ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸರು ನಿರ್ದಯಿಯಾಗಿ ಜನರ ಮೇಲೆ ಲಾಠಿ ಬೀಸುವುದನ್ನು ಬಿಡಬೇಕು: ನಾರಾಯಣಗೌಡ

|
Google Oneindia Kannada News

ಬೆಂಗಳೂರು, ಮೇ 10: ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆಂಬ ಕಾರಣಕ್ಕೆ ಜನಸಾಮಾನ್ಯರ ಮೇಲೆ ನಿರ್ದಯವಾಗಿ ಲಾಠಿ ಬೀಸುವುದನ್ನು ಪೊಲೀಸ್ ಇಲಾಖೆ ಕೂಡಲೇ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಹೀಗೆ ಜನರನ್ನು ಥಳಿಸುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರು ಮತ್ತು ಲಸಿಕೆ ಪಡೆದವರ ಲೆಕ್ಕ ಭಾರತದಲ್ಲಿ ಕೊರೊನಾ ಸೋಂಕಿತರು ಮತ್ತು ಲಸಿಕೆ ಪಡೆದವರ ಲೆಕ್ಕ

ಜನರು ಈಗಾಗಲೇ ಕೋವಿಡ್ ಸಂಕಷ್ಟಗಳಿಂದ ನರಳುತ್ತಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ಲಾಕ್ ಡೌನ್ ಕೂಡ ಬಂದಿದೆ. ಇದರ ಪರಿಣಾಮ ಬಡ, ಮಧ್ಯಮ ವರ್ಗದ ಜನರ ಮೇಲಾಗುತ್ತಿದೆ. ಈ ಜನರೇ ಇಂದು ಬೀದಿಯಲ್ಲಿ ಪೊಲೀಸರ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ.

Pro Kannada Activist TA Narayanagowda Asks Cops Not To Beat People Randomly On Roads In Lockdown

ದಕ್ಷಿಣದ ಇತರ ರಾಜ್ಯಗಳು ಲಾಕ್ ಡೌನ್ ಜತೆಗೇ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗಾಗಿ ಹಲವು ಯೋಜನೆ ಜಾರಿಗೆ ತಂದಿವೆ. ಆದರೆ ಕರ್ನಾಟಕ ಸರ್ಕಾರ ಇಂಥ ಯಾವುದೇ ಕ್ರಮ ಕೈಗೊಂಡಿಲ್ಲ. ಬಡವರ ಪಾಲಿಗೆ ಕೆಲಸವೂ ಇಲ್ಲ, ಆರೋಗ್ಯವೂ ಇಲ್ಲ, ಆಹಾರವೂ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ.

ಲಾಕ್ ಡೌನ್: ಜನರ ಮೇಲೆ ಲಾಠಿ ದರ್ಪ ತೋರಿದರೆ ಪೊಲೀಸರಿಗೆ ತೊಂದರೆಲಾಕ್ ಡೌನ್: ಜನರ ಮೇಲೆ ಲಾಠಿ ದರ್ಪ ತೋರಿದರೆ ಪೊಲೀಸರಿಗೆ ತೊಂದರೆ

ಕೋವಿಡ್ ಎರಡನೇ ಅಲೆ ನಿರೀಕ್ಷಿತವಾಗಿದ್ದರೂ ಸರ್ಕಾರ ಯಾವುದೇ ಮುಂಜಾಗ್ರತೆ ವಹಿಸದೆ ಇಷ್ಟು ದೊಡ್ಡ ಅನಾಹುತಗಳಿಗೆ ಕಾರಣವಾಗಿದೆ. ತನ್ನ ಹೊಣೆಯನ್ನು ಹೊರಲಾಗದೆ, ಎಲ್ಲ ಭಾರವನ್ನು ಜನರ ಮೇಲೇ ಹೊರೆಸುವುದು ಎಷ್ಟು ಸರಿ? ಇನ್ನಾದರೂ ಸರ್ಕಾರ ತನ್ನ ಜವಾಬ್ದಾರಿ ಅರಿತು ಕ್ರಿಯಾಶೀಲವಾಗಬೇಕು.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಆಸ್ಪತ್ರೆ ಹಾಸಿಗೆ ಇಲ್ಲದೆ, ಆಮ್ಲಜನಕ ಇಲ್ಲದೆ, ಚಿಕಿತ್ಸೆ ಇಲ್ಲದೆ ಅಸುನೀಗುತ್ತಿರುವ ಜನರ ರಕ್ಷಣೆಗೆ ನಿಲ್ಲಬೇಕು. ಇದಕ್ಕಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಎಲ್ಲ ಜನರಿಗೂ ತ್ವರಿತವಾಗಿ ಮೂರು ತಿಂಗಳೊಳಗೆ ಉಚಿತ ವ್ಯಾಕ್ಸಿನ್ ನೀಡಬೇಕು. ಜನರ ಜೀವ ರಕ್ಷಣೆಯೇ ಈಗ ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದಿದ್ದಾರೆ.

Recommended Video

Virat Kohli England ಸರಣಿಗು ಮುನ್ನ ಲಸಿಕೆ ಹಾಕಿಸಿಕೊಂಡರು | Oneindia Kannada

English summary
Pro Kannada Activist TA Narayanagowda Asks Cops Not To Beat People Randomly On Roads In Lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X