ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ ಶುಲ್ಕ ಫಲಕ ಅಳವಡಿಕೆ ಸುತ್ತೋಲೆ ಜಾರಿಗೆ ಎರಡು ವಾರಗಳ ಗಡುವು

|
Google Oneindia Kannada News

ಬೆಂಗಳೂರ, ಜನವರಿ 24: ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿಯಿರುವ ಫಲಕಗಳನ್ನು ಎಲ್ಲಾ ಶಾಲೆಗಳ ಮುಂದೆ ಅಳವಡಿಸುವ ಸಲುವಾಗ ಸುತ್ತೋಲೆ ಹೊರಡಿಸಲು ಎರಡು ವಾರಗಳ ಗಡುವು ನೀಡಲಾಗಿದೆ.

2015ರಲ್ಲಿಯೇ ಶುಲ್ಕ ಮಾಹಿತಿ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಎರಡು ವಾರಗಳಲ್ಲಿ ಅನುಷ್ಠಾನಗೊಳಿಸಿ ಆ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ವಕೀಲ ಎನ್‌ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣ ಸ್ವಾಮಿ ಮತ್ತು ನ್ಯಾ. ಪಿಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

Private school should install fee detail board within two weeks

ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಿ ಶುಲ್ಕದ ವಿವರ ಫಲಕಗಳನ್ನು ಎಲ್ಲಾ ಶಾಲೆಗಳ ಮುಂದೆ ಅಳವಡಿಸುವುದು ಕಡ್ಡಾಯಗೊಳಿಸಿ 2015ರ ಏ.13ರಂದು ಶಿಕ್ಷಣ ಇಲಾಖೆಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯನ್ನು ಅನುಷ್ಠಾನಗೊಳಿಸಿ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಕೋರಿದರು. ಅದಕ್ಕಡ ಪ್ರತಿಕ್ರಿಯಿಸಿರುವ ನ್ಯಾಯಪೀಠ ಮುಂದಿನ ವಿಚಾರಣೆಯೊಳಗೆ ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಮುಂದೆ ಶುಲ್ಕದ ವಿವರ ಫಲಕ ಹಾಕುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

English summary
Karnataka High coury issues strict direction to alla schools to the fee detail board within two weeks. Educatuon department sholud overlook into this matter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X