ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಉಪ ಚುನಾವಣೆ : ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು

By Gururaj
|
Google Oneindia Kannada News

ಬೆಂಗಳೂರು, ಜೂನ್ 26 : ಕರ್ನಾಟಕ ಬಿಜೆಪಿ ಲೋಕಸಭೆ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.

ಜೂನ್ 29ರಂದು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ : ಚೆಲುವರಾಯಸ್ವಾಮಿಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ : ಚೆಲುವರಾಯಸ್ವಾಮಿ

ಶಿವಮೊಗ್ಗ ಸಂಸದರಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಳ್ಳಾರಿ ಸಂಸದರಾಗಿದ್ದ ಬಿ.ಶ್ರೀರಾಮುಲು, ಮಂಡ್ಯ ಸಂಸದರಾಗಿದ್ದ ಸಿ.ಎಸ್.ಪುಟ್ಟರಾಜು ಅವರು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಮೇಲೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

BJP

ಆದ್ದರಿಂದ, ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದ್ದು, ಚುನಾವಣಾ ಆಯೋಗ ಮುಂದಿನ ತಿಂಗಳು ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ. ಆದ್ದರಿಂದ, ಪಕ್ಷಗಳು ಸಹ ತಯಾರಿ ಆರಂಭಿಸಿವೆ.

2019ರ ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ2019ರ ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ

ಅಭ್ಯರ್ಥಿಗಳು

* ಶಿವಮೊಗ್ಗ - ಬಿ.ವೈ.ರಾಘವೇಂದ್ರ

* ಮಂಡ್ಯ - ಆರ್.ಅಶೋಕ

* ಬಳ್ಳಾರಿ - ಜೆ.ಶಾಂತ

ಅಚ್ಚರಿ ಎಂಬಂತೆ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್.ಅಶೋಕ ಹೆಸರು ಮಂಡ್ಯ ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಮಂಡ್ಯ ಜೆಡಿಎಸ್ ಭದ್ರಕೋಟೆ, ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಆರ್.ಅಶೋಕ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಸದ್ಯದ ಸುದ್ದಿ.

ಶಿವಮೊಗ್ಗ ಕ್ಷೇತ್ರದಿಂದ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಯಡಿಯೂರಪ್ಪ ಶಿಕಾರಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದಾಗ ರಾಘವೇಂದ್ರ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ.

English summary
Karnataka BJP probable list for Lok Sabha by election. R.Ashok may contest from Mandya. By election to be held for Ballari, Mandya and Shivamogga seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X