ಖಾಸಗಿ ಕೋಟಾದ ಮೆಡಿಕಲ್ ಸೀಟ್ ಶುಲ್ಕ ಹೆಚ್ಚಳ; ಎಷ್ಟು ಶುಲ್ಕ ಪಾವತಿ?
ಬೆಂಗಳೂರು, ಆಗಸ್ಟ್ 07; ಕರ್ನಾಟಕ ಸರ್ಕಾರ 2023-24ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ, ಖಾಸಗಿ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕ ಕೋರ್ಸುಗಳ ಸೀಟುಗಳ ಪ್ರವೇಶ ಶುಲ್ಕವನ್ನು ನಿಗದಿಪಡಿಸುವ ಬಗ್ಗೆ ಆದೇಶ ಹೊರಡಿಸಿದೆ.
ಅಲ್ಪ ಸಂಖ್ಯಾತ, ಧಾರ್ಮಿಕ ಮತ್ತು ಭಾಷಾ ಅಲ್ಪ ಸಂಖ್ಯಾತ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಉಳಿದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಖಾಸಗಿ ಕೋಟಾದ ಸೀಟುಗಳ ಶುಲ್ಕವನ್ನು ಶೇ 10ರಷ್ಟು ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಎ. ಶ್ರೀನಿಧಿ ಸರ್ಕಾರದ ಅಧೀನ ಕಾರ್ಯದರ್ಶಿ-3 ವೈದ್ಯಕೀಯ ಶಿಕ್ಷಣ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ 17/7/2023ರಂದು ನಡೆದ ಸಭೆಯ ನಡಾವಳಿಯನ್ನು ಇದರಲ್ಲಿ ಸೇರಿಸಲಾಗಿದೆ.
ಪ್ರಸ್ತಾವನೆ ಏನಿತ್ತು?; 2023-24ನೇ ಸಾಲಿನ ಸ್ನಾತಕ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಸೀಟು ಹಂಚಿಕೆ & ಶುಲ್ಕ ನಿಗದಿಗೆ ಸಂಬಂಧಿಸಿದಂತ ಸರ್ಕಾರವು ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ (KRLMPCA)ಸಂಸ್ಥೆಗಳೊಂದಿಗೆ ಪರಸ್ಪರ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕಾಗಿದೆ.
2023-24ನೇ ಸಾಲಿನ ಸ್ನಾತಕ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳು ಶುಲ್ಕ ಹೆಚ್ಚಳ ಹಾಗೂ ಇನ್ನಿತರೆ ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದರು.
ಸರ್ಕಾರಿ/ ಅನುದಾನರಹಿತ ಖಾಸಗಿ ವೈದ್ಯಕೀಯ/ ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಎಲ್ಲಾ ಸ್ನಾತಕ ಕೋರ್ಸಿನ ಸೀಟುಗಳಿಗೂ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳು/ ಡೀಮ್ಡ್ ವಿಶ್ವವಿದ್ಯಾಲಯಗಳು ಸಂಬಂಧಿತ ಕಾಯ್ದೆಗಳು/ ಮುಚ್ಚಳಿಕೆ ಮತ್ತು ಒಪ್ಪಂದ ಪತ್ರಗಳನ್ವಯ ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ 2023-24ನೇ ಸಾಲಿಗೆ ಕೌನ್ಸಿಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲು ನಿರ್ಣಯಿಸಲಾಯಿತು.
ಅದರಂತ ರಾಜ್ಯದಲ್ಲಿನ ಖಾಸಗಿ ವೈದ್ಯಕೀಯ/ ದಂತ ವೈದ್ಯಕೀಯ ಕಾಲೇಜುಗಳಲ್ಲಿನ ವೈದ್ಯಕೀಯ (ಬಿಡಿಎಸ್) (KPCF/KRLMPCA/AMPCK) ವೈದ್ಯಕೀಯ (ಎಂಬಿಬಿಎಸ್)/ ದಂತ ವೈದ್ಯಕೀಯ (ಬಿಡಿಎಸ್) ಪಾವತಿಸಬೇಕಾದ ಶುಲ್ಕವನ್ನು ಈ ಕೆಳಕಂಡಂತೆ ನಿಗದಿಪಡಿಸಲು ನಿರ್ಣಯಿಸಲಾಯಿತು ಎಂದು ಹೇಳಿದೆ.
Karnataka Professional College's Foundation (KPCF) ಅವರು ಪರಸ್ಪರ ಒಡಂಬಡಿಕೆಯಂತೆ ಖಾಸಗಿ ಕೋಟಾದ ಸೀಟುಗಳಿಗೆ ಮಾತ್ರ ಅನ್ವಯಿಸುವಂತೆ ಶೇ.10ರಷ್ಟು ಶುಲ್ಕವನ್ನು ಹೆಚ್ಚಿಸಿ ಸ್ನಾತಕ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಸೀಟುಗಳಿಗೆ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಸರ್ಕಾರದ ಆದೇಶ; 27/7/2023ರ ಸರ್ಕಾರಿ ಆದೇಶ ಸಂಖ್ಯೆ ಪ್ರಕಾರ ಸರ್ಕಾರಿ ಸ್ವಾಯತ್ತ ವೈದ್ಯಕೀಯ/ ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕ ಕೋರ್ಸುಗಳ ಸೀಟುಗಳಿಗೆ 2023-24ನೇ ಸಾಲಿನಲ್ಲಿ ಶುಲ್ಕ ಹೀಗಿದೆ. ಎಂಬಿಬಿಎಸ್ 50,000 ಮತ್ತು ಬಿಡಿಎಸ್ 40,000 ರೂ.ಗಳು.
ರಾಜ್ಯದಲ್ಲಿನ ಖಾಸಗಿ ವೈದ್ಯಕೀಯ/ ದಂತ ವೈದ್ಯಕೀಯ ಕಾಲೇಜುಗಳಲ್ಲಿನ (KPCF/ KRLMPCA/ AMPCK) ವೈದ್ಯಕೀಯ (ಎಂಬಿಬಿಎಸ್)/ ದಂತ ವೈದ್ಯಕೀಯ (ಬಿಡಿಎಸ್) ಸೀಟುಗಳಿಗೆ ಪಾವತಿಸಬೇಕಾದ 2023-24ನೇ ಸಾಲಿನ ಶುಲ್ಕ Karnataka Professional College's Foundation (KPCF) ಅವರು ಪರಸ್ಪರ ಒಡಂಬಡಿಕೆಯಂತೆ ಖಾಸಗಿ ಕೋಟಾದ ಸೀಟುಗಳಿಗೆ ಮಾತ್ರ ಅನ್ವಯಿಸುವಂತೆ ಶೇ 10ರಷ್ಟು ಶುಲ್ಕ ಹೆಚ್ಚಿಸಲಾಗಿದೆ.
ಎಂಬಿಬಿಎಸ್ 2022-23ನೇ ಸಾಲಿನ ಶುಲ್ಕ 9,81,956 ರೂ.ಗಳು. 2023-24ನೇ ಸಾಲಿಗೆ ಪಾವತಿಸಬೇಕಾದ ಶುಲ್ಕ 10,80,152 ರೂ.ಗಳು. ಕೆಇಎ ಮೂಲಕ ಸರ್ಕಾರಿ ಕೋಟಾದಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಶುಲ್ಕ 1,28,746 ರೂ.ಗಳು.
ಬಿಡಿಎಸ್ 2022-23ನೇ ಸಾಲಿನ ಶುಲ್ಕ 6,66,023 ರೂ.ಗಳು. 2023-24ನೇ ಸಾಲಿನ ಶುಲ್ಕ 7,32,625 ರೂ.ಗಳು. ಕೆಇಎ ಮೂಲಕ ಸರ್ಕಾರಿ ಕೋಟಾದಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಶುಲ್ಕ 83,358 ರೂ.ಗಳು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ











Click it and Unblock the Notifications