ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು, ನವೆಂಬರ್ 07: ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ.
ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು,
ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications