ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್
ರಾಜ್ಯದಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೇಸಿಗೆ ಬಂತು ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಬಿಸಿಲ ಝಳದಿಂದ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಈ ಬಾರಿ ಪರಿಸ್ಥಿತಿ ಮತ್ತಷ್ಟು ಸವಾಲಾಗುವ ನಿರೀಕ್ಷೆ ಇದೆ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ, ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಎಚ್ಚೆತ್ತುಕೊಂಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಈ ಕುರಿತು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ನಿಯಮಿತ ಸಭೆ ಮತ್ತು ಪಾರದರ್ಶಕತೆ
ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಸಕ್ರಿಯವಾಗಿ ಕೆಲಸ ಮಾಡಬೇಕಿದೆ. ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ತಿಂಗಳ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಕಡ್ಡಾಯವಾಗಿ ಸಭೆ ನಡೆಸಬೇಕು. ಈ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ವಸ್ತುಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಬೇಕು. ಆಯಾ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ಸೂಚಿಸಲಾಗಿದೆ.
24/7 ನಿಯಂತ್ರಣ ಕೊಠಡಿ ಮತ್ತು ಕ್ಷಿಪ್ರ ಕಾರ್ಯಪಡೆ
ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿಗಳನ್ನು (Control Rooms) ತೆರೆಯಲು ಸೂಚಿಸಲಾಗಿದೆ. ಇಲ್ಲಿಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ 'ಕ್ಷಿಪ್ರ ಕಾರ್ಯಪಡೆ' ರಚಿಸಿ, ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಆದೇಶಿಸಲಾಗಿದೆ. ಒಡೆದ ಪೈಪ್ಲೈನ್ಗಳನ್ನು ತಕ್ಷಣ ಸರಿಪಡಿಸುವುದು, ಕೆಟ್ಟು ನಿಂತಿರುವ ಬೋರ್ವೆಲ್ ಮೋಟಾರ್ಗಳನ್ನು ದುರಸ್ತಿ ಮಾಡುವುದು ಈ ಕಾರ್ಯಪಡೆಯ ಪ್ರಮುಖ ಜವಾಬ್ದಾರಿಯಾಗಿದೆ. ಸಾರ್ವಜನಿಕರ ದೂರುಗಳಿಗೆ ಈ ಪಡೆ ತಕ್ಷಣ ಸ್ಪಂದಿಸಬೇಕಿದೆ.
ಶುದ್ಧ ನೀರು ಮತ್ತು ನೈರ್ಮಲ್ಯ ಕಾಪಾಡುವಿಕೆ
ಬೇಸಿಗೆಯಲ್ಲಿ ಕಲುಷಿತ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿರುವ ನೀರಿನ ಮೂಲಗಳನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಕೊಳವೆಬಾವಿಗಳ ಸುತ್ತಮುತ್ತ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು.
ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಸುತ್ತ ಕಾಂಕ್ರೀಟ್ ಕಟ್ಟೆ ನಿರ್ಮಿಸಿ, ಕಲುಷಿತ ನೀರು ಒಳಗೆ ಸೇರದಂತೆ ಮುಂಜಾಗ್ರತೆ ವಹಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ಘಟಕಗಳ (RO Plants) ದುರಸ್ತಿ ಕಾರ್ಯಗಳನ್ನು ಕೂಡಲೇ ಪೂರ್ಣಗೊಳಿಸುವಂತೆಯೂ ಸೂಚಿಸಲಾಗಿದೆ.
ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 21, 2026
◆ ಮುಂದಿನ ಮೂರು ತಿಂಗಳು ಪ್ರತಿ ತಿಂಗಳಿನ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ಕುಡಿಯುವ ನೀರಿನ ಸಮಸ್ಯೆ ಕುರಿತ…
ಸಾರ್ವಜನಿಕರಲ್ಲಿ ಜಾಗೃತಿ
ಕೇವಲ ಅಧಿಕಾರಿಗಳು ಮಾತ್ರವಲ್ಲ, ಸಾರ್ವಜನಿಕರೂ ನೀರಿನ ಮಹತ್ವ ಅರಿಯಬೇಕು. ನೀರಿನ ಮೂಲಗಳ ಸುರಕ್ಷತೆಯನ್ನು ಕಾಪಾಡುವುದು ಮತ್ತು ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ತಿಳಿಸಲಾಗಿದೆ. ನೀರಿನ ಮಿತಬಳಕೆ ಮಾಡುವ ಮೂಲಕ ಸಾರ್ವಜನಿಕರು ಸರ್ಕಾರದ ಜೊತೆ ಕೈಜೋಡಿಸಬೇಕಾದ ಅವಶ್ಯಕತೆ ಇದೆ.
ಒಟ್ಟಾರೆಯಾಗಿ, ಬೇಸಿಗೆಯ ಕುಡಿಯುವ ನೀರಿನ ಸವಾಲನ್ನು ಸಮರ್ಥವಾಗಿ ಎದುರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಮರೋಪಾದಿಯಲ್ಲಿ ತಯಾರಿ ನಡೆಸುತ್ತಿದೆ. ಹಳ್ಳಿಗರಿಗೆ ನೀರು ಒದಗಿಸಲು ಟ್ಯಾಂಕರ್ ವ್ಯವಸ್ಥೆ ಸೇರಿದಂತೆ ಪರ್ಯಾಯ ಮಾರ್ಗಗಳ ಬಗ್ಗೆಯೂ ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಎಚ್ಚರಿಸಲಾಗಿದೆ. ಯಾವುದೇ ಹಳ್ಳಿಯಲ್ಲೂ ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.
-
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Summer Gardening: ಸುಡು ಬಿಸಿಲಲ್ಲೂ ನಿಮ್ಮ ಕೈತೋಟದ ಹಸಿರಾಗಿರಲಿ: ಗಿಡಗಳ ರಕ್ಷಣೆಗೆ ಇಲ್ಲಿವೆ ಸರಳ ಸೂತ್ರಗಳು -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ














Click it and Unblock the Notifications