ಖಾಸಗಿ ಆಸ್ಪತ್ರೆಗಳಲ್ಲಿ ಮಾ. 3ರಿಂದ ಚಿಕಿತ್ಸಾ ದರಪಟ್ಟಿ ಪ್ರಕಟ ಕಡ್ಡಾಯ

ಕೋಲಾರ, ಮಾರ್ಚ್ 1: ಮಾರ್ಚ್ 3ರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ದರಪಟ್ಟಿಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರದಲ್ಲಿ ಬುಧವಾರ ಮಾತನಾಡಿದ ಅವರು, ಒಂದೊಮ್ಮೆ ಖಾಸಗೀ ಆಸ್ಪತ್ರೆಗಳು ಸರಕಾರಿ ಆದೇಶ ಉಲ್ಲಂಘಿಸಿದರೆ ಕೆಪಿಎಂಇ ಖಾಯಿದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಮಾರ್ಚ್ 2ರಂದು ಯೂನಿವರ್ಸಲ್ ಹೆಲ್ತ್ ಕಾರ್ಡ್ ಬಿಡುಗಡೆಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ, ರಾಜ್ಯದ 1.43 ಕೋಟಿ ಕುಟುಂಬಗಳಿಗೆ ಆರೋಗ್ಯಭಾಗ್ಯ ಕಲ್ಪಿಸಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.

Private hospitals must publish treatment rate list by March 3rd

ಇದೇ ವೇಳೇ ಅವರು ತಜ್ಞ ವೈದ್ಯರ ಕೊರತೆ ಸದ್ಯ 900ರಿಂದ 600ಕ್ಕೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ ಕೇಂದ್ರ ಸರಕಾರದ ಸಹಯೋಗದಲ್ಲಿ ಕೋಲಾರ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+