'ಅಖಿಲ ಭಾರತ ಹರಿಜನ ಸೇವಾ ಸಂಘ': ಪ್ರಧಾನ ಕಾರ್ಯದರ್ಶಿಯಾಗಿ ಪ್ರೊ. ಬಿ.ಸಿ ಮೈಲಾರಪ್ಪ ಆಯ್ಕೆ
ಬೆಂಗಳೂರು, ಅಕ್ಟೋಬರ್ 12: ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1932ರಲ್ಲಿ ಸ್ಥಾಪನೆಯಾಗಿದ್ದ 'ಅಖಿಲ ಭಾರತ ಹರಿಜನ ಸೇವಾ ಸಂಘ'ದ ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಪ್ರೊ. ಬಿ.ಸಿ.ಮೈಲಾರಪ್ಪ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷರಾಗಿ ಮಾಜಿ ಮೇಯರ್ ಪ್ರೇಮ ಕಾರಿಯಪ್ಪ ಅವರು ಹಾಗೂ ಐಎಎಸ್ ಅಧಿಕಾರಿ ಕೆ.ಶಿವರಾಂ ಎಂಬುವವರು ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಶೈಕ್ಷಣಿಕ ಹಿನ್ನೆಲೆ ಇರುವ ಗೂ ರಾಜಕೀಯೇತರ ವ್ಯಕ್ತಿಯೊಬ್ಬರು ಪ್ರಧಾನ ಕಾರ್ಯದರ್ಶಿ ಸ್ಥಾನ ಅಲಂಕರಿಸಿದ್ದಾರೆ ಎಂದು ಸಂಘ ತಿಳಿಸಿದೆ.

'ಅಖಿಲ ಭಾರತ ಹರಿಜನ ಸೇವಾ ಸಂಘ' ಇದೊಂದು ರಾಷ್ಟ್ರೀಯ ಮಟ್ಟದ ಸಂಘವಾಗಿದೆ. ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ ಹಾಗೂ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ನಾಲ್ಕು ಬಾರಿ ಅಧ್ಯಕ್ಷರಾಗಿದ್ದ ಪಂಡಿತ ಮದನ ಮೋಹನ ಮಾಳವಾಯಿ ಹಾಗೂ ಮಹಾತ್ಮ ಗಾಂಧೀಜಿ ಅವರ ಮುಂದಾಳತ್ವದಲ್ಲಿ ಸ್ಥಾಪನೆ ಆಯಿತು. ಸಂಘವು ಸಮಾಜದಲ್ಲಿ ಅಸ್ಪೃಶ್ಯತೆ ಹೋಗಾಲಾಡಿಸುವ ಜತೆಗೆ ಅಸ್ಪೃಶ್ಯ ಜನಾಂಗದವರ ಶ್ರೇಯೋಭಿವೃದ್ಧಿಗೆ ಮಾಡುವ ಉದ್ದೇಶ ಹೊಂದಿತ್ತು.

ಇಂತಹ 90 ವರ್ಷದ ಐತಿಹಾಸಿಕ ಹಿನ್ನೆಲೆ ಇರುವ ಸಂಘಕ್ಕೆ ರಾಜ್ಯ ಸಹಕಾರ ಇಲಾಖೆ ನಿರ್ದೇಶನದಂತೆ ಕರ್ನಾಟಕ ರಾಜ್ಯ ಘಟಕ ಪದಾಧಿಕಾರಿಗಳು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಪ್ರಸ್ತುತ ಈ ಚುನಾವಣೆಯು ಬುಧವಾರ ಬೆಂಗಳೂರಿನ ಶೇಷಾದ್ರಿಪುರಂನ ಕಚೇರಿಯಲ್ಲಿ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications