ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಸಿದ್ಧ ಮೈಲಾರ ಜಾತ್ರೆಗೆ ಹೊರಗಿನ ಭಕ್ತರು ಬರದಂತೆ ಬಿಗಿ ಭದ್ರತೆ: ಬಳ್ಳಾರಿ ಜಿಲ್ಲಾಧಿಕಾರಿ

|
Google Oneindia Kannada News

ಬಳ್ಳಾರಿ, ಫೆಬ್ರವರಿ 16: ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಇದೇ ಫೆ.19ರಿಂದ ಮಾ.2ರವರೆಗೆ ನಡೆಯಲಿರುವ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಮತ್ತು ಕಾರ್ಣಿಕೋತ್ಸವವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೊರಡಿಸಿರುವ ಗೈಡ್‍ಲೈನ್ಸ್‍ಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿಕೊಂಡು ಆಚರಿಸಲು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಬಾರಿ ಮೈಲಾರ ಕಾರ್ಣಿಕ ಅನುಮಾನ: ಕಳೆದ ವರ್ಷ ಭವಿಷ್ಯ ನುಡಿದಿದ್ದೇನು, ಆಗಿದ್ದೇನು? ಈ ಬಾರಿ ಮೈಲಾರ ಕಾರ್ಣಿಕ ಅನುಮಾನ: ಕಳೆದ ವರ್ಷ ಭವಿಷ್ಯ ನುಡಿದಿದ್ದೇನು, ಆಗಿದ್ದೇನು?

ಕಾರ್ಣಿಕೋತ್ಸವದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕಾರ್ಣಿಕೋತ್ಸವಕ್ಕೆ ಫೆ.19ರಿಂದ ಮಾ.2ರವರೆಗೆ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಹಾಗೂ ಬ್ಯಾರಿಕೇಡ್ ಸೇರಿದಂತೆ ಇನ್ನಿತರ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಜನರು ಎತ್ತಿನ ಗಾಡಿಗಳು, ಟ್ಯಾಕ್ಟರ್, ವಾಹನಗಳ ಮೂಲಕ ಮೈಲಾರ ಪ್ರವೇಶಿಸದಂತೆ ಕ್ರಮಕೈಗೊಳ್ಳಬೇಕು. ಈ ಕುರಿತು ಹೂವಿನಹಡಗಲಿ, ಹರಪನಹಳ್ಳಿ, ಹಾವೇರಿ, ದಾವಣಗೆರೆ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಮಾಲಪಾಟಿ ಅವರು ಸೂಚಿಸಿದರು.

ಫೆ.19ರಿಂದ ಮಾ.2ರವರೆಗೆ ಜಾತ್ರೆ

ಫೆ.19ರಿಂದ ಮಾ.2ರವರೆಗೆ ಜಾತ್ರೆ

ಸಾರ್ವಜನಿಕರಿಗೆ ಮತ್ತು ಭಕ್ತಾಧಿಗಳಿಗೆ ಮೈಲಾರ ಗ್ರಾಮದಲ್ಲಿ ಫೆ.19ರಿಂದ ಮಾ.2ರವರೆಗೆ ವಾಸ್ತವ್ಯ ಮಾಡುವುದಕ್ಕೆ ಅವಕಾಶ ಇರುವುದಿಲ್ಲ. ಮೈಲಾರ, ಕುರವತ್ತಿ, ಹ್ಯಾರಡಾ ಕಡೆಯಿಂದ ಯಾವುದೇ ವಾಹನಗಳು(ಲಾರಿ,ಟ್ಯಾಕ್ಟರ್, ಲಘುವಾಹನ, ಕಾರು, ಆಟೋ, ಮಿನಿ ಬಸ್ ಇತ್ಯಾದಿ) ಮೈಲಾರ ಗ್ರಾಮಕ್ಕೆ ಬರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮೈಲಾರ/ಕುರವತ್ತಿ ಗ್ರಾಮದ ಸರಹದ್ದಿನ ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳು ನಡೆಸಲು ಅವಕಾಶವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಿಶೇಷ ಬಸ್ ಓಡಿಸದಿರಿ

ವಿಶೇಷ ಬಸ್ ಓಡಿಸದಿರಿ

ಮೈಲಾರ ಜಾತ್ರೆಗೆ ಸಂಬಂಧಿಸಿದಂತೆ ಈ ಮುಂಚೆ ಪ್ರತಿ ವರ್ಷ ಯಾವ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿತ್ತೋ ಅದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ ಮಾಲಪಾಟಿ ಅವರು ಮೈಲಾರ ಶ್ರೀ ಮೈಲಾರಲಿಂಗ ಸ್ವಾಮಿ ದೇವಸ್ಥಾನದ ರೂಢಿ ಸಂಪ್ರದಾಯದ ಪೂಜಾ ಕಾರ್ಯ, ಧಾರ್ಮಿಕ ಕಾರ್ಯಗಳಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ನಿರ್ವಹಿಸಲು ಸೂಚನೆ ನೀಡಿದರು.

ಮೈಲಾರ ಕಾರ್ಣಿಕೋತ್ಸವಕ್ಕೆ ಪ್ರತಿವರ್ಷ ವಿಶೇಷ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಈ ವರ್ಷ ಆ ರೀತಿಯ ವಿಶೇಷ ಬಸ್ ಸೌಲಭ್ಯ ಮತ್ತು ಓಡಿಸುವುದಕ್ಕೆ ಮುಂದಾಗಬಾರದು ಎಂದು ಕೆಎಸ್‍ಆರ್‍ಟಿಸಿ ಡಿಸಿಗಳಿಗೆ ಸೂಚನೆ ನೀಡಿದ ಬಳ್ಳಾರಿ ಜಿಲ್ಲಾಧಿಕಾರಿ ಮಾಲಪಾಟಿ ಅವರು, ಪ್ರತಿನಿತ್ಯ ಓಡಿಸಲಾಗುತ್ತಿರುವ ಬಸ್ ಗಳನ್ನು ಸಹ ಕಾರ್ಣಿಕೋತ್ಸವ ನಡೆಯುವ ಮಾ.1ರಂದು ಸ್ವಲ್ಪ ಕಡಿತ ಮಾಡಿ ಎಂದು ಅವರು ಸಲಹೆ ನೀಡಿದರು.

ಕಾರ್ಣಿಕ ಸ್ಪಷ್ಟವಾಗಿ ಕೇಳುವ ಹಾಗೆ ಧ್ವನಿವರ್ಧಕ ವ್ಯವಸ್ಥೆ

ಕಾರ್ಣಿಕ ಸ್ಪಷ್ಟವಾಗಿ ಕೇಳುವ ಹಾಗೆ ಧ್ವನಿವರ್ಧಕ ವ್ಯವಸ್ಥೆ

ಕಾರ್ಣಿಕ ಮೈದಾನದಲ್ಲಿ ಕಾರ್ಣಿಕ ನುಡಿ ಸ್ಪಷ್ಟವಾಗಿ ಕೇಳುವ ಹಾಗೆ ಧ್ವನಿವರ್ಧಕ ವ್ಯವಸ್ಥೆ ಮತ್ತು ಕಾರ್ಣಿಕ ನುಡಿಯನ್ನು ಸೆರೆಯಿಡಿಯಲು ಅತ್ಯಾಧುನಿಕ ಸಲಕರಣೆಗಳನ್ನು ಬಳಸಿಕೊಂಡು ರೆಕಾರ್ಡ್ ಮಾಡಿಕೊಳ್ಳುವ ವ್ಯವಸ್ಥೆ ಹಾಗೂ ಮಾಧ್ಯಮಗಳ ಮೂಲಕ ಬಿಡುಗಡೆ ಮಾಡುವ ವ್ಯವಸ್ಥೆ ಮಾಡಲು ಡಿಸಿ ಮಾಲಪಾಟಿ ಅವರು ಸೂಚಿಸಿದರು. ಕಾರ್ಣಿಕ ನಡೆಯುವ ಸ್ಥಳದಲ್ಲಿ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಕಾರ್ಣಿಕೋತ್ಸವ ನಡೆಯುವ ನಾಲ್ಕೈದು ದಿನಗಳ ಮುಂಚೆ ಇನ್ನೊಂದು ಬಾರಿ ಸಭೆ ನಡೆಸಿ ಇನ್ನಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Recommended Video

ಟಗರು ಕಣ್ಣಿಗೆ ಬೀಳಲಿಲ್ಲವೇ ಪೊಗರು ಅಸಹ್ಯಗಳು | Oneindia Kannada
ಕುರವತ್ತಿ ಜಾತ್ರೆಯಲ್ಲೂ ಇದೇ ನಿಯಮ

ಕುರವತ್ತಿ ಜಾತ್ರೆಯಲ್ಲೂ ಇದೇ ನಿಯಮ

ಕುರವತ್ತಿಯ ಮಲ್ಲಿಕಾರ್ಜುನಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ರಥೋತ್ಸವ ವಿಷಯದಲ್ಲಿ ಇದೇ ನಿಯಮಗಳನ್ನು ಅನುಸರಿಸಲು ಬಳ್ಳಾರಿ ಜಿಲ್ಲಾಧಿಕಾರಿ ಮಾಲಪಾಟಿ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್, ಜಿ.ಪಂ ಸಿಇಒ ಕೆ.ಆರ್.ನಂದಿನಿ, ಎಡಿಸಿ ಪಿ.ಎಸ್.ಮಂಜುನಾಥ್ ಅವರು ಮಾತನಾಡಿದರು. ಇದೇ ವೇಳೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಪ್ರಕಾಶ, ಹಡಗಲಿ ತಹಶೀಲ್ದಾರ ವಿಶ್ವಜಿತ್ ಮೆಹತಾ, ತಾ.ಪಂ ಇಒ ಸೋಮಶೇಖರ್, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

English summary
Outside devotees, except Mylara villagers, have been prohibited to the annual jatre of Mylaralingheshwara Swamy's in the Hoovinahadagali taluk of Ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X