PM Modi: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿ, ಉಡುಪಿ ಶ್ರೀಕೃಷ್ಣ ಮಠದಲ್ಲಿ ಮಹತ್ವದ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಮಹತ್ವದ ಭೇಟಿ ಕೊಡುತ್ತಿದ್ದಾರೆ. ಹೀಗಾಗಿ ಈ ಭೇಟಿ ಇಡೀ ದೇಶದ ಗಮನ ಸೆಳೆದಿದೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಹಲವು ಕಡೆ ರಸ್ತೆಗಳನ್ನ ಬಂದ್ ಮಾಡುವ ಆದೇಶ ಕೂಡ ಹೊರಡಿಸಲಾಗಿದೆ. ಹಾಗಾದರೆ ಪ್ರಧಾನಿ ಮೋದಿ ಅವರು ಉಡುಪಿಗೆ ಬರುವುದು ಎಷ್ಟು ಗಂಟೆಗೆ? ಕಾರ್ಯಕ್ರಮ ನಡೆಯುವುದು ಎಷ್ಟು ಗಂಟೆಗೆ? ಬನ್ನಿ ತಿಳಿಯೋಣ.
ನವೆಂಬರ್ 28 ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಮೊದಲಿಗೆ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಆ ನಂತರ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪ ಉದ್ಘಾಟನೆ ಮಾಡಲಿದ್ದಾರೆ ಎಂದು ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆ ಉಡುಪಿಯ ವಿವಿಧ ಸ್ಥಳಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆ ತನಕ ಇದು ಜಾರಿಯಲ್ಲಿ ಇರಲಿದೆ. ತಮ್ಮ ಉಡುಪಿ ಭೇಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕನ್ನಡಿಗರ ಹೃದಯ ಗೆದ್ದಿದೆ.
ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
ಉಡುಪಿ ಭೇಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಎಂದು ತಿಳಿಸಿದ್ದಾರೆ ಪಿಎಂ ಮೋದಿ ಅವರು.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ…
— Narendra Modi (@narendramodi) November 27, 2025
ಬೆಳಗ್ಗೆ 8 ಗಂಟೆಯಿಂದ ಪ್ರವೇಶ ನಿರ್ಬಂಧ
ಮತ್ತೊಂದು ಕಡೆ ನವೆಂಬರ್ 28 ಶುಕ್ರವಾರ ಶ್ರೀ ಕೃಷ್ಣ ಮಠಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಕೆಲವು ನಿರ್ಬಂಧ ಇದ್ದು, ಬೆಳಗ್ಗೆ 8 ಗಂಟೆ ನಂತರ ಮತ್ತು ಸಂಜೆ 3 ಗಂಟೆ ತನಕ ಮಠಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಇದರ ಜೊತೆ ಪ್ರಧಾನಿ ಮೋದಿ ಅವರ ಆಗಮನ ಹಿನ್ನೆಲೆ ಕರ್ನಾಟಕ ಹೈಅಲರ್ಟ್ ಆಗಿದ್ದು, ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಧಾನಿ ಮೋದಿ ಅವರು ಸಂಚಾರ ಮಾಡುವ ಮಾರ್ಗದಲ್ಲಿ ಹದ್ದಿನ ಕಣ್ಣಿಡಲಾಗಿದೆ.












Click it and Unblock the Notifications