RSS ನಿಷೇಧ ಹೇಳಿಕೆ ಬೆನ್ನಲ್ಲೆ, ಜೀವ ಬೆದರಿಕೆ ಕರೆ: ವಿಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಅಕ್ಟೋಬರ್ 15: ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಪತ್ರ ಬರೆಯುತ್ತಿದ್ದಂತೆ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು ಇದೀಗ ಬೆದರಿಕೆ ಕರೆ ಕುರಿತು ಸಚಿವ ಪ್ರಿಯಾಂಕ ಖರ್ಗೆ ತಮ್ಮ ಟ್ವೀಟ್ ಖಾತೆಯಲ್ಲಿ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು ಬೆಳಗ್ಗೆ ಕರೆಯ ವಿಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ವಿಡಿಯೋ ರಿಲೀಸ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡುತ್ತಿರುವ ವಿಡಿಯೋ ರಿಲೀಸ್ ಮಾಡಿದ್ದಾರೆ.ಹಿಂದಿಯಲ್ಲಿ ಮಾತನಾಡುತ್ತ ಅಶ್ಲೀಲವಾಗಿ ನಿಂದನೆ ಮಾಡುತ್ತಿದ್ದಾರೆ. ಆರ್ ಎಸ್ ಎಸ್ ಶಾಖೆಯಲ್ಲಿ ಇದನ್ನೆ ಕಲಿಸುತ್ತಾರ? ಮೋಹನ್ ಭಾಗವತ್ ನಿಮಗೆ ಇದನ್ನೇ ಕಲಿಸುತ್ತಾರ? ಎಂದು ಕರೆ ಮಾಡಿದ ವ್ಯಕ್ತಿಗೆ ಪ್ರಿಯಾಂಕ ಖರ್ಗೆ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಆರ್ ಎಸ್ ಎಸ್ ಯುವಜನತೆಯ ಮನಸ್ಸಿನಲ್ಲಿ ಕಲ್ಮಶ ತುಂಬುತ್ತದೆ ಅಂತ ಹೇಳಿದ್ದೆ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಇದು ಸಣ್ಣ ಉದಾಹರಣೆಯಾಗಿದೆ ನಿರಂತರ ಕರೆಗಳ ಬಗ್ಗೆ ಇದೊಂದು ಸ್ಯಾಂಪಲ್ ಎಂದು ಟ್ವೀಟ್ ಮಾಡಿದ್ದಾರೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಎಂದು ಹೇಳಿದರು.
RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 15, 2025
ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.
ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ… pic.twitter.com/KqnSsiLWl6
ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿ ವೈ ವಿಜಯೇಂದ್ರ, ಆರ್ ಅಶೋಕ್, ಸಿಟಿ ರವಿ, ಸುನೀಲ್, ಹಾಗೂ ಛಲವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ.
ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ.
ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications