Breaking; ಬಿಜೆಪಿ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ

ಬೆಂಗಳೂರು, ಮೇ 07; ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಶನಿವಾರ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಚರ್ಚೆಯ ಬಿಸಿ ಹೆಚ್ಚಿಸಿದ್ದಾರೆ.

ವಿಧಾನಸೌಧವನ್ನು 'ವ್ಯಾಪಾರ ಸೌಧ' ಮಾಡಿದ್ದೇ ಬಿಜೆಪಿಯ ಸಾಧನೆ ಎಂದು ಮಾಜಿ ಸಚಿವರು ಟೀಕಿಸಿದ್ದಾರೆ. ಅತ್ತ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Rate Card

ಯಾವುದಕ್ಕೆ ಎಷ್ಟು ದರ?; ಪ್ರಿಯಾಂಕ್ ಖರ್ಗೆ ಮಾಡಿರುವ ಟ್ವೀಟ್ ಹೀಗಿದೆ

ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್

* ಸಿಎಂ ಹುದ್ದೆಗೆ - 2500 ಕೋಟಿ
* PSI ಹುದ್ದೆಗೆ - 80 ಲಕ್ಷ
* ಮಂತ್ರಿಗಿರಿಗೆ - 50-70 ಕೋಟಿ
* ಕಾಮಗಾರಿಗಳಿಗೆ -ಶೇ 40
* ಮಠಗಳಿಗೆ - ಶೇ 30
* ವರ್ಗಾವಣೆ - FIXED RATE

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ; ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, "ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು ನಿಮ್ಮನ್ನು ಮುಖ್ಯಮಂತ್ರಿ ಮಾಡ್ತಿವಿ 2,500 ಕೋಟಿ ಸಿದ್ಧವಿಟ್ಟುಕೊಳ್ಳಿ ಎಂದಿದ್ದರು" ಎಂದು ಹೇಳಿಕೆ ನೀಡಿದ್ದರು.

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾತನಾಡಿ, "ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಕುರಿತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಬೇಕು" ಎಂದು ಶುಕ್ರವಾರ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+