Karnataka Government: ಪ್ರಿಯಾಂಕ್ ಖರ್ಗೆ, ಜಮೀರ್‌ಗೆ ಡಿಸಿಎಂ- ಡಿಕೆಶಿ ಸಿಎಂ? ಸದ್ದಿಲ್ಲದೇ ಶುರುವಾಗಿದೆ ಹೊಸ ಆಟ
ಬೆಂಗಳೂರು, ನವೆಂಬರ್ 01: ರಾಜ್ಯ ಕಾಂಗ್ರೆಸ್‌ನಲ್ಲಿ ಬಹುದಿನಗಳಿಂದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆಯಾದ್ರೆ ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ಜೋರಾಗಿಯೇ ಕೇಳಿಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷಗಳಾಗಿವೆ. ಈ ಹೊತ್ತಲ್ಲಿ ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಎಲ್ಲಾಗಿದೆ. ಆದ್ರೆ, ಇದರ ನಡುವೆ ಸದ್ದಿಲ್ಲದೇ ಇಬ್ಬರಿಗೆ ಡಿಸಿಎಂ ಹಾಗೂ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕನಿಗೆ ಸಿಎಂ ಪಟ್ಟ ಕಟ್ಟಲು ಸಿದ್ದತೆ ನಡೆದಿದೆ ಎನ್ನಲಾಗಿದೆ.
ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಿದೆ. ಈ ನಡುವೆ ಈ ತಿಂಗಳು ಬರೀ ಸಚಿವ ಸಂಪುಟ ಪುನರ್‌ರಚನೆಯ ಕ್ರಾಂತಿಯಾಗುತ್ತಾ ಅಥವಾ ಅಧಿಕಾರ ಹಂಚಿಕೆಯ ಸೂತ್ರದಂತೆ ಮುಖ್ಯಮಂತ್ರಿ ಸ್ಥಾನವನ್ನ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್‌ಗೆ ಬಿಟ್ಟು ಕೊಡುತ್ತಾರಾ ಎಂಬ ಚರ್ಚೆಗಳು ಕೈ ಪಾಳಯದಲ್ಲಿ ಕೇಳಿ ಬಂದಿದೆ. ಕಾಂಗ್ರೆಸ್‌ನಲ್ಲಿ ಕೇವಲ ಸಚಿವ ಸಂಪುಟ ಪುನಾರಚನೆ ಆಗುತ್ತಿಲ್ಲ. ಬದಲಿಗೆ ಮುಖ್ಯಮಂತ್ರಿ ಬದಲಾವಣೆಯೂ ಆಗಬಹುದು ಎಂಬ ಗುಮಾನಿ ಇದೆ.

ಮುಖ್ಯಮಂತ್ರಿ ಬದಲಾವಣೆ ಅಂದರೆ ಅದು ಸುಲಭಕ್ಕಂತೂ ಮುಗಿಯದ ವಿಚಾರವಲ್ಲ. ಈಗಾಗಲೇ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಿದ್ದರಾಮಯ್ಯ ಆಪ್ತ ಶಾಸಕರು ಹಾಗೂ ಸಚಿವರು ಬಹಿರಂಗವಾಗಿ ಹೇಳಿದ್ದಾರೆ. ಅಲ್ಲದೇ ಕೆಲ ದಿನಗಳ ಹಿಂದೆಯಷ್ಟೇ ಹೈಕಮಾಂಡ್ ಒಪ್ಪಿದರೇ ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸ್ಥಾನದ ಪ್ರಭಾಲ ಆಕಾಂಕ್ಷಿಯಾಗಿರುವ ಡಿ ಕೆ ಶಿವಕುಮಾರ್ ಸೈಲೆಂಟ್ ಆಗಿಯೇ ದೆಹಲಿಯಲ್ಲಿ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆಯಾದರೆ ಶೇ.100ರಷ್ಟು ಒಳಜಗಳ-ಭಿನ್ನಾಭಿಪ್ರಾಯ ಬಂದೇ ಬರುತ್ತದೆ.
ಸರ್ಕಾರ ರಚನೆಯ ಸಂದರ್ಭದಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ -ಡಿ.ಕೆ.ಶಿವಕುಮಾರ್ ಪಟ್ಟುಹಿಡಿದ್ದು, ದೆಹಲಿಗೆ ಹೋಗಿದ್ದು, ಆ ಕಾರಣಕ್ಕೇ ಸರ್ಕಾರ ರಚನೆ ವಿಳಂಬವಾಗಿತ್ತು. ಆದರೆ ದೆಹಲಿಯಲ್ಲಿ ಅಂದು ಏನು ಮಾತುಕತೆ ಆಯಿತು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಕಾಂಗ್ರೆಸ್‌ನಲ್ಲಿ ಒಬ್ಬೊಬ್ಬರೂ ಒಂದೊಂದು ರೀತಿಯ ಹೇಳಿಕೆಗಳನ್ನ ನೀಡಿದ್ದಾರೆ. ಎರಡೂವರೆ ವರ್ಷ ಸಿದ್ದರಾಮಯ್ಯ, ಮತ್ತೆ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಎಂದು ನಿರ್ಧಾರವಾಗಿದೆ ಎಂದು ಒಂದಷ್ಟು ಮಂದಿ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಒಳಗೊಳಗೇ ಮಾಡುತ್ತಿರುವ ಪ್ಲ್ಯಾನ್ ನವೆಂಬರ್‌ನಲ್ಲಿ ನಡೆಯಲಿರುವ ಸಂಪುಟ ರಚನೆ ವಿಚಾರದ ಮೇಲೆ ನೇರ ಪ್ರಭಾವ ಬೀರಲಿದೆ ಮತ್ತು ಅದರಿಂದ ಕಾಂಗ್ರೆಸ್ ಪಕ್ಷ, ಸರ್ಕಾರದ ಮೇಲೆ ವ್ಯತಿರಿಕ್ತ ಪ್ರಭಾವ ಖಂಡಿತ ಬೀರಲಿದೆ..
ಸಿಎಂ ಸ್ಥಾನವನ್ನ ಪಡೆಯುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರು ಬಂಡಾಯ ಏಳಬಹುದು. ಅವರ ಆಪ್ತರ ಬಲದಿಂದ ಸವಾಲು ಒಡ್ಡಬಹುದು. ಹಾಗೊಮ್ಮೆ ಆಗಿದ್ದೇ ಆದ್ರೆ ಪಕ್ಷ ಎರಡು ಭಾಗ ಆಗುವವರೆಗೂ ತಲುಪಬಹುದು. ಹೀಗಾಗಿ ಹೈಕಮಾಂಡ್ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಪಟ್ಟ ಕಟ್ಟಲು ಮುಂದಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಈ ನಡುವೆ ದಲಿತರನ್ನ ಸಿಎಂ ಮಾಡಬೇಕು ಎಂಬ ಆಗ್ರಹ ಜೋರಾಗಿಯೇ ಕೇಳಿಬರುತ್ತಿದೆ. ದಲಿತ ಸಿಎಂ ಎಂದು ಬಂದಾಗ ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಸಚಿವ ಕೆ.ಎಚ್.ಮುನಿಯಪ್ಪ ಮುಂಚೂಣಿಯಲ್ಲಿ ಇದ್ದಾರೆ. ಆದರೆ, ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಹಾಗೂ ಮುಸ್ಲಿಂ ಸಮುದಾಯದ ನಾಯಕ ಹಾಗೂ ಸಿದ್ದರಾಮಯ್ಯ ಆಪ್ತ ಜಮೀರ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಚಿಂತನೆ ನಡೆದಿದ್ದು, ಈ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ











Click it and Unblock the Notifications