ಸಚಿನ್ ಪಂಚಾಳ ಪ್ರಕರಣ: ಸಿಐಡಿ ತನಿಖೆಗೆ ಪ್ರಿಯಾಂಕ್ ಖರ್ಗೆ ಆಗ್ರಹಿಸಿ ಪತ್ರ
ಬೆಂಗಳೂರು, ಡಿಸೆಂಬರ್ 30: ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ್ ಪ್ರಕರಣ ಕುರಿತಂತೆ ವಿಪಕ್ಷಗಳು ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿವೆ. ಇತ್ತ ಸೋಮವಾರ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಬೀದರ್ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ವ್ಯಾಪಕ ಚರ್ಚೆ ಆಗುತ್ತಿವೆ ಬಿಜೆಪಿ ನಾಯಕರಾದ ಆರ್.ಅಶೋಕ್, ಬಿವೈ ವಿಜಯೇಂದ್ರ ಅವರು ಸೇರಿದಂತೆ ಅನೇಕ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನು ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಎರಡು ಪ್ರತ್ಯೇಕ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಸಿಐಡಿ ತನಿಖೆಗೆ ಮನವಿ: ಸಚಿವರ ಪತ್ರದಲ್ಲಿ ಏನಿದೆ?
ಪತ್ರದಲ್ಲಿ 'ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ನಿವಾಸಿಯಾದ ಸಚಿನ್ ಪಾಂಚಾಳ್ ರವರು ದಿನಾಂಕ: 26.12.2024ರಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಅತ್ಯಂತ ದುರದೃಷ್ಟಕರ ಹಾಗೂ ಖೇದದ ಸಂಗತಿಯಾಗಿರುತ್ತದೆ. ಈ ಪ್ರಕರಣದ ಬಗ್ಗೆ ಸಂಶಯ ಮೂಡುವಂತಹ ಹಲವು ವಿಷಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯಾದ ಅಪರಾಧ ತನಿಖಾ ವಿಭಾಗಕ್ಕೆ (ಸಿ.ಐ.ಡಿ.) ವಹಿಸಲು ಈ ಮೂಲಕ ಕೋರುತ್ತೇನೆ' ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರ, ಸಚಿವರ ಕೈವಾಡ ಇದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಸೂಕ್ತ ರೀತಿಯಲ್ಲಿ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂಬ ಆಗ್ರಹ ಜೋರಾಗಿದೆ. ಈ ಮಧ್ಯೆ ಮೃತ ಅಧಿಕಾರಿ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಮುಂದಾದ ವೇಳೆ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಅಸಾಧ್ಯ
ಇತ್ತ ರಾಜೀನಾಮೆ ಕೂಗು ಎತ್ತುತ್ತಿದ್ದಂತೆ, ಕೆಂಡದಂತಾಗಿರುವ ಪ್ರಿಯಾಂಕ್ ಖರ್ಗೆ ಅವರು, ಇವರು ಯಾವ ಪ್ರಕರಣ ಸಿಬಿಐ ತನಿಖೆಗೆ ನೀಡಿದ್ದಾರೆ. ನನ್ನ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಹಾಕಲಿ ಯಾರು ಬೇಡ ಎಂದವರು. ಇವರ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ. ನನ್ನ ರಾಜೀನಾಮೆ ಕೇಳುವವರು ಮೊದಲು ದಾಖಲೆ ತೋರಿಸಲಿ. ನನ್ನ ವಿರುದ್ಧ ಆರೋಪ ಮಾಡಿದಾಕ್ಷಣೆ. ಅದು ನಿಜವೆಂದಲ್ಲ. ಇಲ್ಲ ಸಲ್ಲದ ಆರೋಪ ಮಾಡಿ ನನ್ನ ರಾಜೀನಾಮೆ ಪಡೆದುಕೊಳ್ಳಬಹುದು ಎಂದುಕೊಂಡಿದ್ದಾರೆ. ಅದು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications