ಡಾ. ಕೆ. ಸುಧಾಕರ್ ಗೆಲುವಿಗಾಗಿ ಪ್ರಧಾನಿ ಮೋದಿ ಎಂಟ್ರಿ!
ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ರಣಕಹಳೆಯನ್ನು ಮೊಳಗಿಸಲು ಸರ್ವ ಸಿದ್ಧತೆ ನಡೆಸಿದ್ದಾರೆ. ಈ ಕಾರಣಕ್ಕೆ ಡಾ. ಕೆ. ಸುಧಾಕರ್ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಹೀಗಿದ್ದಾಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈಗ ಒಂದು ದೊಡ್ಡ ತಿರುವು ಸಿಗಲಿದ್ದು ಡಾ. ಕೆ. ಸುಧಾಕರ್ ಗೆಲುವಿಗೆ ಮತ್ತಷ್ಟು ಹತ್ತಿರವೇ ಆಗಲಿದ್ದಾರೆ.
ಏಪ್ರಿಲ್ 20ಕ್ಕೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಡಾ. ಕೆ. ಸುಧಾಕರ್ ಅವರ ಗೆಲುವಿಗೆ ಮತ್ತಷ್ಟು ಸಹಕಾರಿ ಆಗಲಿದೆ. ಹಾಗೇ ಈ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಮತ್ತಷ್ಟು ಬಲ ಸಿಗುತ್ತಿದೆ. ಹೀಗಾಗಿ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ ಯಾಚನೆ ಮಾಡಿದ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು, ಕಾಂಗ್ರೆಸ್‌ನ ಆಡಳಿತದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. ಹಾಗೇ ಪ್ರಧಾನಿ ಮೋದಿ ಅವರ ಅಭಿವೃದ್ಧಿಯ ಕಾರ್ಯಗಳ ಬಗ್ಗೆ ಪ್ರಸ್ತಾಪ ಮಾಡಿದರು.

ಪ್ರಧಾನಿ ಆಗಮನಕ್ಕೆ ಸಕಲ ಸಿದ್ಧತೆ
ಸುದ್ದಿಗಾರರ ಜೊತೆಗೆ ಮಾತನಾಡಿದ ಡಾ. ಕೆ. ಸುಧಾಕರ್, ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ-7 ರ ಬಳಿಯ ಮೈದಾನದಲ್ಲಿ ಏಪ್ರಿಲ್ 20ಕ್ಕೆ ಬಿಜೆಪಿ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಸಿದ್ಧತೆ ನಡೆಯುತ್ತಿದ್ದು, ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಮಾಡಲಿದ್ದಾರೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತರಿಗೆ ಬಹಳ ಉತ್ಸಾಹ ಬಂದಿದೆ ಎಂದರು.
'ಕಾಂಗ್ರೆಸ್ ಗೆದ್ದರೆ ಪ್ರಯೋಜವಿಲ್ಲ'
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಡಾ.ಕೆ.ಸುಧಾಕರ್ ಅವರ ಪರ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿಯಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಅವರು ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಚುನಾವಣೆ ಅಲ್ಲ. ಇದು ನರೇಂದ್ರ ಮೋದಿ ಅವರು & ರಾಹುಲ್ ಗಾಂಧಿಯವರ ನಡುವಿನ ಚುನಾವಣೆ. ಆದ್ರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ನರೇಂದ್ರ ಮೋದಿ ಅವರನ್ನೇ ಗೆಲ್ಲಿಸಲಿದ್ದು, ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದರು ಆರ್. ಅಶೋಕ್ ಅವರು.
ಒಂದು ವೇಳೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯು ಗೆದ್ದರೆ ರಾಜ್ಯಕ್ಕೆ ಏನೇನೂ ಪ್ರಯೋಜನ ಆಗುವುದಿಲ್ಲ. ಆದರೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಗೆದ್ದರೆ ಮೋದಿ ಅವರ ಜೊತೆಗೆ ಕುಳಿತು ಜನರ ಸಮಸ್ಯೆ ಪರಿಹರಿಸಲು ಶ್ರಮಿಸುತ್ತಾರೆ ಎಂದರು. ಈ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ & ಕಾಂಗ್ರೆಸ್ ಆಡಳಿತದ ವಿರುದ್ಧ ಕೂಡ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದರು.












Click it and Unblock the Notifications