ಪ್ರಧಾನಿ ನೇತೃತ್ವದ ಯೋಜನೆಗಳು ಗುಜರಾತ್ ಚುನಾವಣಾ ಫಲಿತಾಂಶಕ್ಕೆ ಸಾಕ್ಷಿ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು,ಡಿಸೆಂಬರ್ 8: ನರೇಂದ್ರ ಮೋದಿ ನೇತೃತ್ವದ ಯೋಜನೆಗಳು ಗುಜರಾತ್ ಚುನಾವಣಾ ಫಲಿತಾಂಶಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಬಿಜೆಪಿಯದ್ದು ದಾಖಲೆ ಗೆಲುವು ಆಗಿದೆ. ಮೋದಿ ಜನಪ್ರಿಯತೆ ಎದ್ದು ಕಾಣ್ತಿದೆ ಎಂದರು. ಹಿಮಾಚಲ ಪ್ರದೇಶದಲ್ಲಿ ಪ್ರತೀ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾಗ್ತಿದೆ. ಇನ್ನೂ ಅಧಿಕೃತ ಫಲಿತಾಂಶ ಬಂದಿಲ್ಲ ಎಂದ ಅವರು ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ 140 ಕ್ಕೂ ಹೆಚ್ಚು ಸೀಟು ಗೆಲ್ತೇವೆ ಎಂದರು. ಗುಜರಾತ್ ಚುನಾವಣಾ ಫಲಿತಾಂಶ ನಮಗೆ ಹಾಗೂ ಕಾರ್ಯಕರ್ತರಿಗೆ ಹೆಚ್ಚು ಶಕ್ತಿ ಸಿಕ್ಕಿದೆ ಎಂದು ಹೇಳಿದರು.
ವಿರೋಧ ಪಕ್ಷಗಳು ಇನ್ನಾದರೂ ಅಧಿಕಾರದ ಹಗಲು ಕನಸು ಕಾಣುವುದನ್ನು ಬಿಟ್ಟು ಹಾಗೂ ಮಾನ್ಯ ಪ್ರಧಾನಿಗಳ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ ದೇಶದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ನೀಡಲು ಸಲಹೆ ನೀಡುತ್ತೇನೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹೊರಬರುತ್ತಿರುವ ಚುನಾವಣಾ ಫಲಿತಾಂಶಗಳು ಜಾತಿ ಮತ್ತು ಧರ್ಮ ಆಧಾರಿತ ಏಲ್ಲ ರಾಜಕೀಯ ಬುಡಮೇಲು ಮಾಡಿದೆ. ಈ ಎರಡೂ ರಾಜ್ಯಗಳ ಮತದಾರರು ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯ ಲೆಕ್ಕಾಚಾರಗಳನ್ನು ಮೀರಿ ರಾಜ್ಯದ ಹಾಗೂ ದೇಶದ ಅಭಿವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಇದಕ್ಕಾಗಿ ನಾನು ಆ ರಾಜ್ಯಗಳ ಜನತೆಯನ್ನು ಹಾಗೂ ಮತದಾರರನ್ನು ಅಭಿನಂದಿಸುತ್ತೇನೆ.
ಯಾರೂ ಏನೆ ಮಾತನಾಡಿದರೂ, ರಾವಣ, ಭಸ್ಮಾಸುರ ಎಂಬೆಲ್ಲ ವಿಶ್ಲೇಷಣೆಗಳನ್ನು ಮಾಡಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ವ್ಯಕ್ತಿತ್ವವನ್ನು ಹಾಳುಗೆಡವಬಹುದು ಎಂಬ ಭ್ರಮೆಯಲ್ಲಿದ್ದ ವಿರೋಧ ಪಕ್ಷಗಳಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಮಾತನಾಡಿ, ಅಮೀತ್ ಶಾ, ನರೇಂದ್ರ ಮೋದಿ ತೀರ್ಮಾನ ಮಾಡ್ತಾರೆ ಎಂದರು.

ಯಡಿಯೂರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲ್ಲ ವಿಚಾರ ಎಂಬ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಎಲ್ಲಿಯೂ ಹೋಗಿಲ್ಲ,ಇಲ್ಲೆ ಇದ್ದೇನೆ. ಈಗಾಗಲೇ ರಾಜ್ಯದ ಪ್ರವಾಸ ಮಾಡ್ತಾ ಇದ್ದೇನೆ, ಶಕ್ತಿಮೀರಿ ಸಂಘಟನೆ ಮಾಡ್ತಾ ಇದ್ದೇವೆ. ಹಗಲು ರಾತ್ರಿ ಎನ್ನದೆ ರಾಜ್ಯದ ಪ್ರವಾಸ ಮಾಡ್ತಾ ಇದ್ದೇವೆ, ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದೇವೆ ಎಂದರು.












Click it and Unblock the Notifications