ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟದ ಆಕ್ರೋಶ

ಬೆಂಗಳೂರು, ಡಿಸೆಂಬರ್ 02 : ಕೋವಿಡ್ ಹರಡುವುದನ್ನು ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವೆ ಜಟಾಪಟಿ ನಡೆಯುತ್ತಿದೆ. ಈಗ ಶುಲ್ಕ ಸಂಗ್ರಹದ ವಿಚಾರದಲ್ಲಿಯೂ ಶಾಲೆಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

"ಖಾಸಗಿ ಶಾಲೆಗಳು ಹಣಕಾಸಿನ ತೊಂದರೆಯನ್ನು ಎದುರಿಸುತ್ತಿವೆ. ಕೆಲವು ಶಾಲೆಗಳು ಮುಚ್ಚುವ ಹಂತಕ್ಕೆ ಸಹ ತಲುಪಿವೆ. ಪೋಷಕರು ಶುಲ್ಕವನ್ನು ಕಟ್ಟದಿರುವುದೇ ಇದಕ್ಕೆ ಕಾರಣವಾಗಿದೆ" ಎಂದು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.

"ಶಿಕ್ಷಕರು ಉತ್ತಮವಾಗಿ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದ್ದಾರೆ. ಆದರೆ, ಶುಲ್ಕ ಪಾವತಿಯಾಗದ ಕಾರಣ ಶಾಲೆಗಳು ಅವರಿಗೆ ಕನಿಷ್ಠ ವೇತನವನ್ನು ಸಹ ಪಾವತಿ ಮಾಡಲು ಆಗುತ್ತಿಲ್ಲ" ಎಂದು ಶಶಿಕುಮಾರ್ ತಿಳಿಸಿದ್ದಾರೆ.

Private Schools

"ಖಾಸಗಿ ಶಾಲೆಗಳ ಬೆಂಬಲಕ್ಕೆ ಸರ್ಕಾರ ಬರುತ್ತಿಲ್ಲ. ಶಾಲೆಗಳಲ್ಲಿ ಶೇ 60ರಷ್ಟು ಪೋಷಕರು ವಿದ್ಯಾರ್ಥಿಗಳ ಶುಲ್ಕವನ್ನು ಕಟ್ಟಿಲ್ಲ. ರಾಜ್ಯದಲ್ಲಿರುವ 20 ಸಾವಿರ ಖಾಸಗಿ ಶಾಲೆಗಳ ಪೈಕಿ 18,000 ಶಾಲೆಗಳು ತಿಂಗಳ ಶುಲ್ಕದ ಮೇಲೆಯೇ ಕಾರ್ಯ ನಿರ್ವಹಣೆ ಮಾಡುತ್ತಿವೆ" ಎಂದರು.

ಖಾಸಗಿ ಶಾಲೆಗಳ ಶುಲ್ಕ ಪಾವತಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ. ಇದರಿಂದಾಗಿ ಸಹಜವಾಗಿ ಗೊಂದಲ ಉಂಟಾಗಿದ್ದು, ಶಾಲೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಖಾಸಗಿ ಶಾಲೆಗಳ ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಸುಮಾರು 1 ಲಕ್ಷ ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಕರ್ನಾಟಕದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಆದರೆ, ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳು ಶುಲ್ಕ ಕಟ್ಟುವಂತೆ ಪೋಷಕರನ್ನು ಒತ್ತಾಯ ಮಾಡುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+