ರಾಜ್ಯದಲ್ಲಿ ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳು ಬಂದ್-ಕಾರಣ ಏನು?
ಬೆಂಗಳೂರು, ಆಗಸ್ಟ್ 05: ರಾಜ್ಯದಲ್ಲಿ ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳನ್ನು ಬಂದ್ ಮಾಡಲು ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ನಿರ್ಧಾರ ಮಾಡಲಾಗಿದೆ. ಹಾಗಾದರೆ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಾಲಾ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ. ಈ ಕುರಿತು ಇಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಕೆ ಮಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಮುಂದಿನ 15 ದಿನ ಕಾಲಾವಕಾಶವನ್ನು ನೀಡಲಾಗಿದೆ.

ಈ ವೇಳೆ ಮಾತನಾಡಿದ ಹಾಲನೂರು ಲೇಪಾಕ್ಷಿ ಅವರು, 15 ದಿನದಲ್ಲಿ ಇಲಾಖೆ ನಡೆಸುತ್ತಿರುವ ಕ್ರಮಗಳಿಂದ ಹಿಂದೆ ಸರಿಯಬೇಕು. ಶಾಲೆಗಳ ನವೀಕರಣಕ್ಕೆ ಇಲಾಖೆಯ 64 ಅಂಶಗಳನ್ನು ನಿಗದಿಪಡಿಸಿ ದಾಖಲೆ ಪಡೆಯುತ್ತಿದೆ. ಇದರಿಂದ ಶಾಲೆಗಳ ನವೀಕರಣ ಪಡೆಯುವುದು ಕಷ್ಟಸಾಧ್ಯವಾಗಿದೆ. ಶಾಲಾ ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ತೆರಿಗೆ ಬಾಕಿ ವಸೂಲಿ ಕೈ ಬಿಡಬೇಕು. ಈ ಬಗ್ಗೆ 15 ದಿನ ಅಂದರೆ ಆಗಸ್ಟ್ 21ರ ವರೆಗೆ ಗಡುವು ನೀಡದ್ದೇವೆ ಎಂದು ಹೇಳಿದರು.
ರುಪ್ಸಾ ಸೇರಿ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ಸರ್ಕಾರ ಸಭೆ ಮಾಡಬೇಕು. ಇಲಾಖೆಯಿಂದ ಆಗುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಸರ್ಕಾರ ಇದಕ್ಕೆಲ್ಲ ಕಡಿವಾಣ ಹಾಕದೆದಿದ್ದರೆ, ಶಾಲೆ ಬಂದ್ ಮಾಡಿ ಬೆಂಗಳೂರು ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕಳೆದ 4 ವರ್ಷಗಳಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಶೈಕ್ಷಣಿಕ ಉದ್ದೇಶಕ್ಕೆ ಬಳಕೆ ಮಾಡುವ ನಿವೇಶನ ಅಥವಾ ಕಟ್ಟಡಗಳಿಗೆ ಕಾನೂನು ಬಾಹಿರವಾಗಿ ತೆರಿಗೆ ವಸೂಲಿ ಮಾಡುತ್ತಿದೆ. ಆರ್‌ಆರ್ ವಿಚಾರದಲ್ಲಿ ಅಧಿಕಾರಿಗಳ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ಸುಲಿಗೆ ಸೇರಿ ಅನೇಕ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಈ ಪ್ರತಿಭಟನೆಗೆ ಸಾಥ್ ನೀಡಿದೆ ಎಂದು ಹೇಳಿದ್ದಾರೆ.












Click it and Unblock the Notifications