ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಬೃಹತ್ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ನವೆಂಬರ್ 30 : ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಖಾಸಗಿ ಶಾಲೆಗಳು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿವೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನದಿಂದ 10 ಸಾವಿರ ಖಾಸಗಿ ಶಾಲೆಗಳು ಬಂದ್ ಆಗಲಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸ) ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಒಂದು ಲಕ್ಷ ಖಾಸಗಿ ಶಾಲಾ ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಲೆ ಪುನರಾರಂಭದ ಬಗ್ಗೆ ಆರೋಗ್ಯ ಸಚಿವರು ನೀಡಿದ ಸಲಹೆ ಏನು? ಶಾಲೆ ಪುನರಾರಂಭದ ಬಗ್ಗೆ ಆರೋಗ್ಯ ಸಚಿವರು ನೀಡಿದ ಸಲಹೆ ಏನು?

ಶಿಕ್ಷಣ ಇಲಾಖೆ ನವೆಂಬರ್ 10ರಂದು ಹೊರಡಿಸಿರುವ ಆದೇಶದ ವಿರುದ್ಧ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗೊಂದಲದ ಹೇಳಿಕೆಗಳು, ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಸೈನಿಕ ಶಾಲೆ ಯೋಜನೆ; ಆಗುಂಬೆ ವನಸಿರಿಗೆ ಎದುರಾದ ಆತಂಕಸೈನಿಕ ಶಾಲೆ ಯೋಜನೆ; ಆಗುಂಬೆ ವನಸಿರಿಗೆ ಎದುರಾದ ಆತಂಕ

Private School

"ಕೋವಿಡ್ ಸಂಕಷ್ಟದ ಸಮಯದಲ್ಲಿ ಸರ್ಕಾರ ಖಾಸಗಿ ಶಾಲೆಗಳಿಗೆ ನೆರವು ನೀಡುವ ಬದಲು ಎಂಟು ತಿಂಗಳಿನಿಂದ ಕಿರುಕುಳ ನೀಡಲಾಗುತ್ತಿದೆ" ಎಂದು ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆರೋಪಿಸಿದ್ದಾರೆ.

ಡಿಸೆಂಬರ್‌ ಕೊನೆಯ ವಾರದಲ್ಲಿ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ!ಡಿಸೆಂಬರ್‌ ಕೊನೆಯ ವಾರದಲ್ಲಿ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ!

ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಮಾನ್ಯತೆ ನವೀಕರಣಕ್ಕೆ ಈ ವರ್ಷ ಸಲ್ಲಿಕೆ ಮಾಡಲಾಗಿದ್ದ ಸುಮಾರು 5 ಸಾವಿರ ಅರ್ಜಿಗಳನ್ನು ವಿನಾ ಕಾರಣ ತಿರಸ್ಕಾರ ಮಾಡಲಾಗಿದೆ.

ಮಕ್ಕಳ ಸುರಕ್ಷತೆಯನ್ನು ನೆಪ ಮಾಡಿಕೊಂಡು ಖಾಸಗಿ ಶಾಲೆಗಳನ್ನು ಗುರಿಯಾಗಿಸಿಕೊಂಡು ಶಾಲೆಗಳನ್ನು ಮುಚ್ಚಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ರುಪ್ಸ ಆರೋಪಿಸಿದೆ.

ಶಿಕ್ಷಣ ಸಚಿವರು ದಿನಕ್ಕೊಂದು ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ಖಾಸಗಿ ಶಾಲೆಗಳನ್ನು ಗೊಂದಲಕ್ಕೆ ತಳ್ಳುತ್ತಿದ್ದಾರೆ. ಶಾಲೆಗಳಿಂದ ಸಂಗ್ರಹಿಸಿದ ಹಣದಿಂದ ಪರಿಹಾರ ನೀಡಲು ವಿಳಂಬ ಮಾಡುತ್ತಿದ್ದಾರೆ. ಶಿಕ್ಷಕರ ಕುಟುಂಬಗಳು ಸಂಕಷ್ಟದಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ನಿಲುವಿನಿಂದಾಗಿ ಸುಮಾರು 10 ಸಾವಿರ ಖಾಸಗಿ ಶಾಲೆಗಳು ಮುಚ್ಚುವ ಭೀತಿಯಲ್ಲಿವೆ. ಶಾಲೆಗಳು ಬಂದ್ ಆದರೆ, ಲಕ್ಷಾಂತರ ಶಿಕ್ಷಕರ ಕುಟುಂಬಗಳು ಬೀದಿಪಾಲಾಗಲಿವೆ ಎಂದು ರುಪ್ಸ ಹೇಳಿದೆ.

ಖಾಸಗಿ ಶಾಲೆಗಳ ಆರಂಭ, ಆನ್ ಲೈನ್ ತರಗತಿ, ಈ ವರ್ಷದ ಶುಲ್ಕ ಸಂಗ್ರಹ ಮುಂತಾದ ವಿಚಾರದಲ್ಲಿ ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವೆ ಜಟಾಪಟಿ ನಡೆಯುತ್ತಿದೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ.

English summary
Unaided Private Schools Association (RUPSA) announced protest against Karnataka government due to recent orders on the private schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X