• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪುನೀತ್ ರಾಜ್‌ಕುಮಾರ್ ನಿಧನ, ಇಂದು ಖಾಸಗಿ ಶಾಲೆಗಳಿಗೆ ರಜೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30: ನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ಇಂದು (ಅ.30) ರಜೆ ಘೋಷಿಸಲಾಗಿದೆ.

   Puneeth Rajkumar ಅಗಲಿಕೆಯ ನಂತರ ಕರ್ನಾಟಕದಲ್ಲಿ ಇಂದು ಏನೇನು ಬಂದ್ ? | Oneindia Kannada

   ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ (Rupsa) ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್‌ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ‌ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ. ಆದರೆ, ಸರ್ಕಾರಿ ಶಾಲೆ ರಜೆ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ.

    ಪವರ್‌ಸ್ಟಾರ್ ನಿಧನದ ನಂತರ ಬೆಂಗಳೂರಿನ ಮದ್ಯದಂಗಡಿಗಳು ಬಂದ್ ಪವರ್‌ಸ್ಟಾರ್ ನಿಧನದ ನಂತರ ಬೆಂಗಳೂರಿನ ಮದ್ಯದಂಗಡಿಗಳು ಬಂದ್

   ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ಪುನೀತ್ ರಾಜಕುಮಾರ್​ರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ತಮ್ಮ ತಂದೆಯ ಹಾದಿಯಲ್ಲೇ ಸಾಗಿರುವ ಪುನೀತ್, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು, ಸಂತಾಪ ಸೂಚಿಸುತ್ತಿದೆ.


   ಚಿತ್ರಪ್ರದರ್ಶನ ಬಂದ್: ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಲ್ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ.

   ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ. ಪುನೀತ್ ಜೊತೆ ನಾನು ಚಾಮುಂಡಿ ಬೆಟ್ಟ ಹತ್ತಿ ಇಳಿಯುತ್ತಿದ್ದೆ. ಅವರು ಆರೋಗ್ಯದ ಬಗ್ಗೆ ಗಮನ ಹರಿಸುತ್ತಿದ್ದರು. ಅವರಿಗೆ ಈ ರೀತಿ ಆಗಿರೊದು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

   ಬೆಂಗಳೂರಲ್ಲಿ ಮದ್ಯ ಮಾರಾಟ ನಿಷೇಧ: ಬೆಂಗಳೂರು ನಗರದಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಅ.31ರ ಮಧ್ಯರಾತ್ರಿ ವರೆಗೆ ಸಂಪೂರ್ಣವಾಗಿ ಮದ್ಯ ಮಾರಾಟ ನಿ‍ಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ತಕ್ಷಣವೇ ಜಾರಿಗೆ ಬರಲಿದೆ.

   ಎಂಬಿಎ ಪರೀಕ್ಷೆಗೆ ಮುಂದೂಡಿಕೆ: ಇಂದು ನಡೆಯಬೇಕಿದ್ದ ನಡೆಯಬೇಕಿದ್ದ ಬೆಂಗಳೂರು ಸಿಟಿ ವಿಶ್ವವಿದ್ಯಾಲದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಪರೀಕ್ಷೆ ‌ಮುಂದೂಡಿಕೆ ಕುರಿತು ಬೆಂಗಳೂರು ಸಿಟಿ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

   ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

   ಇನ್ನು ವಿವಿ, ಕಾಲೇಜುಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಇನ್ನು ಯಾವುದೇ ಮಾಹಿತಿ ಬಂದಿಲ್ಲ, ಆದೇಶಕ್ಕೆ ಕಾಯುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

   ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರಿನ ನೃಪತುಂಗ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅ.30ರಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ವಿವಿ ಮೌಲ್ಯಮಾಪನ ಕುಲಸಚಿವ ರಾಮಕೃಷ್ಣ ರೆಡ್ಡಿ ಮಾಹಿತಿ ನೀಡಿದ್ದಾರೆ.

   ನಗರಾದ್ಯಂತ ಫುಲ್ ಸೆಕ್ಯೂರಿಟಿ: ನಗರಾದ್ಯಂತ 6 ಸಾವಿರ ಪೊಲೀಸರು, ಕೆಎಸ್ಆರ್‌ಪಿ KSRP ಪ್ಲಟೂನ್ ನಿಯೋಜನೆ ಮಾಡಲಾಗಿದ್ದು, ಭಾನುವಾರ ಮಧ್ಯ ರಾತ್ರಿವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಷ್ಟೇ ಜನ ಬಂದರೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಕುಚೇಷ್ಟೇ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ಕಮಲ್ ಪಂಥ್ ಎಚ್ಚರಿಕೆ ಕೊಟ್ಟಿದ್ದಾರೆ.

   ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ತಿಳಿಸಲಾಗಿದೆ. ಅಭಿಮಾನಿಗಳು ಶಾಂತರೀತಿಯಿಂದ ಪುನೀತ್ ಅವರನ್ನು ಕಳುಹಿಸಿಕೊಡಬೇಕು ಎಂದು ರಾಘವೇಂದ್ರ ರಾಜಕುಮಾರ್, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ವಿನಂತಿ ಮಾಡಿದ್ದಾರೆ.

   ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ನಡೆಯಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಪುನೀತ್​ ಪುತ್ರಿ ಅಮೆರಿಕದಿಂದ ಆಗಮಿಸಬೇಕಿರುವ ಹಿನ್ನೆಲೆಯಲ್ಲಿ ಭಾನುವಾರವೇ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

   English summary
   Some private schools have announced a holiday on Saturday in the wake of the death of renowned actor Puneet Raj Kumar. Private schools union Roopsa Karnataka has issued a statement on this.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X