ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ.28ರ ವರೆಗೆ ಮದ್ಯ ಮಾರಾಟ ನಿಷೇಧ

ಬೆಂಗಳೂರು, ಅಕ್ಟೋಬರ್ 26: ಇದೇ ಅ.28 ರಂದು ವಿಧಾನ ಪರಿಷತ್ ಪದವೀಧರ ಕ್ಷೇತ್ರಗಳ ಚುನಾವಣೆ ನಡೆಯುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ. 28ರ ಬುಧವಾರ ಮತದಾನ ನಡೆಯಲಿದ್ದು, ಹಾಗಾಗಿ ಈ ವ್ಯಾಪ್ತಿಯ ಹಲವು ಜಿಲ್ಲೆಗಳಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಶಾಪ್, ಎಂ.ಎಸ್‌.ಐ.ಎಲ್ ಮಳಿಗೆಗಳು ಬಂದ್​ ಆಗಲಿವೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.

Prohibition Of Sale Of Liquor In Many Districts Of Karnataka Till October 28

ಇಂದು(ಸೋಮವಾರ) ಸಂಜೆ 6 ಗಂಟೆಯಿಂದ ಅ.28ರ ಬುಧವಾರ ಸಂಜೆ 6 ರವರೆಗೆ ಈ ಆದೇಶ ಅನ್ವಯವಾಗಲಿದೆ. ಒಟ್ಟು 48 ಗಂಟೆಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರದ ವಾಪ್ತಿಗೆ ಕಲಬುರಗಿ, ಬಳ್ಳಾರಿ, ಬೀದರ್​, ರಾಯಚೂರು, ಕೊಪ್ಪಳ, ಯಾದಗಿರಿ ಒಳಪಟ್ಟಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿವೆ.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಹೊಂದಿದೆ. ಈ ಜಿಲ್ಲೆಗಳಲ್ಲಿಯೂ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

Recommended Video

      Surya Kumar Yadav ರನ್ನು Australia ತಂಡಕ್ಕೆ ಈಗಲೂ ಆಯ್ಕೆ ಮಾಡಿಲ್ಲ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+