ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಬಂದ್ : ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ

By Gururaj
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 09 : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೆ.10ರಂದು ಕಾಂಗ್ರೆಸ್ ಕರೆ ನೀಡಿರುವ ಭಾರತ ಬಂದ್‌ಗೆ ಕರ್ನಾಟಕದಲ್ಲಿ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿವೆ.

ಕರ್ನಾಟಕದ ಖಾಸಗಿ ಅನುದಾನರಹಿತ ಶಾಲೆಗಳ ಸಂಘಟನೆಯು ಭಾರತ ಬಂದ್‌ಗೆ ಬೆಂಬಲ ನೀಡಿದೆ. ಸೋಮವಾರ ಶಾಲೆಗಳಿಗೆ ರಜೆ ಘೋಷಣೆ ಮಾಡುವುದಾಗಿ ಹೇಳಿದೆ.

ಸೆ.10 ರಂದು ಭಾರತ ಬಂದ್, ಏನಿರುತ್ತೆ? ಏನಿರೋಲ್ಲ?ಸೆ.10 ರಂದು ಭಾರತ ಬಂದ್, ಏನಿರುತ್ತೆ? ಏನಿರೋಲ್ಲ?

'ರಾಜಕೀಯ ಪಕ್ಷಗಳ ಪರವಾಗಿ ಬಂದ್‌ಗೆ ನೇರ ಬೆಂಬಲ ನೀಡುತ್ತಿಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ವಿವೇಚನಾ ಅಧಿಕಾರ ಬಳಸಿ ರಜೆ ನೀಡಲು ಶಾಲೆಯ ಆಡಳಿತ ಮಂಡಳಿಗಳಿಗೆ ಸೂಚಿಸಲಾಗಿದೆ' ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದ್ದಾರೆ.

Private schools extended support for Sep 10 Bharat Bandh

ಭಾರತ ಬಂದ್ : ಕೆಎಸ್ಆರ್‌ಟಿಸಿ, ಬಿಎಂಟಿಸಿ ಸಂಚಾರವಿಲ್ಲ?ಭಾರತ ಬಂದ್ : ಕೆಎಸ್ಆರ್‌ಟಿಸಿ, ಬಿಎಂಟಿಸಿ ಸಂಚಾರವಿಲ್ಲ?

ಸರ್ಕಾರಿ ಶಾಲೆಗಳು ಇನ್ನೂ ಅಧಿಕೃತವಾಗಿ ರಜೆ ನೀಡಿಲ್ಲ. ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಬಂದ್‌ಗೆ ಬೆಂಬಲ : 'ತೈಲ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಬಂದ್‌ಗೆ ಸರ್ಕಾರದ ಸಂಪೂರ್ಣ ಬೆಂಬಲವಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಸಿಪಿಐ, ಎಸ್‌ಯುಸಿಐ, ಎಐಡಿಯುಸಿ ಹಾಗೂ ಸಿಐಟಿಯು ಸೇರಿದಂತೆ ಎಡಪಕ್ಷಗಳ ಸಂಘಟನೆಗಳು, ಸಾರಿಗೆ ನಿಗಮಗಳ ನೌಕರರ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡಿವೆ. ಆಟೋ, ಓಲಾ ಮತ್ತು ಊಬರ್ ಕಂಪನಿಗಳ ಕ್ಯಾಬ್ ಚಾಲಕರು, ಮಾಲೀಕರು ಬಂದ್‌ಗೆ ಬೆಂಬಲ ನೀಡಿದ್ದಾರೆ.

English summary
Unaided school association in Karnataka support the Bharat Bandh called on September 10, 2018. Congress called for Bharat Bandh over fuel price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X