Priyank Kharge: ಇದು ಬಿಜೆಪಿಯ 40% ಹಗರಣಕ್ಕೆ ಸಿಕ್ಕಿರುವ ಕ್ಲೀನ್ ಚಿಟ್ ಅಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ನವೆಂಬರ್‌ 19: 40% ಕಮಿಷನ್ ಆರೋಪದ ತನಿಖೆ ನಡೆಸಿದ್ದ ಲೋಕಾಯುಕ್ತದಲ್ಲಿ ಆರೋಪ ಸಾಬೀತಾಗಿಲ್ಲ ಎಂಬ ವಿಚಾರವಾಗಿ ಬಿಜೆಪಿ ವಾದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರತಿಕ್ರಿಸಿದ್ದು, ಕೇವಲ ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನಕ್ಕೆ ಸಂಬಂಧಿಸಿದ ಕೇವಲ ಒಂದು ಕಾಮಗಾರಿಗೆ ಸಂಬಂಧಿಸಿದಂತೆ ಮಾಡಿರುವ ತನಿಖೆ, ಇದು ಬಿಜೆಪಿಯ 40% ಹಗರಣಕ್ಕೆ ಸಿಕ್ಕಿರುವ ಕ್ಲೀನ್ ಚಿಟ್ ಅಲ್ಲ,
ಅಥವಾ ಅಕ್ರಮದ ನಿರಾಕರಣೆಯೂ ಅಲ್ಲ ಎಂದು ಹೇಳಿದ್ದಾರೆ.

ಆರೋಪ ಮಾಡಿದವರು ಅಕಾಲಿಕ ಮರಣದಿಂದಾಗಿ ಸಾಕ್ಷ್ಯಾಧಾರಗಳ ಕೊರತೆ ಉಂಟಾದ್ದರಿಂದ ಆರೋಪವನ್ನು ತನಿಖೆಯಲ್ಲಿ ಸಾಬೀತು ಮಾಡಲು ಸಾಧ್ಯವಾಗಿರುವುದಿಲ್ಲ, ಗುತ್ತಿಗೆದಾರರು ಮಾಡಿದ್ದ ಇತರ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಲು ಮುಂದಾಗಲೇ ಇಲ್ಲ ಬಿಜೆಪಿ ಸರ್ಕಾರ. ಇದು ಬಿಜೆಪಿಯವರ ಜಾಣ ಕುರುಡುತನವಲ್ಲವೇ? ಎಂದು ಪ್ರಿಯಾಂಕ್‌ ಖರ್ಗೆ ಅವರು ಪ್ರಶ್ನಿಸಿದ್ದಾರೆ.

Priyank Kharge Reaction On Ambikapathy Allegations On 40 Percent Commission

ದಿನಾಂಕ 30/08/2022ರಂದು ND TV ಗೆ ನೀಡಿದ ಹೇಳಿಕೆಯಲ್ಲಿ ದಿವಂಗತ ಆರ್. ಅಂಬಿಕಾಪತಿ ಹಾಗೂ ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು PWD, ಆರೋಗ್ಯ, ವಸತಿ, ಉನ್ನತ ಶಿಕ್ಷಣ, ಸಣ್ಣ ನೀರಾವರಿ ಹೀಗೆ ಹಲವು ಇಲಾಖೆಗಳಲ್ಲಿನ ಕಮಿಷನ್ ಹಾಗೂ ಕೋಲಾರ ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವರಾದ ಮುನಿರತ್ನರವರ ವಿರುದ್ಧ ಲಂಚದ ಆರೋಪ ಹಾಗೂ ಕರ್ನಾಟಕ ಖಾಸಗಿ ಶಾಲಾ ಮಾಲೀಕರ ಎರಡು ಸಂಘಟನೆಗಳ ಲಂಚದ ಆರೋಪ, ಅಲ್ಲದೆ ಪಾವಗಡ ಆಸ್ಪತ್ರೆ ನಿರ್ಮಾಣ ಕಾಮಗಾರಿಯಲ್ಲಿ ಲಂಚದ ಅಕ್ರಮದ ಬಗ್ಗೆ ಆರೋಪಿಸಿದ್ದರು. ಆದರೆ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ವಹಿಸಿದ್ದು ಕೇವಲ ಬಿಬಿಎಂಪಿ ಪೂರ್ವ ವಲಯಕ್ಕೆ ಸಂಬಂಧಿಸಿದ ಆಟದ ಮೈದಾನ ಕಾಮಗಾರಿಯ ಒಂದು ಆರೋಪವನ್ನು ಮಾತ್ರ.

ಲೋಕಾಯುಕ್ತ ತನಿಖೆಗೆ ವಹಿಸಿದ್ದು 27/ 03/ 2023 ರಂದು, ಅಂದು ಬಿಜೆಪಿ ಸರ್ಕಾರವಿತ್ತು. ಈ ಸಂದರ್ಭದಲ್ಲಿ NDTV ಯಲ್ಲಿ ನೀಡಿದ ಹೇಳಿಕೆಯೊಂದನ್ನು ಆಧರಿಸಿ ತನಿಖೆಗೆ ವಹಿಸಿದ ಬಿಜೆಪಿ ಸರ್ಕಾರ ಇನ್ನುಳಿದ ಆರೋಪಗಳನ್ನು ತನಿಖೆಗೆ ವಹಿಸಲಿಲ್ಲ ಏಕೆ? ಇದಲ್ಲದೆ 40% ಕಮಿಷನ್ ಗೆ ಸಂಬಂಧಿಸಿದಂತೆ ಇನ್ನೂ ಹಲವು ವಿಷಯಗಳ ಬಗ್ಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದರೂ ಏಕೆ ತನಿಖೆಗೆ ವಹಿಸಲು ಗಂಭೀರವಾಗಿ ಪರಿಗಣಿಸಲಿಲ್ಲ?

ಲೋಕಾಯುಕ್ತ ವರದಿಯಲ್ಲಿ ಅಂಬಿಕಾಪತಿಯವರು ಮರಣ ಹೊಂದಿರುವ ಕಾರಣ, ಸದರಿಯವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಲಿಲ್ಲ, ಹಾಗಾಗಿ ಅಂಬಿಕಾಪತಿಯವರು ಮಾಡಿರುವ ಆಪಾಧನೆಯು ಮೇಲ್ನೋಟಕ್ಕೆ ಸಾಬೀತಾಗಿರುವುದಿಲ್ಲವೆಂದು ವಿಚಾರಣಾಧಿಕಾರಿಗಳು ವಿಚಾರಣಾ ವರದಿಯನ್ನು ಸಲ್ಲಿಸಿರುತ್ತಾರೆ.

ತನಿಖಾಧಿಕಾರಿಯು ತನಿಖೆಯ ವಿಚಾರವಾಗಿ ಅಂಬಿಕಾಪತಿ ಅವರ ಮನೆಗೆ ತೆರಳಿದಾಗ ಅಂಬಿಕಾಪತಿ ಮರಣ ಹೊಂದಿರುತ್ತಾರೆ, ಅವರ ಪುತ್ರನಿಗೆ ತಂದೆ ಮಾಡಿದ್ದ ಆರೋಪದ ಕುರಿತು ಯಾವುದೇ ಮಾಹಿತಿ ಇರುವುದಿಲ್ಲ,, ತನಿಖಾಧಿಕಾರಿ ಅಂಬಿಕಾಪತಿಯವರ ಮರಣ ಪ್ರಮಾಣಪತ್ರವನ್ನು ಪಡೆದು ಹಿಂತಿರುಗುತ್ತಾರೆ.

ವಿವಿಧ ಇಲಾಖೆಗಳಲ್ಲಿನ 40% ಕಮಿಷನ್ ಆರೋಪದ ಕುರಿತ ಸಮಗ್ರ ತನಿಖೆಗಾಗಿ ಜಸ್ಟಿಸ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲಾಗಿದ್ದು ಪ್ರಸ್ತುತ ತನಿಖೆ ನಡೆಯುತ್ತಿದೆ, ಈ ಆಯೋಗವು ನೀಡುವ ವರದಿಯ ಆಧಾರದ ಮೇಲೆ " ಬಿಜೆಪಿ ಸರ್ಕಾರದ 40% ಕಮಿಷನ್" ಆರೋಪದ ಕುರಿತ ಸತ್ಯಾಸತ್ಯತೆ ಹೊರಬರಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ PSI ಹಗರಣ, ಗಂಗಾಕಲ್ಯಾಣ ಹಗರಣ, KKRDB ಹಗರಣ, ಕೋವಿಡ್ ಹಗರಣ ಹಾಗೂ ಇನ್ನಿತರ ಹಗರಣಗಳು ನಡೆದಿದ್ದರೂ ಅವುಗಳನ್ನು ಬಿಜೆಪಿ ನಿರಾಕರಿಸುತ್ತಲೇ ಬಂದಿತ್ತು.ಆದರೆ ಈಗ ಅವೆಲ್ಲಾ ಹಗರಣಗಳು ನಡೆದಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗುತ್ತಿವೆ,
ಉದಾಹರಣೆಗೆ..

◆ 545 PSI ಹಗರಣ ನಡೆದೇ ಇಲ್ಲವೆಂದು ವಾದಿಸುತ್ತಿದ್ದ ಬಿಜೆಪಿಗೆ ಈಗ ಉತ್ತರ ಸಿಕ್ಕಿದೆ. ನಮ್ಮ ಸರ್ಕಾರವು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

◆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಆಯೋಗದ ಮಧ್ಯಂತರ ವರದಿಯಲ್ಲಿ ಕೋವಿಡ್ ಅವಧಿಯಲ್ಲಿ ನಡೆದಿದ್ದ ಅಕ್ರಮ ಸಾಬೀತಾಗಿದ್ದು, ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀ ರಾಮುಲುರವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಸೆಕ್ಷನ್ 7 ಹಾಗೂ ಸೆಕ್ಷನ್ 11ರ ಅಡಿ ವಿಚಾರಣೆ ನಡೆಸಬಹುದೆಂದು ವರದಿ ಸಲ್ಲಿಸಿರುತ್ತಾರೆ.

◆ KKRDB ಯಲ್ಲಿಯೂ ಸಹ ಹಗರಣ ನಡೆದೇ ಇಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದರು, ಆದರೆ ಈಗ ನಿವೃತ್ತ IAS ಅಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ,

◆ ಗಂಗಾ ಕಲ್ಯಾಣ ಯೋಜನೆಯಲ್ಲಿನ ಅಕ್ರಮವನ್ನು ನಿರಾಕರಿಸಲಾಗಿತ್ತು, ಆದರೆ ಇಲಾಖಾ ತನಿಖೆಯಲ್ಲಿ ಆರೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+