• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಳ್ಳಿನ ಪ್ರಚಾರವೇ ಬಿಜೆಪಿ ಸಂಸ್ಕಾರ; ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿ ಜೆಡಿಎಸ್

|
Google Oneindia Kannada News

ಬೆಂಗಳೂರು, ನವೆಂಬರ್ 11: ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರ್ಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ ಎಂದು ರಾಜ್ಯ ಜೆಡಿಎಸ್ ಘಟಕ ಕಿಡಿಕಾರಿದೆ.

ಈ ಕುರಿತಾಗಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ರಾಜ್ಯ ಜೆಡಿಎಸ್ ಘಟಕ, ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುವ ಸಂಕಲ್ಪ: ಸಿಎಂ ಬೊಮ್ಮಾಯಿನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುವ ಸಂಕಲ್ಪ: ಸಿಎಂ ಬೊಮ್ಮಾಯಿ

ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರ ಮೋದಿ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ ಎಂದು ತಿಳಿಸಿದೆ.

ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ.

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ!! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ ಎಂದು ಜೆಡಿಎಸ್ ವ್ಯಂಗ್ಯವಾಗಿದೆ.

20 ದಿನಗಳ ಹಿಂದೆ ಸಚಿವ ಅಶ್ವಥ್ ನಾರಾಯಣ್ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ. ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ? ಎಂದು ರಾಜ್ ಜೆಡಿಎಸ್ ಘಟಕ ಪ್ರಶ್ನಿಸಿದೆ.

ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು 'ಗೊಬೆಲ್ ಬಿಜೆಪಿ' ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ? ಎಂದು ಕಟ್ಟುವಾಗಿ ಪ್ರಶ್ನಿಸಿದೆ.

ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? 'ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ' 'ಪ್ರತಿಮಾ ಪಥ, ಮೋದಿ ರಥ' ಎನ್ನುವ ಸುದ್ದಿಗಳನ್ನು ಬಿಜೆಪಿ ನೋಡಲಿಲ್ಲವೆ? ಎಂದಿದೆ.

ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದುಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ ಎಂದು ಟ್ವೀಟ್ ಮೂಲಕ ಜೆಡಿಎಸ್ ಕಿಡಿಕಾರಿದೆ.

ನರೇಂದ್ರ ಮೋದಿ
Know all about
ನರೇಂದ್ರ ಮೋದಿ

English summary
Propaganda of lies is BJP's culture, Who dragged Mr. Kempegowda into politics? JDS tweeted that not inviting Deve Gowda to the Kempe Gowda statue dedication program,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X