Lok Sabha Elections 2024: ಕರ್ನಾಟಕದತ್ತ ಕೈ ನಾಯಕಿ! ಲೋಕಸಭೆಗೆ ಪ್ರಿಯಾಂಕಾ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧೆ?

ಬೆಂಗಳೂರು, ಜುಲೈ 13: 2024 ರ ಲೋಕಸಭಾ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕೈ ಪಡೆ, ಹಲವು ಲೆಕ್ಕಾಚಾರಗಳನ್ನ ನಡೆಸಿದೆ. ಅನರ್ಹಗೊಂಡಿರುವ ರಾಹುಲ್‌ ಗಾಂಧಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಬಳಿಕ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮಹತ್ತರ ಜವಾಬ್ದಾರಿಯನ್ನು ವಹಿಸಲು ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧರಿಸಿದೆ.

ಹೌದು, ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಬಾರಿ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಪ್ರಶ್ನೆ ಇದೀಗ ಕಾಂಗ್ರೆಸ್‌ ವಲಯದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿದೆ.

Priyanka Gandhi Vadra May Contest From Mysuru Or Chikkamagalur In 2024 Lok Sabha Elections

ಈಗಾಗಲೇ ಎರಡು ದಿನಗಳ ಹಿಂದೆ ನಡೆದ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕಾಗಾಂಧಿ ಅವರನ್ನು ಕಣಕ್ಕಿಳಿಸಲು ಚರ್ಚೆ ನಡೆದಿದೆ ಎನ್ನಲಾಗಿದೆ.

ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಾದ್ಯಂತ ಪ್ರವಾಸವನ್ನ ಮಾಡಿ ಪಕ್ಷದ ಪರವಾಗಿ ಪ್ರಚಾರ ನಡೆಸಿರುವ ಪ್ರಿಯಾಂಕಾ ಗಾಂಧಿ ಪರ ರಾಜ್ಯದಲ್ಲಿ ಒಲವು ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಭರ್ಜರಿಯಾಗಿಯೇ ಗೆದ್ದಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಗೆಲುವ ಗುರಿಯಲ್ಲಿ ಕೈ ಪಡೆ ಹಾಕಿಕೊಂಡಿದೆ. ಈ ಹಿನ್ನೆಲೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಮೈಸೂರು-ಕೊಡಗು ಅಥವಾ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪ್ಲಾನ್‌ ಮಾಡಲಾಗುತ್ತಿದ್ದು, ಇನ್ನೂ ಅಂತಿಮವಾಗಿಲ್ಲ. ಸದ್ಯ ಯಾವ ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕಿಳಿಯುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪ್ರಸ್ತುತ, ಈ ಸ್ಥಾನಗಳನ್ನು ಕ್ರಮವಾಗಿ ಬಿಜೆಪಿಯ ಪ್ರತಾಪ್ ಸಿಂಹ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಂದಿದ್ದಾರೆ. ಆರಂಭದಲ್ಲಿ, ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿತ್ತು. ಆದರೆ, ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲದ ಕಾರಣ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಣಕ್ಕಿಳಿಸುವ ಚರ್ಚೆ ನಡೆದಿದೆ. ಒಂದು ವೇಳೆ ಪ್ರಿಯಾಂಕಾ ಈ ಪ್ರಸ್ತಾಪವನ್ನು ನಿರಾಕರಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

Priyanka Gandhi Vadra May Contest From Mysuru Or Chikkamagalur In 2024 Lok Sabha Elections

ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಹಿಂದೆ ಪ್ರಿಯಾಂಕಾ ಅಜ್ಜಿ ಇಂದಿರಾಗಾಂಧಿ ಗೆದ್ದು ಇತಿಹಾಸ ನಿರ್ಮಿಸಿದ ನೆನಪಗಳು ಗಟ್ಟಿಯಾಗಿವೆ. ಈಗ ಚಿಕ್ಕಮಗಳೂರು ಕ್ಷೇತ್ರ ಉಡುಪಿಯೊಂದಿಗೆ ಹಂಚಿಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಅರಮಲೆನಾಡಿನ ಭಾಗವಾಗಿರುವ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಲಾಭವಾಗಬಹುದು ಎನ್ನುವ ಲೆಕ್ಕಚಾರಗಳನ್ನ ಕಾಂಗ್ರೆಸ್‌ ನಾಯಕರು ಹಾಕಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೃಢ ನಿಲುವು ಹೊಂದಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಮುಖಚಹರೆ ಹೊಂದಿರುವ ಪ್ರಿಯಾಂಕಾ ಗಾಂಧಿ ಹಳ್ಳಿ ಹಾಗೂ ಹಳೇ ಕಾಲದ ಮತದಾರರಿಗೆ ಬೇಗ ಕನೆಕ್ಟ್‌ ಆಗುತ್ತಿದ್ದಾರೆ. ಅಲ್ಲದೇ ಪ್ರಿಯಾಂಕಾ ಗಾಂಧಿ ಚುನಾವಣೆಗಳಲ್ಲಿ ಪಕ್ಷವನ್ನು ಮುನ್ನಡೆಸುವ ತಾಕತ್ತು ಹೊಂದಿದ್ದಾರೆ ಎಂದು ಕಾಂಗ್ರೆಸ್‌ ಮೂಗಳು ತಿಳಿಸಿವೆ.

ಅಜ್ಜಿ, ಅಮ್ಮನಂತೆ ಕರ್ನಾಟಕತ್ತ ಪ್ರಿಯಾಂಕಾ!

ಹೌದು,2023 ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ರಾಜ್ಯಾದ್ಯಂತ ಪ್ರಕಾರವನ್ನ ನಡೆಸಿ ಕರುನಾಡ ಜನತೆಗೆ ಅಚ್ಚುಮೆಚ್ಚಾಗೆ ಪ್ರಿಯಾಂಕಾ ಗಾಂಧಿ ಪಾತ್ರರಾಗಿದ್ದಾರೆ. ಇನ್ನೂ ಪ್ರಿಯಾಂಕಾ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ 1978ರಲ್ಲಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಿದ್ದರೆ, ಇನ್ನೂ ತಾಯಿ ಸೋನಿಯಾ ಗಾಂಧಿ 1999ರಲ್ಲಿ ಬಳ್ಳಾರಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಅಜ್ಜಿ, ತಾಯಿಯಂತೆ, ಕರ್ನಾಟಕದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+