರ್ ಹೇಳಿದರು. [ಒನ್ ಇಂಡಿಯಾದಿಂದ ಉದ್ಯೋಗ ಹುಡುಕಾಟ ಸೇವೆ]

ಶಿಕ್ಷಕರಿಗೆ ಮತ್ತು ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ವರ್ಗಾವಣೆ ನೀತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುವುದು. ಕೌನ್ಸಿಲಿಂಗ್ ನಿಂದ 42 ಸಾವಿರ ಶಿಕ್ಷಕರು ಹೊರಗುಳಿದಿದ್ದಾರೆ. ಅವರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ 16 ಸಾವಿರ ಪತಿ-ಪತ್ನಿಯರು ಸ್ವಂತ ತಾಲೂಕಿಗೆ ವರ್ಗಾವಣೆ ಕೇಳಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಸದನಕ್ಕೆ ಮಾಹಿತಿ ನೀಡಿದರು. [ಫೆ.23-24ರಂದು ಮೈಸೂರಿನಲ್ಲಿ ಉದ್ಯೋಗ ಮೇಳ]

ಪತಿ-ಪತ್ನಿ ಇಬ್ಬರಿಗೂ ಸ್ವಂತ ತಾಲೂಕಿಗೆ ವರ್ಗಾವಣೆ ನೀಡಿದರೆ ಸುಮಾರು 500 ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಲಿದೆ. ಆದ್ದರಿಂದ ವರ್ಗಾವಣೆ ಕುರಿತು ಸಮಗ್ರವಾದ ನೀತಿಯನ್ನು ರೂಪಿಸಿ ನಂತರ, ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು. [ಬಜೆಟ್ ಮಂಡಿಸುವಾಗ ಸದನಲ್ಲಿದ್ದ ಮಹಿಳೆ ಯಾರು?]

ವರ್ಗಾವಣೆ ಮತ್ತು ನೇಮಕಾತಿ ಸಂದರ್ಭಗಳಲ್ಲಿ ಹೈದರಾಬಾದ್-ಕರ್ನಾಟಕದ 371(ಜೆ) ನಿಯಮ, ಲೋಕಸಭೆ ಚುನಾವಣೆ ಅಧಿಸೂಚನೆ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಳ್ಳಲಾಗುತ್ತದೆ ಎಂದು ಕಿಮ್ಮನೆ ರತ್ನಾಕರ್ ಹೇಳಿದರು. [2014ರ ದ್ವಿತೀಯ ಪಿಯು ವೇಳಾಪಟ್ಟಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+