Priyanka Gandhi: ಬೆಂಗಳೂರಿಗೆ ಆಗಮನ, ದಿನಾಂಕ ಮತ್ತು ಹಿನ್ನಲೆ ಹೀಗಿದೆ

ಬೆಂಗಳೂರು, ಜನವರಿ 10: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳಾ ಬೆಂಬಲವನ್ನು ಹೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯುವ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಏಪ್ರಿಲ್- ಮೇ ವೇಳೆಗೆ ನಡೆಯಲಿರುವ ಚುನಾವಣೆಗೆ ಮುಂಚಿತವಾಗಿ ಪಕ್ಷವು ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಯೋಜಿಸುತ್ತಿದೆ. ಮಹಿಳೆಯರ ಕಡೆಗೆ ಕಾಂಗ್ರೆಸ್‌ನ ಬದ್ಧತೆಯನ್ನು ವ್ಯಕ್ತಪಡಿಸುವ ಖಾತರಿ ಪತ್ರ ಬಿಡುಗಡೆ ಮಾಡಲು ಬಯಸುತ್ತದೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಜೆಡಿಎಸ್ ಮುಖಂಡರಾದ ವಿಶ್ವನಾಥ್ ಮತ್ತು ರಾಧಾಕೃಷ್ಣ ಅವರ ಬೆಂಬಲಿಗರೊಂದಿಗೆ ಡಿಕೆ ಶೀವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಶಿವಕುಮಾರ್ ವಿರುದ್ಧ ವಿಶ್ವನಾಥ್ ಸ್ಪರ್ಧಿಸಿದ್ದರು.

ಜನಸಂಖ್ಯೆಯಲ್ಲಿ ಶೇಕಡಾ 50ರಷ್ಟು ಮಹಿಳೆಯರಿದ್ದಾರೆ. ಅವರ ಜೀವನ ಸುಧಾರಣೆಗೆ ಕಾಂಗ್ರೆಸ್‌ ಪಕ್ಷವು ಯಾವ ರೀತಿಯಲ್ಲಿ ಕೊಡುಗೆ ನೀಡಬಹುದು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರತ್ಯೇಕ ಪ್ರಣಾಳಿಕೆಯನ್ನು ತಯಾರಿಸಲು ಕಾಂಗ್ರೆಸ್ ನಿರ್ಧರಿಸಿದೆ. ಜೊತೆಗೆ ಅವರಲ್ಲಿ ನಾಯಕತ್ವವನ್ನು ನಿರ್ಮಿಸುವುದು ಮತ್ತು ಅವರನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದು ಶಿವಕುಮಾರ್ ಹೇಳಿದರು.

ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್‌ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದ ಅವರು, ಚುನಾವಣಾ ಪೂರ್ವ ಪ್ರಣಾಳಿಕೆಯೊಂದಿಗೆ ಮಹಿಳೆಯರಿಗೆ "ಖಾತರಿ ಪತ್ರ" ಬಿಡುಗಡೆ ಮಾಡಲು ಪಕ್ಷವು ಉದ್ದೇಶಿಸಿದೆ. ಈ ಪ್ರಯತ್ನದ ಭಾಗವಾಗಿಯೇ ಜನವರಿ 15ರವರೆಗೆ ಎಲ್ಲಾ ನಾಯಕರಿಂದ ಸಲಹೆಗಳು ಮತ್ತು ಸೂಚನೆಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಪ್ರಿಯಾಂಕಾ ಗಾಂಧಿ ವಾದ್ರಾ ಆಗಮನ

ಪ್ರಿಯಾಂಕಾ ಗಾಂಧಿ ವಾದ್ರಾ ಆಗಮನ

ಜನವರಿ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಂಚಾಯತ್ ಮತ್ತು ಬೂತ್‌ ಮಟ್ಟದಿಂದ ಉನ್ನತ ಮಟ್ಟದ ಮಹಿಳಾ ನಾಯಕರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವಾರು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಮೊದಲ ರಾಜಕೀಯ ಭೇಟಿ

ಮೊದಲ ರಾಜಕೀಯ ಭೇಟಿ

ಈ ವೇಳೆ ಪ್ರಿಯಾಂಕಾ ಗಾಂಧಿ ಅವರು ಚುನಾವಣೆ ಪ್ರಕ್ರಿಯೆಯನ್ನು ಪರಿಶೀಲಿಸುತ್ತಾರೆ. ಅಲ್ಲದೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪಕ್ಷದ ಪರವಾಗಿ ಮಹಿಳೆಯರಿಗಾಗಿ ಕೆಲವು ಘೋಷಣೆಗಳನ್ನು ಮಾಡುತ್ತಾರೆ. ಈ ಬಗ್ಗೆ ಕಾರ್ಯಕ್ರಮದ ವಿವರಗಳನ್ನು ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು. ಇದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೊದಲ ರಾಜಕೀಯ ಭೇಟಿ ಆಗಿದ್ದು, ಅವರು ಕರ್ನಾಟಕದ ಮಹಿಳೆಯರಿಗೆ ಸಂದೇಶವನ್ನು ನೀಡಲಿದ್ದಾರೆ ಎಂದು ಅವರು ಹೇಳಿದರು.

ಆರ್ಥಿಕ ಮತ್ತು ಸಾಮಾಜಿಕವಾಗಿ ಬಲ

ಆರ್ಥಿಕ ಮತ್ತು ಸಾಮಾಜಿಕವಾಗಿ ಬಲ

ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮೂಲಕ ಕಾಂಗ್ರೆಸ್ ಮಹಿಳಾ ಹೋರಾಟಗಾರ ಪಕ್ಷವಾಗಿದೆ. ಅವರ (ಮಹಿಳಾ) ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಬಲ ನೀಡುವುದು ಪಕ್ಷದ ಸಂಕಲ್ಪವಾಗಿದೆ ಎಂದರು. ಬೆಲೆ ಏರಿಕೆಯು ಜನರ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುವ ಪ್ರಮುಖ ಸಮಸ್ಯೆಯಾಗಿದೆ. ಬಿಜೆಪಿ ಸರ್ಕಾರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಅದು ಆಗಲಿಲ್ಲ, ಆದರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ ಎಂದು ಆರೋಪಿಸಿದರು.

ಜಿ.ಪರಮೇಶ್ವರ ನೇತೃತ್ವದಲ್ಲಿ ಪ್ರಣಾಳಿಕೆ

ಜಿ.ಪರಮೇಶ್ವರ ನೇತೃತ್ವದಲ್ಲಿ ಪ್ರಣಾಳಿಕೆ

ಬೆಲೆ ಏರಿಕೆ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂಬ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸುತ್ತಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ನೇತೃತ್ವದಲ್ಲಿ ಪ್ರಣಾಳಿಕೆ ಸಿದ್ಧಪಡಿಸುತ್ತಿದೆ. ನಾವು ಶೀಘ್ರದಲ್ಲೇ ವಿವರಗಳು ಮತ್ತು ಬಿಜೆಪಿಯ ದುರಾಡಳಿತ ಮತ್ತು ದುಷ್ಕೃತ್ಯಗಳನ್ನು ಬಹಿರಂಗಪಡಿಸುತ್ತೇವೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ಅದರ ಸ್ವರೂಪ, ಕಾರಣ ಮತ್ತು ಪ್ರವಾಸದ ದಿನಗಳ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳುತ್ತೇವೆ ಎಂದು ಶಿವಕುಮಾರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+