ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ವಿರೋಧ, ಜ. 9 ರಂದು ರೈಲು ತಡೆ: ವಾಟಾಳ್ ನಾಗರಾಜ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 14: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲು ಹೊರಟಿಸಿರುವ ಕರ್ನಾಟಕ ಸರ್ಕಾರದ ನಡೆಯನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ರೈಲು ತಡೆಗೆ ಕರೆ ನೀಡಿದ್ದಾರೆ.

Recommended Video

ಕರ್ನಾಟಕ: ಸರ್ಕಾರ, ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟ ಅಂತ್ಯ..! | Oneindia Kannada

ಈಗಾಗಲೇ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರುದ್ಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ ಹಾಗೂ ಸಾಕಷ್ಟು ಪ್ರತಿಭಟನೆಗಳು ನಡೆದಿವೆ. ಇದೀಗ ರಾಜ್ಯಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ಆಧುನಿಕ ಹಿಟ್ಲರ್ ಎಂದ ವಾಟಾಳ್ ನಾಗರಾಜ್ಬಿಎಸ್ ಯಡಿಯೂರಪ್ಪ ಆಧುನಿಕ ಹಿಟ್ಲರ್ ಎಂದ ವಾಟಾಳ್ ನಾಗರಾಜ್

ಜನವರಿ 9 ರಂದು ರಾಜ್ಯಾದ್ಯಂತ ರೈಲುಗಳನ್ನು ತಡೆಯಲಿದ್ದಾರೆ. ಇಂದು ಚಾಮರಾಜನಗರದ ಡಿಸಿ ಕಚೇರಿ ಎದುರು ವಾಟಾಳ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆ, ಹೋಬಳಿ, ತಾಲೂಕು, ರಾಜ್ಯ ಮಟ್ಟದಲ್ಲಿ ರೈಲು ಹಳಿಗಳ ಮೇಲೆ ಸತ್ಯಾಗ್ರಹಕ್ಕೆ ಕೂರಿಸ್ತೀವಿ, ಜನಗಳ ಮೇಲೆ ಬಿಡುಬೇಕು ಹೊರತು, ರೈಲು ಹೋಗಲು ನಾವು ಬಿಡುವುದಿಲ್ಲ.

Pro Kannada Activist Vatal Nagaraj To Participate in Rail Roko Protest On January 9

ಬೀದರ್‌ನಿಂದ ಚಾಮರಾಜನಗರದವರೆಗೆ , ಮಂಗಳೂರಿನಿಂದ ಕೋಲಾರದವರೆಗೆ ರೈಲು ನಿಲ್ದಾಣ ಸೇರಿದಂತೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತೇವೆ ಎಂದರು. ಎರಡು ಸಾವಿರ ಸಂಘಟನೆಗಳಿಂದ ರೈಲು ತಡೆಗೆ ಬೆಂಬಲ ಸಿಕ್ಕಿದೆ. ಅಂದು ಯಾರೂ ಕೂಡ ಸಾರ್ವಜನಿಕರು ರೈಲಿನಲ್ಲಿ ಪ್ರಯಾಣಿಸಬೇಡಿ, ನಿಲ್ದಾಣಕ್ಕೆ ಬರಬೇಡಿ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಯಡಿಯೂರಪ್ಪ ಅವರಿಗೆ ಹೊರನಾಡು ಗೊತ್ತಿಲ್ಲ. ಗಡಿನಾಡು ಗೊತ್ತಿಲ್ಲ. ಸಾಂಸ್ಕೃತಿಕವಾದ ಚಿಂತನೆ ಇಲ್ಲ. ಬಹುಸಂಖ್ಯಾತರಿದ್ದಾರೆ ಎಂದು ನಿಗಮ ಮಾಡಲು ಹೊರಟಿದ್ದಾರೆ. ನಾಳೆ ತಮಿಳರು, ಮಾರ್ವಾಡಿಗಳಿಗೂ ಕೊಡಬೇಕಾಗುತ್ತದೆ" ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ಕಡೆ ಎಂಇಎಸ್ ಬೆಳಗಾವಿಯಲ್ಲಿ ಪ್ರತಿನಿತ್ಯ ಗೂಂಡಾಗಿರಿ ಮಾಡುತ್ತಿದ್ದಾರೆ. ಶಿವಸೇವೆ ಅವರು ಕಾರವಾರ, ನಿಪ್ಪಾಣಿ ನಮಗೆ ಸೇರಬೇಕು ಎಂದು ಹೇಳುತ್ತಿದ್ದಾರೆ. ನಿಗಮ ರಚನೆಯಿಂದಾಗಿ ಮುಂದಿನ ದಿನಗಳಲ್ಲಿ ನಾವು ಭಾರಿ ಏಟು ತಿನ್ನಬೇಕಾಗುತ್ತದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.

English summary
Pro Kannada activist Vatal Nagaraj Said that Rail roko will be held on January 24 to Protest against Maratha Development Board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X