RSS ಕಾರ್ಯಕ್ರಮಕ್ಕೆ ಪ್ರಿಯಾಂಕ್ ಖರ್ಗೆ ವಿರೋಧ: ‘ಅಪಾರ್ಟ್‌ಮೆಂಟ್‌ಗಳಲ್ಲಿ ಸೈದ್ಧಾಂತಿಕ ಪ್ರಚಾರವೇ’ ಎಂದಿದ್ಯಾಕೆ
RSS: ರಾಷ್ಟ್ರೀಯ ಸ್ವಯಂ ಸೇವಾ ಸಂಘ (RSS)ದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಅಪಾರ್ಟ್‌ಮೆಂಟ್ ಸಮುದಾಯಗಳು ಕಾನೂನು ಮತ್ತು ನಿಯಂತ್ರಣದ ವಿಚಾರದಲ್ಲಿ ಪ್ರಶ್ನೆಗಳನ್ನು ಎದುರಿಸುತ್ತಿರುವ ಸಂಸ್ಥೆಗಳಿಗೆ ತಮ್ಮ ಆವರಣದ ಬಾಗಿಲು ತೆರೆಯುತ್ತಿರುವುದು ಗಮನಾರ್ಹವಾಗಿದೆ. ಅದರಲ್ಲೂ ಯುವಕರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಇನ್ನಷ್ಟು ಚರ್ಚೆಗೆ ಕಾರಣವಾಗಿದೆ ಎಂದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಿಯಾಕ್ಟ್ ಮಾಡಿದ್ದಾರೆ.
ನಿಮ್ಮನ್ನು "RSS ಪರಿಚಯ" ಕುರಿತ ಸಂವಾದ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಗಿದೆ ಎನ್ನುವ ಆರ್‌ಎಸ್‌ಎಸ್‌ನ ಆಹ್ವಾನ ಪತ್ರಿಕೆಯೊಂದನ್ನು ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಅವರು ಶೇರ್ ಮಾಡಿಕೊಂಡಿದ್ದಾರೆ. ಜಾಹೀರಾತು ಅಥವಾ ಪ್ರಚಾರ ಮಾಡಿರುವ ಕಾರ್ಯಕ್ರಮದ ವಿಷಯ ಹೀಗಿದೆ: "RSS ಪರಿಚಯ - ಉದ್ದೇಶಗಳು, ಚಟುವಟಿಕೆಗಳು ಮತ್ತು ಕಾರ್ಯಗಳು"

ಕಾರ್ಯಕ್ರಮದ ಉದ್ದೇಶವಾಗಿ, "RSSನ ದೃಷ್ಟಿಕೋನ ಮತ್ತು ಕಾರ್ಯವೈಖರಿಯನ್ನು ಅರ್ಥಮಾಡಿಕೊಳ್ಳುವುದು ಹಾಗೂ ಬಲಿಷ್ಠ, ಏಕೀಕೃತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಅದು ಹೇಗೆ ಕೊಡುಗೆ ನೀಡುತ್ತದೆ ಎಂಬುದನ್ನು ತಿಳಿದುಕೊಳ್ಳುವುದು" ಎಂದು ಹೇಳಲಾಗಿದೆ. ಇಂತಹ ಸಂದರ್ಭದಲ್ಲಿ ಅಪಾರ್ಟ್‌ಮೆಂಟ್ ಸಂಘಗಳು ಒಂದು ಸರಳ ಪ್ರಶ್ನೆಯನ್ನು ಕೇಳಬೇಕು: ವಸತಿ ಸಮುದಾಯಗಳು, ವಿಶೇಷವಾಗಿ ಯುವಕರಿಗೆ, ಸೈದ್ಧಾಂತಿಕ ಪ್ರಚಾರ ಅಥವಾ ಸಂಘಟಿತ ರಾಜಕೀಯ-ಸಾಮಾಜಿಕ ವಿಚಾರಗಳ ಪ್ರಭಾವ ಬೀರುವ ಸ್ಥಳಗಳಾಗಬೇಕೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು ಒಂದು ಸಂಸ್ಥೆ ನಿವಾಸಿಗಳು ಮತ್ತು ಅವರ ಮಕ್ಕಳನ್ನು ತಲುಪಲು ಬಯಸಿದರೆ, ಅದರ ಕಾನೂನುಬದ್ಧ ಸ್ಥಾನಮಾನ, ಹಣಕಾಸು, ಸಂಘಟನೆಯ ರಚನೆ ಮತ್ತು ಹೊಣೆಗಾರಿಕೆಯ ಬಗ್ಗೆ ಪಾರದರ್ಶಕ ಮಾಹಿತಿ ನೀಡುವುದು ಕನಿಷ್ಠ ಅಗತ್ಯವಾಗಿದೆ ಎಂದೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾದಿಸಿದ್ದಾರೆ. ಈ ಪೋಸ್ಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆರ್‌ಎಸ್‌ಎಸ್ ಆಹ್ವಾನ ಪತ್ರಿಕೆಯಲ್ಲಿ ಏನಿದೆ ?
ನಿಮ್ಮನ್ನು "RSS ಪರಿಚಯ" ಕುರಿತ ಸಂವಾದ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಗಿದೆ ಎನ್ನುವ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಫೋಟೋವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿದ್ದಾರೆ. ಇದು ಆರ್‌ಎಸ್‌ಎಸ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಅಲ್ಲದೆ ಇದನ್ನು ಅಪಾರ್ಟ್‌ಮೆಂಟ್‌ಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ನೆಟ್ಟಿಗರು ಹೇಳಿದ್ದೇನು ?
ಸರ್, ಇಷ್ಟೆಲ್ಲಾ ಇದ್ದರೂ, ಕಾಲೇಜು ಶಿಕ್ಷಣ ಇಲಾಖೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಏಕೆ ಅವಕಾಶ ನೀಡುತ್ತಿದ್ದೀರಿ? ಇಲಾಖೆಯಲ್ಲಿ ಲಭ್ಯವಿರುವ ಪಟ್ಟಿಯು ಸಂಘಿ ಅಂಶಗಳಿಂದ ತುಂಬಿದೆ. ಈ ಯೋಜನೆಯು ಬಿಜೆಪಿ ಆರ್‌ಎಸ್‌ಎಸ್‌ನ ಕನಸಿನ ಕೂಸು ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.
ಸಕ್ಕರೆ ಎಲ್ಲಿರುತ್ತದೆಯೋ ಅಲ್ಲಿ ಇರುವೆಗಳು ಹೋಗುತ್ತವೆ... ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ಈ ದೇಶಕ್ಕಾಗಿ ನಿಸ್ವಾರ್ಥವಾಗಿ ಏನು ಮಾಡುತ್ತಿದೆ ಎಂದು ಜನರಿಗೆ ತಿಳಿದಿದೆ. ಯಾರೂ ಕಾಂಗ್ರೆಸ್‌ಗೆ ಬಾಗಿಲು ತೆರೆಯುವುದಿಲ್ಲ, ನೀವು ಯಾರು ಮತ್ತು ಈ ದೇಶಕ್ಕೆ ನಿಮ್ಮ ಕೊಡುಗೆಗಳೇನು ಎಂದು ಅವರಿಗೆ ತಿಳಿದಿದೆ, ನೀವು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ. ಮೊದಲನೆಯದಾಗಿ ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.


Click it and Unblock the Notifications
