ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡಲು ವಾಟಾಳ್ ನಾಗರಾಜ್ ಕರೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 22: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಸಭೆ ಸೇರಿ ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸುಮಾರು 35ಕ್ಕೂ ಅಧಿಕ ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಹೇಳಿದರು.

ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್​ಗೆ ನಿರ್ಧಾರ ಮಾಡಲು ಮುಂದಾಗಿದ್ದವು. ಆದರೆ, ಈ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಮೂಡಿರಲಿಲ್ಲ. ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ನಿರ್ಧಾರ ಮಾಡಲು ಸಭೆ ಸೇರಲು ನಿರ್ಧರಿಸಿದ್ದವು. ಅದರಂತೆ, ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಡಿಸೆಂಬರ್ 31 ರಂದು ಕರ್ನಾಟಕ ಬಂದ್​ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6 ರ ತನಕ ಎಲ್ಲಾ ಚಟುವಟಿಕೆ ಬಂದ್ ಆಗಲಿದೆ.

ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಇಂದು ಮಹತ್ವದ ಸಭೆ ನಡೆಸಲಾಗಿದೆ.

Breaking: Karnataka Bandh on December 31- Vatal Nagaraj

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬೆಳಗ್ಗೆ 11.30ಕ್ಕೆ ಸಭೆ ನಡೆಸಲಾಗಿದ್ದು, ವಿವಿಧ ಸಂಘಟನೆಗಳನ್ನು ಸಭೆಯಲ್ಲಿ ಪಾಲ್ಗೊಂಡಿದ್ದವು. ಸದ್ಯಕ್ಕೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಆಚರಿಸಲು ಕರೆ ನೀಡಲಾಗಿದೆ. ಅಂದು ಬೃಹತ್ ಜಾಥಾ, ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಸೇರಿದಂತೆ ಸುಮಾರು 35 ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಬೆಂಬಲ ಸಿಕ್ಕಿದೆ.

Recommended Video

Ravi Shastri ಆಡಿದ ಮಾತಿನಿಂದ ನೊಂದ Ashwin ಏನ್ ನಿರ್ಧಾರ ಮಾಡಿದ್ರು ಗೊತ್ತಾ? | Oneindia Kannada

ಶಿವಕುಮಾರ್ ನಾಯಕ್ ವಿರೋಧ: ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಬಂದ್ ಮಾಡಲು ವಾಟಾಳ್ ನಾಗರಾಜ್ ಕರೆ ನೀಡಿದ ವೇಳೆ ಹೋರಾಟಗಾರ ಶಿವಕುಮಾರ್ ನಾಯಕ್ ವಿರೋಧ ವ್ಯಕ್ತಪಡಿಸಿದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಂದ್ ಬೇಡ, ಬೇರೆ ದಿನಾಂಕ ಇರಲಿ ಎಂದು ಹೇಳಿದ್ದಾರೆ. ಆದರೆ, ಇದರಿಂದ ರೊಚ್ಚಿಗೆದ್ದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಶಿವಕುಮಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಘಟನಾ ಸ್ಥಳದಿಂದ ಶಿವಕುಮಾರ್ ನಾಯಕ್ ಅವರನ್ನು ದೂರಕ್ಕೆ ಕರೆದೊಯ್ದಿದ್ದಾರೆ.

ಸರ್ಕಾರಕ್ಕೆ ಡೆಡ್ ಲೈನ್: ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸದನದಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆಯಾಗಿಲ್ಲ, ಅಧಿಕೃತವಾಗಿ ಯಾವುದೇ ಹೇಳಿಕೆ ಬಂದಿಲ್ಲ. ಡಿಸೆಂಬರ್ 29ರೊಳಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲು ಡೆಡ್ ಲೈನ್ ನೀಡಲಾಗಿದೆ. ಡಿ.31ರಂದು ಸಿನಿಮಾ ಚಿತ್ರೀಕರಣ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಆಗಲಿವೆ ಎಂದು ಸಾ.ರಾ ಗೋವಿಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರು ಉಪಸ್ಥಿತರಿದ್ದರು.

English summary
Breaking: Karnataka Bandh will be observed and huge procession will be carried on December 31 said Kannada Activist leader Vatal Nagaraj
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X