ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್‌ಟಿಇ ಮಕ್ಕಳಿಗೆ ಉಚಿತ ಸಮವಸ್ತ್ರ, ಪುಸ್ತಕ ಕೊಡಲ್ಲ ಎಂದ ಖಾಸಗಿ ಶಾಲೆಗಳು

|
Google Oneindia Kannada News

ಬೆಂಗಳೂರು, ಏಪ್ರಿಲ್ 26: ಶಿಕ್ಷಣ ಹಕ್ಕು ಕಾಯ್ದೆ ಅಡಿ ಖಾಸಗಿ ಶಾಲೆಗಳಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನು ಸಂಬಂಧಪಟ್ಟ ಶಾಲೆಗಳೇ ಭರಿಸಬೇಕು ಎಂಬ ಸರ್ಕಾರದ ಆದೇಶವನ್ನು ಖಾಸಗಿ ಶಾಲೆಗಳು ತಳ್ಳಿ ಹಾಕಿವೆ. ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಖಾಸಗಿ ಶಾಲೆಗಳು ಭರಿಸಲು ಸಾಧ್ಯವಿಲ್ಲ ಎಂದು ತಿಳಿಸಿವೆ.

ಕರ್ನಾಟಕ ಹೈಕೋರ್ಟ್ ಆರ್‌ಟಿಇ ಮತ್ತು ಸಾಮಾನ್ಯ ವಿದ್ಯಾರ್ಥಿಗಳ ನಡುವೆ ಯಾವುದೇ ರೀತಿಯಲ್ಲಿ ತಾರತಮ್ಯ ನೀತಿ ಅನುಸರಿಸದೆ ಸಮಾನವಾಗಿ ಕಾಣಬೇಕು ಎಂದು ಹೇಳಿದೆಯೇ ಹೊರತು ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ನೀಡಬೇಕು ಎಂದು ಸೂಚಿಸಿಲ್ಲ. ಒಂದು ವೇಳೆ ಆರ್ ಟಿಇ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಭರಿಸಿದರೆ ತಾರತಮ್ಯ ನೀತಿ ಅನುಸರಿಸಿದಂತಾಗುತ್ತದೆ ಎಂದು ಹೇಳಿದೆ.

ಆರ್‌ಟಿಇ : 1.58 ಲಕ್ಷ ಸೀಟಿಗೆ 2.28ಲಕ್ಷ ಅರ್ಜಿ ಸಲ್ಲಿಕೆಆರ್‌ಟಿಇ : 1.58 ಲಕ್ಷ ಸೀಟಿಗೆ 2.28ಲಕ್ಷ ಅರ್ಜಿ ಸಲ್ಲಿಕೆ

ಕಳೆದ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಆರ್‌ಟಿಇ ಮರುಪಾವತಿ ವೆಚ್ಚವು ಸಮವಸ್ತ್ರ ಮತ್ತು ಪಠ್ಯಪುಸ್ತಕಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ. ಒಂದು ವೇಳೆ ಖಾಸಗಿ ಶಾಲೆಗಳ ವತಿಯಿಂದಲೇ ಸಮವಸ್ತ್ರ, ಪಠ್ಯಪುಸ್ತಕ ಮತ್ತು ಇತರೆ ಕಲಿಕಾ ಪರಿಕರಗಳನ್ನು ನೀಡುತ್ತಿದ್ದರೆ, ಆರ್‌ಟಿಇ ಮಕ್ಕಳಿಗೂ ನೀಡಬೇಕು.

Private schools denial of providing text books, uniforms to RTE students

ನಿಗದಿತ ಅಂಗಡಿಗಳಲ್ಲಿಯೇ ಖರೀದಿ ಮಾಡಬೇಕು ಎಂದು ಒತ್ತಡ ಹೇರುವಂತಿಲ್ಲವೆಂದು ಸಹ ಸೂಚನೆ ನೀಡಿರುವುದರಿಂದ ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಪತ್ರ ಬರೆದಿದೆ.

ರಾಜ್ಯ ಪಠ್ಯಕ್ರಮ ಬೋಧಿಸುವ ಶಾಲೆಗಳಿಗೆ ಮಾತ್ರ ಕರ್ನಾಟಕ ಪಠ್ಯಪುಸ್ತಕ ಮಾರಾಟ ಸಂಘದಿಂದ ಪಠ್ಯಪುಸ್ತಕಗಳನ್ನು ನೀಡಲಾಗುತ್ತಿದೆ. ಪೂರ್ವ ಪ್ರಾಥಮಿಕ ಶಾಲೆಗಳಿಗೆ ಯಾವುದೇ ರೀತಿಯ ಪಠ್ಯಕ್ರಮಗಳನ್ನು ನಿಗದಿಪಡಿಸಿಲ್ಲ. ಇಂತಹ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಎಲ್ಲಿಂದ ಮತ್ತು ಹೇಗೆ ಪಡೆಯಬೇಕು ಎಂಬ ಗೊಂದಲ ಸೃಷ್ಟಿಸಿದೆ.

English summary
Karnataka Associated Managements of Primary and Secondary Schools has said that they will not provide text books and uniforms to students those who selected under RTE act. The association has written letter to department of education citing that the high court was told no discrimination in the schools since the institutions have not providing text books and uniforms to other students also with free of cost.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X