ಸಿದ್ದರಾಮಯ್ಯ, ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು, ಮೇ 20: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಭಿನಂದಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯ ಜಿ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿಕೆ ಶಿವಕುಮಾರ್ ಜಿ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Prime Minister Narendra Modi greeted Siddaramaiah and Shivakumar

224 ಸದಸ್ಯ ಬಲದ ಸದನದಲ್ಲಿ 135 ಸ್ಥಾನಗಳೊಂದಿಗೆ ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ ಒಂದು ವಾರದ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಪ್ರಮಾಣ ವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಶನಿವಾರ ಕರ್ನಾಟಕ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಡಿ ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಮತ್ತು ಎಂಟು ಶಾಸಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉಪಸ್ಥಿತರಿರಲಿಲ್ಲ. ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಭೂಪೇಶ್ ಬಾಘೇಲ್ (ಛತ್ತೀಸ್‌ಗಢ), ಅಶೋಕ್ ಗೆಹ್ಲೋಟ್ (ರಾಜಸ್ಥಾನ) ಮತ್ತು ಸುಖ್ವಿಂದರ್ ಸಿಂಗ್ ಸುಖು (ಹಿಮಾಚಲ ಪ್ರದೇಶ)-- ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (ಆರ್‌ಜೆಡಿ) ಸಹ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+