ಬಿಜೆಪಿ ಅವಧಿಯಲ್ಲೂ ಕೊಲೆಗಳಾಗಿದ್ದವು, ನೆನಪಿಸಿಕೊಳ್ಳಲಿ: ಅಂಕಿ ಅಂಶಗಳನ್ನ ಬಿಚ್ಚಿಟ್ಟ ಖರ್ಗೆ
ಕಲಬುರ್ಗಿ, ಮಾರ್ಚ್ 12: ಕಲಬುರ್ಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ ಜಾಧವ್ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಅಂಕಿ ಅಂಶಗಳ ನೀಡುವ ಮೂಲಕ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಪ್ರಿಯಾಂಕ್ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ' ಎಂದು ಜಾಧವ ಹೇಳಿದ್ದಾರೆ, ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್ ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದರು ಯಾರು ? ಎಂದು ತಿರುಗೇಟು ನೀಡಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಪುನರುಚ್ಚರಿಸಿದ ಸಚಿವರು, ಗುಜರಾತ್ ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2209 ಅತ್ಯಾಚಾರ ನಡೆದಿದ್ದು 36 ಗ್ಯಾಂಗ್ ರೇಪ್ ಗಳಾಗಿವೆ ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು ಅದನ್ನು ಕಾನೂನು ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಷಾಖ್ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ ಎಂದು ಮಾರುತ್ತರ ನೀಡಿದರು.
ಚಿತ್ತಾಪುರದ ಅಪರಂಜಿ ಈಗ ಎಲ್ಲಿ ? ಎಂದು ಜಾಧವ್ ರನ್ನು ಪ್ರಶ್ನಿಸಿದ ಸಚಿವರು, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್ ರ ಅಪರಂಜಿ ನಾಪತ್ತೆಯಾಗಿದ್ದಾನೆ ಎಂದು ಕುಟುಕಿದರು.
ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ನಿಮ್ಝ್,ಟೆಕ್ಸಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೇಲ್ವೆ ಬಜೆಟ್ ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ ಡಕೋಟಾ ರೇಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್ ವಾಸ್ತವದ ಮೇಲೆ ಮಾತನಾಡಲಿ ಎಂದು ಕುಟುಕಿದರು.
ಪ್ರೊಟೋಕಾಲ್ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್, ಇತ್ತೀಚಿಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ ಎಂದರು.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡುವುದು ಅನುಮಾನ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಬಿಜೆಪಿಯಲ್ಲಿ ಯಾರಿಗೆ ಟಿಕೇಟ್ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ ಎಂದರು. ಈ ಸಲ ಗೆಲುವು ನನ್ನದೇ ಎಂದು ಜಾಧವ ಹೇಳಿದ್ದಾರೆ ಎಂದು ಕೇಳಿದಾಗ, ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರು ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.
ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮಪಂಚಾಯತ ಚುನಾವಣೆ ಗೆದ್ದಿಲ್ಲ ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದರು.
ಆರ್ ಅಶೋಕ್ ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ ಎಂದರು. ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತಕುಮಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅವರಿಗೆ ತಲೆ ಕೆಟ್ಟಿದೆ, ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications