Congress Government: ಎಂ.ಬಿ. ಪಾಟೀಲ, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ಹಂಚಿಕೆ

ಬೆಂಗಳೂರು, ಮೇ 31: ಸಿದ್ದರಾಮಯ್ಯ ಸಂಪುಟದಲ್ಲಿ ಈಗಾಗಲೇ ಎಲ್ಲಾ ಸಚಿವರುಗಳಿಗೂ ಖಾತೆ ಹಂಚಿಕೆ ಮಾಡಿದ್ದು, ಹೆಚ್ಚುವರಿಯಾಗಿ ಸಚಿವ ಎಂ.ಬಿ. ಪಾಟೀಲ ಹಾಗೂ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಖಾತೆಯನ್ನ ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ (ಐಟಿ)- ಜೈವಿಕ ತಂತ್ರಜ್ಞಾನ (ಬಿಟಿ) ಖಾತೆಯನ್ನೂ ಹಂಚಿಕೆ ಮಾಡಲಾಗಿದೆ.

mb patil and priyank kharge

ಈ ಹಿಂದೆ ಖಾತೆ ಹಂಚಿಕೆ ಮಾಡಿದಾಗ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ಖಾತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಳಿಯಲ್ಲಿಯೇ ಉಳಿಸಿಕೊಂಡಿದ್ದರೂ, ಇದೀಗ ಪರಿಷ್ಕೃತ ಖಾತೆ ಹಂಚಿಕೆ ಅಧಿಸೂಯಚನೆ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳನ್ನ ತಮ್ಮ ಬಳಿಯಲ್ಲಿ ಇಟ್ಟುಕೊಂಡಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿ:

ಸಿಎಂ ಸಿದ್ದರಾಮಯ್ಯ- ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳು

ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

ಡಾ. ಜಿ.ಪರಮೇಶ್ವರ್- ಗೃಹ

ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ

ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ

ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ

ಕೆ.ಜೆ.ಜಾರ್ಜ್‌- ಇಂಧನ

ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

ಕೃಷ್ಣ ಬೈರೇಗೌಡ- ಕಂದಾಯ

ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಜೈವಿಕ ತಂತ್ರಜ್ಞಾನ (ಬಿಟಿ)

ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

ಚಲುವರಾಯಸ್ವಾಮಿ- ಕೃಷಿ

ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

ರಹೀ ಖಾನ್: ಪೌರಾಡಳಿತ, ಹಜ್ ಖಾತೆ

ಸಂತೋಷ ಲಾಡ್- ಕಾರ್ಮಿಕ

ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

ಆರ್.ಬಿ.ತಿಮ್ಮಾಪುರ- ಅಬಕಾರಿ

ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

ಕೆ.ಎನ್.ರಾಜಣ್ಣ: ಸಹಕಾರ

ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ

ಎನ್.ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+