Get Updates
Get notified of breaking news, exclusive insights, and must-see stories!

ನಾಗಮಂಗಲ ಗಲಭೆಯಲ್ಲೂ ಪಾಕ್ ಪರ ಘೋಷಣೆ: ದೊಡ್ಡ ಜಾಲವೇ ಸಕ್ರಿಯ ಎಂದ ಆರ್.ಅಶೋಕ

ಬೆಂಗಳೂರು, ಸೆಪ್ಟಂಬರ್ 16: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ಬುಧವಾರ ತಡರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಗಲಭೆ ನಡೆದಿದೆ. ಇದರಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಆರ್.ಅಶೋಕ ಅವರು, ಇದೀಗ ಗಲಭೆ ವೇಳೆ ಮೂರು ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆಪಾದಿಸಿದ್ದಾರೆ.

ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಗಲಭೆಗಳ ಪೋಸ್ಟ್ ಹಾಕಿರುವ ಅವರು, ನಾಗಮಂಗಲ ಘಟನೆ ವೇಳೆ ಮೂವರು ದುರುಳರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದನ್ನು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.

Pro-Pakistan Slogan in Nagamangala Riots Take Proper Action Against Them R Ashoka

ನಾಗಮಂಗಲದಲ್ಲಿ ಮತಾಂಧರ ಪುಂಟಾಡ, ಗಲಭೆಯಲ್ಲಿ ಕೇರಳದ ನಿಷೇಧಿತ ಸಂಘಟನೆಗಳಾದ ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳ ಕೈವಾಡ ಇದೆ ಎಂದು ಆರ್.ಅಶೋಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು, ದಾವಣಗೆರೆಯಲ್ಲಿ ಪುಂಡಾಟ

ಈ ಕೋಮು ಘರ್ಷಣೆ ಮಾಡುವ ಮುನ್ನವೇ ಮಲೆನಾಡಿನ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ ಮೆರೆದಿದ್ದಾರೆ. ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಸಕ್ರಿಯವಾದಂತಿದೆ ಎಂದು ವಿವರಿಸಿದರು.

Pro-Pakistan Slogan in Nagamangala Riots Take Proper Action Against Them R Ashoka

ಇನ್ನೂ ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನು ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದೆ. ಕೂಡಲೇ ಈ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ಒಪ್ಪಿಸಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಬುಧವಾರ ರಾತ್ರಿ ನಾಗಮಂಗಲದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಸುಮಾರು 150 ಮಂದಿ ಮೇಲೆ ಎಫ್‌ಐಆರ್ ಆಗಿದೆ. ಸಿಸಿಟಿವಿ ಆಧರಿಸಿ ಅನೇಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮತಾಂಧದರು ಮಾಸ್ಕ್ ಹಾಕಿಕೊಂಡು ಬಂದು, ದುರುದ್ದೇಶಪೂರ್ವಕವಾಗಿ ಸಿಸಿಟಿವಿ ಹಾಳು ಮಾಡಿ, ಕೃತ್ಯ ಎಸಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ಆರ್.ಅಶೋಕ ಆರೋಪಿಸಿದ್ದರು.

ಘಟನೆಯಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ಬೈಕ್‌ಗಳು ಜಖಂಗೊಂಡಿವೆ. ಅಂಗಡಿ ಮುಂಗಟ್ಟುಗಳಿಗೆ ಹಾನಿ ಆಗಿವೆ. ಈ ಘಟನೆಯನ್ನು ಗೃಹ ಸಚಿವ ಜಿ.ಪರಮೇಶ್ವರ ಅವರು ಆಕಸ್ಮಿಕ ಎಂದಿದ್ದರು. ಈ ಹೇಳಿಕೆಗೆ ಬಿಜೆಪಿಯ ನಾಯಕರು ಗರಂ ಆಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+