BPL Card: ನಿಮ್ಮ ಬಿಪಿಎಲ್‌ ಕಾರ್ಡ್ ರದ್ದಾಗಿದ್ಯಾ.? ತಲೆ ಕೆಡ್ಸ್ಕೋಬೇಡಿ; ವಾಪಾಸ್‌ ಪಡೆಯಲು ಈ ಮಾರ್ಗ ಅನುಸರಿಸಿ

BPL Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿ, ಅಂತಹವರಿಗೆ ಎಪಿಎಲ್‌ ಕಾರ್ಡ್‌ ನೀಡಲು ಸರ್ಕಾರ ಮುಂದಾಗಿತ್ತು. ಅಲ್ಲದೆ, ಬಡವರ ಬಿಪಿಎಲ್‌ ಕಾರ್ಡ್‌ಗಳನ್ನು ಕೂಡ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದೆ.

ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ಕಾರ್ಡ್‌ ವಾಪಾಸ್ ಸಿಗಲಿದೆ. ಹಾಗಾದರೆ ನೀವು ಅನುಸರಿಸಬೇಕಾದ ಕ್ರಮಗಳು ಯಾವುವು ಎಂದು ಇಲ್ಲಿ ತಿಳಿಯಿರಿ.

Procedure to Reclaim Cancelled BPL Ration Card Know details

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆ ಆಗಿದ್ದರೆ, ಅಂತಹವರು ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗೆ ಸಮಸ್ಯೆಯನ್ನು ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಒಂದು ವೇಳೆ ತಪ್ಪಿ ಹೋಗಿದ್ದರೆ, ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ಹಿಂದಿರುಗಿಸಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ಸುಮ್ಮನೆ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದರು.

ಯಾರೆಲ್ಲಾ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು?: ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಹುದಾಗಿದೆ. ಕರ್ನಾಟಕದ ನಿವಾಸಿಗಳು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಕಚೇರಿಗೇ ಹೋಗಬೇಕೆಂದಿಲ್ಲ.

ಬದಲಾಗಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. Ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಹ ಫಲಾನುಭವಿಗಳು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಇ-ಪಡಿತರ ಚೀಟಿ ಪಡೆದುಕೊಳ್ಳಬಹುದು ಮತ್ತು ನಿಮ್ಮ ಪಡಿತರ ಚೀಟಿಯ ಸ್ಥಿತಿ-ಗತಿಯನ್ನು ಪರಿಶೀಲನೆ ಮಾಡಬಹುದಾಗಿದೆ.

ಬೇಕಾಗುವ ದಾಖಲೆಗಳು

* ಆಧಾರ್ ಕಾರ್ಡ್
* ಇ-ಮೇಲ್ ಐಡಿ
* ಮೊಬೈಲ್ ಸಂಖ್ಯೆ
* ವಿದ್ಯುತ್ ಬಿಲ್
* ಪ್ಯಾನ್ ಕಾರ್ಡ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+