SIR ಅಕ್ರಮದ ಆರೋಪಿಗಳ ಪಟ್ಟಿಯಲ್ಲಿ ಮೋದಿ, ಅಮಿತ್ ಶಾ ಹೆಸರು! ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ಕಲಬುರಗಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳ ಪ್ರಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರುಗಳೇ ಪ್ರಮುಖ ಆರೋಪಿಗಳು ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಎಸ್ಐಆರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಕಾಂಗ್ರೆಸ್ ಕೇಳುತ್ತಿರುವ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರಿಸುವ ಬದಲು ಚುನಾವಣಾ ಆಯೋಗವೇ ಸ್ಪಷ್ಟನೆ ನೀಡಬೇಕು. ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಕುರಿತು ಪ್ರಶ್ನಿಸುವುದು ತಪ್ಪೇ ಎಂದು ಪ್ರಶ್ನಿಸಿದರು.

Priyank Kharge Accuses Modi Amit Shah and Gyanesh of Special Intensive Revision Voter List Irregularities

Priyank Kharge: ಚುನಾವಣಾ ಆಯೋಗ ಮೌನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಉತ್ತರ ನೀಡುತ್ತಿದ್ದಾರೆಯೇ ಹೊರತು ಚುನಾವಣಾ ಆಯೋಗ ಮೌನವಾಗಿದೆ. ಕಾಂಗ್ರೆಸ್ ಯಾವುದೇ ವಿಷಯ ಪ್ರಸ್ತಾಪಿಸಿದರೂ ತಕ್ಷಣ ಪ್ರತಿಕ್ರಿಯಿಸುತ್ತಿದ್ದ ಚುನಾವಣಾ ಆಯೋಗ, ಕಳೆದ ಒಂದೂವರೆ ತಿಂಗಳಿನಿಂದ ಕೇಳಲಾಗುತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ ಎಂದು ಟೀಕಿಸಿದರು.

ಸುಮಾರು 13.2 ಕೋಟಿ ಮತದಾರರನ್ನು ಯಾವುದೇ ಸಮರ್ಪಕ ಕಾರಣವಿಲ್ಲದೆ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಶೇ. 15ರಷ್ಟು ಮತದಾರರ ಹೆಸರುಗಳನ್ನು ತೆಗೆದುಹಾಕಿರುವ ಕುರಿತು ಪ್ರಶ್ನಿಸುವುದು ತಪ್ಪೇ? ಚುನಾವಣಾ ಆಯೋಗದ ನಿರ್ಧಾರಗಳನ್ನು ಮೂವರು ಆಯುಕ್ತರು ಒಟ್ಟಾಗಿ ಕೈಗೊಳ್ಳಬೇಕಾದ ಸಂದರ್ಭದಲ್ಲಿ, ಇಬ್ಬರು ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದರೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದೇಕೆ ಎಂದು ಪ್ರಶ್ನಿಸಿದರು.

ಫಾರ್ಮ್-7 ಅರ್ಜಿಗಳನ್ನು ದುರುಪಯೋಗ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಫಾರ್ಮ್-7 ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಅರ್ಜಿಗಳನ್ನು ಸಲ್ಲಿಸಿ ಮತದಾರರ ಹೆಸರುಗಳನ್ನು ತೆಗೆಸಲು ಪ್ರಯತ್ನಿಸಿದ್ದಾರೆ. ವಿಜಯಪುರದಲ್ಲಿ ಮೃತಪಟ್ಟಿದ್ದಾರೆ ಎಂದು ಸುಳ್ಳು ದೂರು ನೀಡಿರುವುದು ಹಾಗೂ ಚಿತ್ತಾಪುರದಲ್ಲಿ ಒಂದು ಸಮುದಾಯದ 40 ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಯತ್ನಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಅವರು ಆರೋಪಿಸಿದರು.

ಚಿತ್ತಾಪುರದಲ್ಲಿ ಪರಿಶೀಲನೆ ನಡೆಸಿದಾಗ ಸಂಬಂಧಪಟ್ಟ ಮತದಾರರು ಅಲ್ಲಿಯೇ ವಾಸವಾಗಿದ್ದು, ಸ್ಥಳಾಂತರಗೊಂಡಿಲ್ಲ ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಬೇಕು ಎಂದು ಸೂಚಿಸಿದ್ದರು ಎಂದು ತಿಳಿಸಿದರು.

ಚುನಾವಣಾ ಆಯೋಗದ ಸಾಫ್ಟ್‌ವೇರ್ ಬದಲಾಯಿಸಿದ್ದು ಯಾರು? ಲಾಗಿನ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ದುರುಪಯೋಗಕ್ಕೆ ಅವಕಾಶ ಕಲ್ಪಿಸಿದ್ದು ಯಾರು? ಫಾರ್ಮ್-6 ಪ್ರಕ್ರಿಯೆಯಲ್ಲಿ ಬದಲಾವಣೆ ತಂದವರು ಯಾರು? ಇಸಿಐನ ಇರೋನೆಟ್ ಜಾಲತಾಣದಲ್ಲಿ ಬದಲಾವಣೆ ಮಾಡಲು ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದು ಹೇಳಿದರು.

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಎಸ್‌ಐಆರ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆಯಾಗಬೇಕು. ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ನಾಯಕರು ಈ ವಿಷಯದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದನ್ನು ಉಲ್ಲೇಖಿಸಿದ ಅವರು, ಪಿಯೂಷ್ ಗೋಯಲ್ ಅವರು ಈ ಹಿಂದೆ ಬೀದಿಗೆ ಇಳಿದು ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಉದಾಹರಣೆ ಇಲ್ಲ. ಈಗ ಅವರು ಬೀದಿಗಿಳಿದಿರುವುದು ಎಲ್ಲವೂ ಬಹಿರಂಗವಾಗುತ್ತಿದೆ ಎನ್ನುವು ತೋರಿಸುತ್ತದೆ ಎಂದು ಟೀಕಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ವಿದೇಶಿ ಹಣಕಾಸು ನೆರವು ಹಾಗೂ ಅವರ ಹಿಂದೆ ವಿದೇಶಿ ಕೈವಾಡವಿದೆ ಎಂಬ ಆರೋಪಗಳನ್ನು ಮಾಡುವವರು ಅದಕ್ಕೆ ಪುರಾವೆ ನೀಡಬೇಕು. ಸರ್ಕಾರ ನಿಮ್ಮದೇ ಇರುವಾಗ ಯಾಕೆ ದಾಖಲೆಗಳು ನೀಡುತ್ತಿಲ್ಲ ಎಂದು ಸವಾಲು ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+