ತಮಿಳುನಾಡಿಗೆ ಮತ್ತೆ ನೀರು: ಕಟ್ಟೆ ಒಡೆದ ಜನಾಕ್ರೋಶ, ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 13: ತಮಿಳುನಾಡಿಗೆ ಮತ್ತೆ ನೀರು ಬಿಡಲು ಪ್ರಾಧಿಕಾರ ಆದೇಶ ಹಿನ್ನೆಲೆಯಲ್ಲಿ ಈಗ ರಾಜ್ಯದ ಜನರ ಆಕ್ರೋಶದ ಕಟ್ಟೆ ಒಡೆದಿದೆ. ಮತ್ತೆ ರಾಜ್ಯದಲ್ಲಿ ಈಗದ್ದು, ಈ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಕನ್ನಡಪರ ಸಂಘಟನೆಗಳು ಪ್ರತಿಭಟನೆಯ ಹಾದಿ ಹಿಡಿದು ಆಕ್ರೋಶ ವ್ಯಕ್ತಪಡಿಸಿವೆ.
ರಾಜ್ಯದಿಂದ ಇಂದಿನಿಂದ 15 ದಿನದವರೆಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಬೇಕು ಅಂತ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸ್ಸು ಮಾಡಿತ್ತು. ವರ್ಚುವಲ್ ಮೂಲಕ ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ರಾಜ್ಯದ ಹಾಗೂ ತಮಿಳುನಾಡಿನ ಜಲ ಸಂಪನ್ಮೂಲ ಅಧಿಕಾರಿಗಳು ಭಾಗಿಯಾಗಿದ್ದು ಸಮಿತಿ ಈ ರೀತಿ ಶಿಫಾರಸ್ಸು ಮಾಡಿದೆ. ಸದ್ಯ ಈ ವಿಚಾರ ರಾಜ್ಯದ ಜನರ ಕೆಂಗಣ್ಣಿಗೆ ಕಾರಣ ಆಗಿದೆ.

ಸದ್ಯ ಪ್ರಾಧಿಕಾರದ ಆದೇಶದ ವಿರುದ್ಧ ತಿರುಗಿ ಬಿದ್ದ ಕನ್ನಡಪರ ಸಂಘಟನೆಗಳು ಪ್ರತಿಭಟನೆಯ ಹಾಡಿ ಹಿಡಿದಿದೆ. ಪ್ರಾಧಿಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತ ಪಡಿಸುತ್ತಿವೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ಕಣ್ಮಿಣಿಕಿ ಟೋಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಬಗ್ಗೆ ಕನ್ನಡ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆದಿದ್ದು ನೂರಾರು ಸಂಖ್ಯೆಯ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಭಾಗಿ ಆಗಿದ್ದಾರೆ.
ತಮಿಳುನಾಡಿಗೆ ನೀರು ಬಿಡಲು ಆದೇಶ ಹಿನ್ನೆಲೆಯಲ್ಲಿ ಆದೇಶ ವಿರೋಧಿಸಿ ಟೋಲ್ ಬಳಿ ಪ್ರತಿಭಟನೆಗೆ ಕರೆಕೊಟ್ಟಿರೋ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಉರುಳಿ ಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರ ನಿಯೋಜನೆ ಕೂಡ ಮಾಡಲಾಗಿತ್ತು. ಟೋಲ್ ಬಳಿ ಜಮಾವಣೆ ಆಗಿರುವ ಕನ್ನಡ ಪರ ಸಂಘಟನೆ ಕಾರ್ಯಕರ್ತರ ಆಕ್ರೋಶದ ಕಟ್ಟೆ ಒಡೆದಿತ್ತು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಪ್ರತಿಭಟನಕಾರರ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಉರುಳು ಸೇವೆ ಮಾಡಿ ಮಹಿಳೆ ಹೋರಾಟಗಾರರು ಕಿಡಿಕಾರಿದರು. 420 ಸಿದ್ದರಾಮಯ್ಯ, 420 ಡಿ.ಕೆ ಶಿವಕುಮಾರ್, ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ಹೊರ ಹಾಕಿದರು.

ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಧಿಕ್ಕಾರ ಕೂಗಿ ಸಿಟ್ಟು ಹೊರ ಹಾಕಲಾಯಿತು. ಕಾವೇರಿ ನಮ್ಮ ಸ್ವತ್ತು, ಇರುವ ಬರುವ ಎಲ್ಲಾ ನೀರು ಅವರಿಗೆ ಕೊಟ್ಟರೆ ನಾವೇನು ಮಾಡಬೇಕು ಅಂತ ವಾಗ್ದಾಳಿ ನಡೆಸಿದರು. ತಮಿಳುನಾಡಿಗೆ ನೀರು ಬಿಟ್ಟ ಸಿಎಂ ಸಿದ್ದರಾಮಯ್ಯ , ಡಿ.ಕೆ ಶಿವಕುಮಾರ್‌ಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ಹೋರಾಟಗಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಗಿನಿಗಿ ಕೆಂಡಕಾರಿದರು.












Click it and Unblock the Notifications