ದೆಹಲಿಯಲ್ಲಿ ಏನೋ ನಡೆಯುತ್ತಿದೆ? ED-IT ದಾಳಿ ಸಂಚಿನ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಬೆಂಗಳೂರು : ಸ್ವಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ ತೀವ್ರಗೊಂಡಿದೆ. ಇಬ್ಬರು ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳ ಬೆನ್ನಲ್ಲೇ ಇದೀಗ ಪ್ರಿಯಾಂಕ್ ಖರ್ಗೆ ಮತ್ತೊಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ತಮ್ಮ ವಿರುದ್ಧ ಹಾಗೂ ಸಂಪುಟ ಸಹೋದ್ಯೋಗಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ ಇಲಾಖೆ (IT)ಯನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಸಂಚು ನಡೆಯುತ್ತಿದೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ. ದೆಹಲಿಯ ಅಧಿಕಾರ ವಲಯದಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದಿರುವ ಅವರ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ನನ್ನ ವಿರುದ್ಧ ED-IT ದಾಳಿ ಸಂಚು
ತಮ್ಮ ಮೇಲೆ ಇಡೀ ದಾಳಿಗೆ ಸಂಚು ನಡೆಯುತ್ತಿದೆ ನವ ದೆಹಲಿಯ ಅಧಿಕಾರಿಗಳ ವಲಯದಲ್ಲಿ ಗುಸು-ಗುಸು ಕೇಳಿ ಬರುತ್ತಿದೆ ಕೇಂದ್ರ ಸಚಿವರೊಬ್ಬರು ಮೋದಿ ಸರ್ಕಾರದ ಐಟಿ ಮತ್ತು ಇಡಿ ಅನ್ನು ನನ್ನ ಸಂಪುಟ ಸಹೋದ್ಯೋಗಿಗಳ ವಿರುದ್ಧ ಮತ್ತು ನನ್ನ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳಲು ತೀವ್ರವಾಗಿ ಒತ್ತಡ ಹೇರುತ್ತಿದ್ದಾರೆ ಎಂದು ಪರೋಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ ಖರ್ಗೆ ಎಕ್ಸ್ ಖಾತೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ದೆಹಲಿಯ ಅಧಿಕಾರ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ, ಕೇಂದ್ರ ಸಚಿವರೊಬ್ಬರು ಮೋದಿ ಸರ್ಕಾರವನ್ನು ಐಟಿ ಮತ್ತು ಇಡಿಯನ್ನು ನನ್ನ ಸಂಪುಟ ಸಹೋದ್ಯೋಗಿಗಳ ವಿರುದ್ಧ ಮತ್ತು ನನ್ನ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳಲು ತೀವ್ರವಾಗಿ ಒತ್ತಡ ಹೇರುತ್ತಿದ್ದಾರೆ, ಕೆಪಿಎಸ್‌ಸಿ ತನಿಖೆಯನ್ನು ರಾಜಕೀಯ ಮರೆಮಾಚಲು ಬಳಸುತ್ತಿದ್ದಾರೆ.
ಆರ್‌ಎಸ್‌ಎಸ್‌ನ ಹೊಸ ಗ್ರೂಪ್ ಡಿ ನೇಮಕಾತಿಯು ಕೆಪಿಎಸ್‌ಸಿ ನೇಮಕಾತಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ನನ್ನನ್ನು ತಪ್ಪಾಗಿ ಸಿಲುಕಿಸುವಂತೆ ಎಲ್ಲಾ ಆರೋಪಿಗಳ ಮೇಲೆ ಒತ್ತಡ ಹೇರಲು ಇಡಿಯನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. "ಅತ್ಯಂತ ಕಷ್ಟಪಟ್ಟು ಕೆಲಸ ಮಾಡುವ" ಗೌರವಾನ್ವಿತ ಸಚಿವರು ಏಕಾಂಗಿಯಾಗಿ ಕ್ರಮ ಕೈಗೊಳ್ಳಲು ಸಿದ್ಧರಿಲ್ಲ ಎಂದು ತೋರುತ್ತದೆ. ಅವರ ಹತಾಶೆಯಲ್ಲಿ, ಅವರು ತಮ್ಮದೇ ಆದ ಸಮ್ಮಿಶ್ರ ಪಾಲುದಾರರನ್ನು ತಮ್ಮೊಂದಿಗೆ ಎಳೆದುಕೊಂಡು ಹೋಗಲು ನಿರ್ಧರಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದು ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿಯಿದೆ"
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿದ್ದು, ಈಗಾಗಲೇ ಕೆಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಇನ್ನಷ್ಟು ತನಿಖೆ ನಡೆಸಿದ ಬಳಿಕ ಮತ್ತಷ್ಟು ಸತ್ಯಾಂಶಗಳು ಬಹಿರಂಗವಾಗಲಿವೆ. ತನಿಖೆಯಲ್ಲಿ ಯಾರ ಮೇಲಾದರೂ ಅನುಮಾನ ವ್ಯಕ್ತವಾದರೆ, ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Priyank Kharge: ಕುಮಾರಸ್ವಾಮಿ ವಿರುದ್ದ ಅಸಮಾಧಾನ
ಸಾರ್ವಜನಿಕ ಜೀವನದಲ್ಲಿರುವವರು ತಮ್ಮ ಸ್ಥಾನಮಾನ ಹಾಗೂ ಕುರ್ಚಿಯ ಘನತೆಯನ್ನು ಕಾಪಾಡಿಕೊಳ್ಳಬೇಕು. ಪದೇಪದೇ ವೈಯಕ್ತಿಕ ಟೀಕೆ, ಜಾತಿ ಮತ್ತು ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ಹಾಗೂ ಏಕವಚನದ ಬಳಕೆ ಮುಂದುವರಿದಿರುವುದು ಸರಿಯಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ತನಿಖೆ ವೇಳೆ ಕುಮಾರಸ್ವಾಮಿ ಹೆಸರು ಪ್ರಸ್ತಾಪ
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ ತಾಂತ್ರಿಕವಾಗಿ ಪರಿಶೀಲನೆ ನಡೆಸಿದಾಗ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತನಿಖೆಯ ವೇಳೆ ತಮ್ಮ ಹೆಸರು ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿದ್ದರು, ಇನ್ನೊಂದೆಡೆ ಡಿಜಿ ಕಚೇರಿವರೆಗೆ ಪಾದಯಾತ್ರೆ ನಡೆಸಿದ್ದರು ಎಂದರು.
ಪ್ರಕರಣದ ಮೂಲ ಎಲ್ಲಿದೆ, ಇದನ್ನು ಯಾರು ಮಾಡಿಸಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಎಫ್‌ಐಆರ್‌ನಲ್ಲಿ ಈ ಪ್ರಕರಣದ ಪ್ರಚಾರ ಮತ್ತು ಅದರ ಹಿಂದೆ ಕೆಲಸ ಮಾಡಿದವರ ಕುರಿತು ಸ್ಪಷ್ಟ ಉಲ್ಲೇಖವಿದೆ. ಕುಮಾರಸ್ವಾಮಿ ಅವರೊಂದಿಗೆ ಕೆಲಸ ಮಾಡಿದ್ದವರು ಹಾಗೂ ಅವರ ಆಪ್ತರು ತನಿಖೆಗೆ ಹಾಜರಾಗುತ್ತಿಲ್ಲ. ತನಿಖೆಗೆ ಸಹಕರಿಸುವಂತೆ ಅವರೇ ಹೇಳಬೇಕಿತ್ತು. ಯಾಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು.
ಹಾರ್ಡ್‌ವೇರ್ ಹಾಗೂ ತಾಂತ್ರಿಕ ಸಾಕ್ಷ್ಯಗಳು ಲಭ್ಯ
ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದ ಬಳಿಕ ದೆಹಲಿಯಲ್ಲಿ ಮತ್ತೊಬ್ಬ ವ್ಯಕ್ತಿ ಪತ್ತೆಯಾಗಿದ್ದಾನೆ. ಈ ಸಂಬಂಧ ಸಿಸಿಟಿವಿ ದೃಶ್ಯಗಳು ಲಭ್ಯವಿವೆ. ಉಪಕರಣಗಳನ್ನು ಎಲ್ಲಿಂದ ಖರೀದಿಸಲಾಗಿದೆ, ಯಾರ ಸೂಚನೆಯ ಮೇರೆಗೆ ಈ ಕಾರ್ಯ ನಡೆದಿದೆ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ. ದೆಹಲಿ ಮೂಲದ ಇಬ್ಬರು ಸೇರಿದಂತೆ ಒಟ್ಟು ಮೂವರು ವ್ಯಕ್ತಿಗಳು ಕುಮಾರಸ್ವಾಮಿ ಅವರೊಂದಿಗೆ ಅಧಿಕೃತವಾಗಿ ಕೆಲಸ ಮಾಡಿದ್ದವರು ಎಂಬ ಮಾಹಿತಿ ಇದೆ. ಈ ಪ್ರಕರಣದಲ್ಲಿ ಹಾರ್ಡ್‌ವೇರ್ ಹಾಗೂ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಕುಮಾರಸ್ವಾಮಿ ಅವರು ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. "ಇದು ಕೇವಲ ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿ ಇದೆ" ಎಂದು ವ್ಯಂಗ್ಯವಾಡಿದರು.


Click it and Unblock the Notifications
