Ration Card: ಪಡಿತರ ಚೀಟಿದಾರರೇ ಗಮನಿಸಿ: ಹೊಸ ಸದಸ್ಯರ ಸೇರ್ಪಡೆಗೆ ಇಲ್ಲಿದೆ ಸಿಂಪಲ್ ಟಿಪ್ಸ್
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಒಂದಾಗಿದೆ. ಇನ್ನು ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಪತ್ನಿ ಹೆಸರು ಸೇರಿಸಬೇಕೆಂದರೆ ಯಾವೆಲ್ಲಾ ದಾಖಲೆಗಳು ಕಡ್ಡಾಯವಾಗಿ ಬೇಕೇ ಬೇಕಾಗುತ್ತವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಪತ್ನಿ ಹೆಸರು ಸೇರ್ಪಡೆ ಮಾಡಲು ಯಾವೆಲ್ಲಾ ಪ್ರಮುಖ ದಾಖಲೆಗಳು ಬೇಕಾಗುತ್ತವೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.

ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಪತ್ನಿ ಹೆಸರು ಸೇರ್ಪಡೆಗೆ ಯಾವೆಲ್ಲಾ ದಾಖಲೆಗಳು ಕಡ್ಡಾಯ?
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ.
ಮಗುವಿನ ಹೆಸರು ಸೇರ್ಪಡೆಗೆ ಯಾವೆಲ್ಲಾ ದಾಖಲೆಗಳು ಕಡ್ಡಾಯ?
* ಮಗುವಿನ ಜನನ ಪ್ರಮಾಣಪತ್ರ
* ಹೆತ್ತವರ ಆಧಾರ್ ಕಾರ್ಡ್
* ಈ ಪ್ರಕ್ರಿಯೆಯನ್ನು ಅನುಸರಿಸಿ
ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಹೊಸ ಸದಸ್ಯರ ಸೇರ್ಪಡೆ ಹೇಗೆ?
* ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
* ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ, ಲಾಗಿನ್ ಆಗಬೇಕು.
* ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡಬಹುದಾಗಿದ್ದು, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ನೀಡಲಾಗಿರುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
* ಬಳಿಕ ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.
ಜೊತೆಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ಟ್ರ್ಯಾಕ್ ಮಾಡಬಹುದು.
ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗಿ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದಾಗಿದೆ. ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಹೊಸ ಸದಸ್ಯರ ಸೇರ್ಪಡೆ ವಿಧಾನಗಳು
* ಅಧಿಕೃತ ವೆಬ್ ಸೈಟ್ https://ahara.kar.nic.in/home ಗೆ ಭೇಟಿ ನೀಡಿ
* ಮುಖ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಅಲ್ಲಿ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನ ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನ ನೀಡಲಾಗುತ್ತದೆ.












Click it and Unblock the Notifications